ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಧರ್ಮಾಧಾರಿತ ರಾಜಕೀಯ ದಾಳಿಗಳು ಹಾಗೂ ಸಂಘಟಿತ ಕೋಮು ಹಿಂಸಾಚಾರಗಳು ಕರಾವಳಿಯಲ್ಲಿ ಹೆಚ್ಚುತ್ತಿವೆ – ಮುನೀರ್ ಕಾಟಿಪಳ್ಳ

ಧರ್ಮಾಧಾರಿತ ರಾಜಕೀಯ ದಾಳಿಗಳು ಹಾಗೂ ಸಂಘಟಿತ ಕೋಮು ಹಿಂಸಾಚಾರಗಳು ಕರಾವಳಿಯಲ್ಲಿ ಹೆಚ್ಚುತ್ತಿವೆ – ಮುನೀರ್ ಕಾಟಿಪಳ್ಳ

ಕರಾವಳಿಯಲ್ಲಿ ಕೋಮು ಹಿಂಸಾಚಾರ – ಹಾಸನದಲ್ಲಿ ಚಿಂತನಾ ಸಭೆ ಹಾಸನ,

ಹಾಸನ : ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಇತ್ತೀಚೆಗೆ ಏರಿಕೆಯಾದ ಕೋಮು ಹಿಂಸಾಚಾರಗಳ ಬಗ್ಗೆ ಆತಂಕ ವ್ಯಕ್ತಪಡಿಸಿ, ಸೌಹಾರ್ದ ಕರ್ನಾಟಕ ಸಂಸ್ಥೆಯ ಹಾಸನ ಜಿಲ್ಲಾ ಘಟಕದ ವತಿಯಿಂದ ನಗರದ ಆರ್.ಸಿ. ರಸ್ತೆಯ ಮಿಷನ್ ಆಸ್ಪತ್ರೆ ಎದುರಿನ ಶ್ರಮ ಕಚೇರಿಯಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು.ಸಭೆಯಲ್ಲಿ ಜನಪರ ಹೋರಾಟಗಾರ ಹಾಗೂ ಸಿಪಿಐ(ಎಂ) ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ,
“ಧರ್ಮಾಧಾರಿತ ರಾಜಕೀಯ ದಾಳಿಗಳು ಹಾಗೂ ಸಂಘಟಿತ ಕೋಮು ಹಿಂಸಾಚಾರಗಳು ಕರಾವಳಿಯಲ್ಲಿ ಭಯದ ವಾತಾವರಣವನ್ನು ರೂಪಿಸುತ್ತಿವೆ. ಇದು ದೇಶದ ಜಾತ್ಯತೀತ ಸೌಭ್ರಾತೃತ್ವದ ಮೌಲ್ಯಗಳಿಗೆ ಕಳಂಕ ತರುವ ಅಪಾಯವಾಗಿದೆ.”ಕರಾವಳಿಯಲ್ಲಿ ನಡೆಯುತ್ತಿರುವ ಅಶಾಂತಿಯ ವಾತಾವರಣವು ಅಲ್ಲಿಗೆ ಸೀಮಿತವಾದ ಸಮಸ್ಯೆಯಲ್ಲ; ಇದೊಂದು ದೇಶದ ಸಮಸ್ಯೆಯಾಗಿದೆ. ಇಲ್ಲಿನ ಶಾಂತಿಯ ವಾತಾವರಣಕ್ಕೆ ಎಲ್ಲರೂ ಸಹಕರಿಸಬೇಕು ಹಾಗೂ ಇಂತಹ ವಾತಾವರಣ ಎಲ್ಲಿಯೂ ಹಾಳಾಗದಂತೆ ಕಾಪಾಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ ಎಂದರು.

ಕರಾವಳಿಯಲ್ಲಿ ಕೆಲವು ವ್ಯಕ್ತಿಗಳು ಧರ್ಮದ ದ್ವೇಷಕ್ಕೆ ಮತ್ತು ಹಿಂಸಾಚಾರಕ್ಕೆ ಪ್ರೇರಣೆ ನೀಡುತ್ತಿದ್ದಾರೆ. ಬಹಳಷ್ಟು ಜನ ಶಾಂತಿಯನ್ನು ಬಯಸುತ್ತಾರೆ, ಆದರೆ ಕಾರ್ಯರೂಪಕ್ಕೆ ತರುವಲ್ಲಿ ಕೋಮುವಾದಿಗಳು ಮುಂದಿರುವುದರಿಂದ ಶಾಂತಿಯ ಸಂದೇಶವನ್ನು ಸಾರುವ ವ್ಯಕ್ತಿಗಳ ಮಾತು ಕಾರ್ಯಕರ್ತವಾಗುತ್ತಿಲ್ಲ. ಅದಕ್ಕಾಗಿ ನಾವು ಬಹಳಷ್ಟು ಕೆಲಸ ಮಾಡುತ್ತಿದ್ದೇವೆ.
ಕರಾವಳಿಯಲ್ಲಿ ಶಾಂತಿ ನೆಲೆಸಲಿ, ನಾವು ಸಹ ನೆಮ್ಮದಿಯಿಂದ ಬದುಕುವ ವಾತಾವರಣ ಮೂಡಲಿ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಜನಪರ ಹೋರಾಟಗಾರ ಧರ್ಮೇಶ್ ಮಾತನಾಡಿ,
“ಕರಾವಳಿಯಲ್ಲಿ ನೆಮ್ಮದಿ ಮರುಸ್ಥಾಪನೆಗೆ ಪ್ರಯತ್ನಿಸುವ ಜವಾಬ್ದಾರಿ ಅಲ್ಲಿನವರಷ್ಟೇ ಅಲ್ಲ; ಅದು ದೇಶದ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ. ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳ ಪ್ರತಿನಿಧಿಗಳು ಕೈಜೋಡಿಸಿ ಜಾಗೃತಿ ಮೂಡಿಸಬೇಕು” ಎಂದು ಹೇಳಿದರು. ಹಿರಿಯ ಪತ್ರಕರ್ತ ಆರ್.ಪಿ. ವೆಂಕಟೇಶಮೂರ್ತಿ ಮಾತನಾಡಿ, “ಸರ್ವಧರ್ಮೀಯರು ರಚನಾತ್ಮಕ ಕೆಲಸಗಳಲ್ಲಿ ತೊಡಗಬೇಕು. ಪರಿಸರ ಸಂರಕ್ಷಣೆಯಂತಹ ಪ್ರಗತಿಪರ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ಕರಾವಳಿಯಲ್ಲಿ ಕೈ ಕೈ ಜೋಡಿಸಿ ಸಮಾಜವನ್ನು ಕಟ್ಟುವ ಕಾರ್ಯವಾಗಬೇಕು ಎಂದರು”ಯುವಕರು ಕೋಮುವಾದಕ್ಕೆ ಬಲಿಯಾಗಬಾರದು. ಧರ್ಮವನ್ನು ಬೇರ್ಪಡಿಸಿ, ಧರ್ಮದ ಹೆಸರಿನಲ್ಲಿ ಯಾರು ಸತ್ತರೂ ಅದು ನಮ್ಮ ಮಕ್ಕಳ ಸಾವೇ ಆಗಿದೆ. ಶಾಂತಿ ಕದಡುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು” ಎಂದರು. ಸಭೆಯಲ್ಲಿ ಧರ್ಮೇಶ್, ಮುನೀರ್ ಕಾಟಿಪಳ್ಳ, ರೂಪ ಹಾಸನ್, ಆರ್.ಪಿ ವೆಂಕಟೇಶ್ ಮೂರ್ತಿ, ನವೀನ್ ಕುಮಾರ್, ನಾಗರಾಜ್ ಹೆತ್ತೂರು, ಪೃಥ್ವಿ ಎಂ.ಜಿ, ಮಂಜುನಾಥ್ ತೌಫೀಕ್ ಅಹಮದ್, ಪೃಥ್ವಿ, ಸಮೀರ್, ಮಲ್ನಾಡ್ ಮೆಹಬೂಬ್, ಮುಬಶೀರ್ ಅಹಮದ್, ಮಹೇಶ್, ಅರವಿಂದ್, ರಮೇಶ್, ಪ್ರೇಮದೇಶ್ ಹಾಗೂ ಹಲವರು ಭಾಗವಹಿಸಿದ್ದರು..

ವಿಷಯಗಳು: #news #peepal
ರ

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version