ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಕಲಬುರಗಿ: ನರೇಂದ್ರ ಮೋದಿ ಸರ್ಕಾರವು ಚುನಾವಣಾ ಆಯೋಗದ(EC) ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಚುನಾವಣಾ ಆಯುಕ್ತರಿಗೆ ಕಾನೂನು ರಕ್ಷಣೆ(immunity) ನೀಡುವ 2023ರ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಬುಧವಾರ ಆಗ್ರಹಿಸಿದ್ದಾರೆ. ಅಲ್ಲದೆ, ಮುಖ್ಯ ಚುನಾವಣಾ ಆಯುಕ್ತ(CEC) ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಿಬೇಕು ಹಾಗೂ ಮತ್ತೆ ಮತಪತ್ರ (ballot papers) ಪದ್ಧತಿಗೆ ಮರಳಬೇಕು ಎಂದು ಒತ್ತಾಯಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, “ನೀವು ಸಂವಿಧಾನಕ್ಕಿಂತ ದೊಡ್ಡವರೇ?” ಎಂದು ಪ್ರಶ್ನಿಸಿದರು ಮತ್ತು ಸರ್ಕಾರವು ಚುನಾವಣಾ ಆಯುಕ್ತರನ್ನು ಹೊಣೆಗಾರಿಕೆಯಿಂದ ರಕ್ಷಿಸುತ್ತಿದೆ ಎಂದು ಆರೋಪಿಸಿದರು.

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ(ನೇಮಕಾತಿ, ಸೇವೆಯ ಷರತ್ತುಗಳು ಮತ್ತು ಅಧಿಕಾರಾವಧಿ) ಕಾಯ್ದೆ, 2023′ ಅನ್ನು ಉಲ್ಲೇಖಿಸಿದ ಖರ್ಗೆ, “ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡಲು ನೀವು ತಂದಿರುವ ಕಾನೂನನ್ನು ರದ್ದುಗೊಳಿಸಿ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ಈ ಕಾಯ್ದೆಯು, ಚುನಾವಣಾ ಆಯುಕ್ತರು ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಾಗ ಕೈಗೊಂಡ ಕ್ರಮಗಳು ಅಥವಾ ಆಡಿದ ಮಾತುಗಳಿಗೆ ಸಂಬಂಧಿಸಿದಂತೆ, ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆಗಳಿಂದ ಅವರಿಗೆ ರಕ್ಷಣೆ ನೀಡುತ್ತದೆ.

ಚುನಾವಣೆಗಳು ನಿಷ್ಪಕ್ಷಪಾತವಾಗಿ ಮತ್ತು ನ್ಯಾಯಯುತವಾಗಿ ನಡೆದರೆ, ಯಾರೇ ಗೆಲ್ಲಲಿ, ನಮಗೆ ಅಭ್ಯಂತರವಿಲ್ಲ. ಕಾಂಗ್ರೆಸ್ ಪಕ್ಷವೇ ಗೆಲ್ಲಬೇಕು ಅಥವಾ ನಿರ್ದಿಷ್ಟ ಪಕ್ಷವೊಂದೇ ಗೆಲ್ಲಬೇಕು ಎಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ, ಎಂದು ಅವರು ಹೇಳಿದರು.

ಯಾವುದೇ ವ್ಯಕ್ತಿ ಅಥವಾ ಪಕ್ಷಕ್ಕಾಗಿ ಅಲ್ಲ, ಬದಲಾಗಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತ್ತು ಸಾಂವಿಧಾನಿಕ ಸಂಸ್ಥೆಗಳ ಘನತೆಯನ್ನು ಕಾಪಾಡಲು ವಿರೋಧ ಪಕ್ಷಗಳು ಹೋರಾಡುತ್ತಿವೆ ಎಂದು ಅವರು ಪ್ರತಿಪಾದಿಸಿದರು.

ಪ್ರಧಾನಿ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರು ಬರೆದ ಪತ್ರಗಳಿಗೆ ಅವರು ನೇರವಾಗಿ ಉತ್ತರಿಸದೆ, ಬೇರೆಯವರ ಮೂಲಕ ಉತ್ತರ ಕೊಡಿಸುತ್ತಿದ್ದಾರೆ ಎಂದು ಖರ್ಗೆ ಟೀಕಿಸಿದರು.

ಮೋದಿ ಅವರಿಗೆ ತಾವು ಬರೆದ ಪತ್ರಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೀಡಿರುವ ಪ್ರತಿಕ್ರಿಯೆಯನ್ನು ಉಲ್ಲೇಖಿಸಿದ ಖರ್ಗೆ, ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳದ ಹೊರತು, ಇಂತಹ ಉತ್ತರಗಳಿಂದ ಸಮಸ್ಯೆಗಳು ಬಗೆಹರಿಯುವುದಿಲ್ಲ ಎಂದು ಅವರು ಹೇಳಿದರು.

ನೀವು ಏಕಪಕ್ಷೀಯವಾಗಿ ಅಥವಾ ನಿರಂಕುಶವಾಗಿ ವರ್ತಿಸಲು ನಿರ್ಧರಿಸಿದ್ದರೆ, ಈ ದೇಶದ ಜನ ಸುಮ್ಮನೆ ಕೂರುವುದಿಲ್ಲ. ಅವರು ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂದು ಅವರು ಖರ್ಗೆ ಎಚ್ಚರಿಸಿದರು.

ವಿಷಯಗಳು: #news
ರ

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version