ವಯನಾಡ್ ಕ್ಷೇತ್ರ ಬಿಟ್ಟುಕೊಟ್ಟ ರಾಹುಲ್ ಗಾಂಧಿ ; ಪ್ರಿಯಾಂಕಾ ಗಾಂಧಿ ಸ್ಪರ್ಧೆ ಬಹುತೇಕ ಖಚಿತ
ಲಿಂಕ್ ನಕಲಿಸಲಾಗಿದೆ ✓
ಲೋಕಸಭಾ ಚುನಾವಣೆಲ್ಲಿ 2 ಕ್ಷೇತ್ರಗಳಲ್ಲಿ ಪ್ರತಿನಿಧಿಸಿದ್ದ ರಾಹುಲ್ ಗಾಂಧಿ ಈಗ ತಾವು ಪ್ರತಿನಿಧಿಸುವ ಲೋಕಸಭೆ ಸ್ಥಾನವನ್ನು ಸೋಮವಾರ ಅಂತಿಮವಾಗಿ ನಿರ್ಧರಿಸಿದ್ದಾರೆ. ಅದರಂತೆ ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರದ ಮೂಲಕ ತಮ್ಮ ಸದಸ್ಯತ್ವ ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.
ಕಾಂಗ್ರೆಸ್ ಉನ್ನತ ನಾಯಕತ್ವವು ಸೋಮವಾರ ಖರ್ಗೆ ಅವರ ನಿವಾಸದಲ್ಲಿ ಚರ್ಚೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಈ ಮೂಲಕ ಕೇರಳದ ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟು, ಉತ್ತರ ಪ್ರದೇಶದ ರಾಯ್ ಬರೇಲಿ ಉಳಿಸಿಕೊಂಡಿದ್ದಾರೆ.
ಈ ಹಿನ್ನಲೆಯಲ್ಲಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಲಿದ್ದು, ಬಹುತೇಕ ಪ್ರಿಯಾಂಕಾ ಗಾಂಧಿ ಈ ಕ್ಷೇತ್ರದಿಂದ ಚುನಾವಣೆಗೆ ಇಳಿಯೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬಗ್ಗೆ ಸ್ಪಷ್ಟವಾಗಿ ಸ್ಪರ್ಧೆಯ ಬಗ್ಗೆ ಮಾಹಿತಿ ಸಿಗದಿದ್ದರೂ ಪಕ್ಷದ ಉನ್ನತ ಮೂಲಗಳ ಪ್ರಕಾರ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಸ್ಥಳೀಯ ನಾಯಕರು ಉತ್ಸುಕತೆ ತೋರಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ