ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲೋಕಸಭೆಗೆ ಸ್ಪರ್ಧಿಸಲು ಸಿದ್ಧ : ಯತೀಂದ್ರ ಸಿದ್ದರಾಮಯ್ಯ

P

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಲೋಕಸಭೆಗೆ ಸ್ಪರ್ಧಿಸಲು ಸಿದ್ಧ : ಯತೀಂದ್ರ ಸಿದ್ದರಾಮಯ್ಯ

ಪಕ್ಷದ ಹೈಕಮಾಂಡ್ ಮತ್ತು ವರಿಷ್ಠರು ಸೂಚಿಸಿದರೆ ಲೋಕಸಭೆಗೆ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಆ ಮೂಲಕ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಇಂಗಿತವನ್ನು ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಂದೆ ಸಿದ್ದರಾಮಯ್ಯನವರಿಗೆ ತಮ್ಮ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿದ ನಂತರ ರಾಜಕೀಯ ವಲಯದಲ್ಲಿ ಯತೀಂದ್ರ ಅವರ ರಾಜಕೀಯ ಭವಿಷ್ಯದ ಬಗ್ಗೆ, ಪಕ್ಷದಲ್ಲಿನ ಅವರ ಸ್ಥಾನಮಾನದ ಬಗ್ಗೆ ಹೆಚ್ಚು ಚರ್ಚೆಗಳು ಎದ್ದಿದ್ದವು. ಎಲ್ಲೋ ಒಂದು ಕಡೆ ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಎಂಬ ಮಾತುಗಳೂ ಸಹ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಸಭೆಗೆ ಸ್ಪರ್ಧಿಸಲು ರೆಡಿ ಇದ್ದೇನೆ, ಅದೂ ವರಿಷ್ಠರು ಸೂಚಿಸಿದರೆ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವ ಕಾರಣ ವರುಣಾ ಕ್ಷೇತ್ರದ ಕಡೆಗೆ ಗಮನಿಸಲು ಸಮಯ ಆಗುತ್ತಿಲ್ಲ. ಹಾಗಾಗಿ ಕ್ಷೇತ್ರದಲ್ಲಿ ಆಗಬೇಕಾದ ಬಹುತೇಕ ಕಾರ್ಯಗಳನ್ನು ನಾನೇ ನಿಂತು ನಿಭಾಯಿಸುತ್ತಿದ್ದೇನೆ. ಕ್ಷೇತ್ರದ ಜನರ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದ್ದೇನೆ. ಆದರೆ ಸಾಂವಿಧಾನಿಕವಾಗಿ ಇರಬೇಕಾದ ಸ್ಥಾನಮಾನ ನನಗೆ ಇಲ್ಲದ ಕಾರಣ ಎಲ್ಲದಕ್ಕೂ ಮುಂದೆ ನಿಲ್ಲಲು ಹಲವು ಕಾನೂನಿನ ತೊಡಕಿದೆ. ಹಾಗಾಗಿ ಯಾವುದಾದರೊಂದು ಸರ್ಕಾರಿ ಸ್ಥಾನಮಾನ ಸಿಕ್ಕರೂ ವರುಣಾ ಮಾತ್ರವಲ್ಲದೆ ಬೇರೆ ಅಗತ್ಯವಿರುವ ಕ್ಷೇತ್ರಗಳಲ್ಲೂ ಉತ್ತಮವಾಗಿ ಕೆಲಸ ನಿರ್ವಹಿಸುವ ಬಗ್ಗೆ ಹೆಚ್ಚಿನ ಗಮನ ವಹಿಸುತ್ತೇನೆ ಎಂದು ಹೇಳಿದ್ದಾರೆ.

ವಿಶೇಷವಾಗಿ ಈ ಬಾರಿ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲೇಬೇಕಿದೆ. ಆ ನಿಟ್ಟಿನಲ್ಲಿ ಮುಂದಿನ ಕೆಲಸ ಮಾಡಲಾಗುತ್ತಿದೆ. ಪಕ್ಷದ ವರಿಷ್ಠರು ಸೂಚಿಸಿದರೆ ಲೋಕಸಭೆಯಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version