ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವರ್ಣದ್ವೇಷದ ಹೇಳಿಕೆ: ಕ್ಷಮೆಯಾಚಿಸಿದ ಆರಗ ಜ್ಞಾನೇಂದ್ರ

P

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ವರ್ಣದ್ವೇಷದ ಹೇಳಿಕೆ: ಕ್ಷಮೆಯಾಚಿಸಿದ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ಬಾಯಿಗೆ ಬಂದಂತೆ ಮಾತನಾಡಿ ನಂತರ ಕ್ಷಮೆಯಾಚಿಸುವ ಬಿಜೆಪಿಯ ನಾಯಕರ ಪರಂಪರೆ ಮುಂದುವರೆದಿದ್ದು ತೀರ್ಥಹಳ್ಳಿಯ ಬಿಜೆಪಿ ನಾಯಕ ಆರಗ ಜ್ಞಾನೇಂದ್ರ ತಮ್ಮ ಅಜ್ಞಾನದ ಮಾತುಗಳಿಗಾಗಿ ಕ್ಷಮೆಯಾಚಿಸಿರುವುದಾಗಿ ಸುದ್ದಿಯಾಗಿದೆ.

ಈ ಕರಿತು ಮಾತನಾಡಿರುವ ಅವರು “ನನ್ನನ್ನು ಯಾರೂ ತಪ್ಪು ತಿಳಿಯಬಾರದು. ನಾನು ಮಲೆನಾಡಿನ ಪಾಲಿಗೆ ಮರಣ ಶಾಸನವಾಗಿರುವಕಸ್ತೂರಿ ರಂಗನ್‌ ವರದಿಯನ್ನು ಟೀಕಿಸುತ್ತಾ, ಅರಣ್ಯ ಸಚಿವ ಈಶ್ವರ್‌ ಖಂಡಿಸುವ ಭರದಲ್ಲಿ ಖರ್ಗೆಯವರ ಹೆಸರನ್ನು ಹೇಳಿದೆ. ಈ ಕುರಿತು ನಡೆದ ತಪ್ಪಿಗೆ ನಾನು ಖರ್ಗೆಯವರ ಕ್ಷಮೆಯಾಚಿಸುತ್ತೇನೆ” ಎಂದಿದ್ದಾರೆ.

AICC ಅಧ್ಯಕ್ಷರಾ ಖರ್ಗೆಯವರ ಕುರಿತು ಕೀಳು ಅಭಿರುಚಿಯ ಹೇಳಿಕೆ ಕೊಟ್ಟಿದ್ದ ಆರಗ ನಿನ್ನೆಯಿಂದ ಸಾಕಷ್ಟು ಟೀಕೆಗೆ ಒಳಗಾಗಿದ್ದರು. ಕಾಂಗ್ರಸ್‌ ಕೂಡಾ ನೇರ ವಾಗ್ದಾಳಿ ಮಾಡಿತ್ತು. ಕಾಂಗ್ರೆಸ್‌ ನಾಯಕ ಆರಗ ಜ್ಞಾನೇಂದ್ರರನ್ನು ನಿಮ್ಹಾನ್ಸ್‌ಗೆ ಸೇರಿಸಬೇಕು ಎಂದಿದ್ದರು.

ವೇದಿಕೆಯ ಮೇಲೆ ಬಾಯಿಗೆ ಬಂದಂತೆ ಮಾತನಾಡುವ ಚಾಳಿ ಜ್ಞಾನೇಂದ್ರರಿಗೆ ಹೊಸದೇನೂ ಅಲ್ಲ. ಈ ಹಿಂದೆ ಕರಾವಳಿಯ ದೈವಗಳ ಕುರಿತು ಕೆಟ್ಟದಾಗಿ ಮಾತನಾಡಿ ಎಲ್ಲರಿಂದ ಟೀಕೆಗೆ ಒಳಗಾಗಿದ್ದರು.

ಈಗ ಒಬ್ಬ ಹಿರಿಯ ರಾಜಕಾರಣಿಯಾಗಿ ಇನ್ನೊಬ್ಬರ ಮೈಬಣ್ಣದ ಕುರಿತು ಹೀನಮಟ್ಟದ ಹೇಳಿಕೆ ನೀಡಿ ಎಲ್ಲರಿಂದ ಟೀಕೆ ಮಾಡಿಸಿಕೊಂಡು ಎಂದಿನಂತೆ ತನ್ನ ಪಕ್ಷದ ಇತರ ನಾಯಕರಂತೆ ಕ್ಷಮೆ ಯಾಚಿಸಿದ್ದಾರೆ.

ಇಂತಹುದೇ ಒಂದು ಪ್ರಕರಣದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ‘ಕಾಗೆ’ಗೆ ಹೋಲಿಸಿ ವರ್ಣ ಅವಹೇಳನ ಮಾಡಿದ್ದ ಪ್ರಕರಣವನ್ನು ಪೀಪಲ್ ಮೀಡಿಯಾ ವರದಿ ಮಾಡಿತ್ತು. ಆ ಪ್ರಕರಣದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಸುಮೊಟೊ ಕೇಸ್ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದನ್ನು ಸ್ಮರಿಸಬಹುದು.‌

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version