ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಹಾರಾಷ್ಟ್ರ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಆರೋಪ ; ಪ್ರಮಾಣ ವಚನ ಸ್ವೀಕಾರಕ್ಕೆ ವಿಪಕ್ಷ ನಾಯಕರ ಹಿಂದೇಟು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ಮೀಡಿಯಾ

• 1 ನಿಮಿಷದ ಓದು

ಮಹಾರಾಷ್ಟ್ರ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಆರೋಪ ; ಪ್ರಮಾಣ ವಚನ ಸ್ವೀಕಾರಕ್ಕೆ ವಿಪಕ್ಷ ನಾಯಕರ ಹಿಂದೇಟು

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಓಟಿಂಗ್ ಮಷಿನ್ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಮಹಾ ವಿಕಾಸ ಅಘಾಡಿ (MVA) ಸದಸ್ಯರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲು ಶನಿವಾರ ನಿರಾಕರಿಸಿದ್ದಾರೆ. ಮಹಾರಾಷ್ಟ್ರದ ಅಸೆಂಬ್ಲಿಯಲ್ಲಿ ಇಂದು ನಡೆದ ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.

ಮೂರು ದಿನಗಳ ವಿಶೇಷ ಅಧಿವೇಶನ ಶನಿವಾರದಿಂದ ಆರಂಭಗೊಂಡಿದೆ. ಸದನವು ಬೆಳಿಗ್ಗೆ 11ಕ್ಕೆ ಆರಂಭಗೊಂಡಿತು. ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹಾಗೂ ಉಪಮುಖ್ಯಮಂತ್ರಿಗಳಾದ ಏಕನಾಥ ಶಿಂದೆ ಹಾಗೂ ಅಜಿತ್ ಪವಾರ್ ಸೇರಿದಂತೆ ಆಡಳಿತಾರೂಢ ಪಕ್ಷದ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.

ಈ ನಡುವೆ MVA ಒಕ್ಕೂಟದ ಸದಸ್ಯ ಪಕ್ಷಗಳಾದ ಕಾಂಗ್ರೆಸ್, ಶಿವಸೇನಾ (ಯುಬಿಟಿ) ಹಾಗೂ ಎನ್‌ಸಿಪಿ (ಎಸ್‌ಪಿ) ಪಕ್ಷಗಳ ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿಲ್ಲ.

ವಿಧಾನಭವನದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಸೇನಾ (ಯುಬಿಟಿ) ಮುಖಂಡ ಆದಿತ್ಯ ಠಾಕ್ರೆ, ‘ಬಹುಮತ ಪಡೆದು ಅಧಿಕಾರಕ್ಕೇರಿದ ಪಕ್ಷದಲ್ಲಿ ಸಂಭ್ರಮ ಮನೆ ಮಾಡಿದೆ. ಇವರಿಗೆ ಸಿಕ್ಕ ಆ ಅಭೂತಪೂರ್ವ ಗೆಲುವು ಜನರು ನೀಡಿದ್ದೋ ಅಥವಾ ಇವಿಎಂ ಮತ್ತು ಚುನಾವಣಾ ಆಯೋಗ ನೀಡಿದ್ದೋ ಎಂಬ ಪ್ರಶ್ನೆ ಉದ್ಭವಿಸಿದೆ ಎಂದರು.

‘ಈ ಗೆಲುವಿನ ಕುರಿತು ಜನರ ಮನಸ್ಸಿನಲ್ಲಿ ಅನುಮಾನಗಳಿವೆ. ಹೀಗಾಗಿ ಹಲವು ಕಡೆಗಳಲ್ಲಿ ಜನರೇ ಮರು ಮತದಾನ ನಡೆಸಲು ಒತ್ತಾಯಿಸಿದ್ದಾರೆ. ಆದರೆ ಮತಯಂತ್ರ ತ್ಯಜಿಸಿ ಮತ ಚಲಾಯಿಸಿ ಎಂದು ಹೇಳಿದ್ದಾರೆ. ಹೀಗಾಗಿ ನಾವು ಇಂದು ಪ್ರಮಾಣವಚನ ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು