ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸ್ಯಾಂಡಲ್‌ವುಡ್‌ನ ಹಿರಿಯ ಹಾಸ್ಯ ನಟ ಎಂ.ಎಸ್. ಉಮೇಶ್ ನಿಧನ

PPeepal Media Desk

Peepal Media Desk • ದೇಶ, ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಸ್ಯಾಂಡಲ್‌ವುಡ್‌ನ ಹಿರಿಯ ಹಾಸ್ಯ ನಟ ಎಂ.ಎಸ್. ಉಮೇಶ್ ನಿಧನ

ಬೆಂಗಳೂರು, ನ.30: ಕನ್ನಡ ಚಲನಚಿತ್ರ ರಂಗದ ಹಿರಿಯ ಹಾಸ್ಯನಟ ಎಂ.ಎಸ್. ಉಮೇಶ್ ಅವರು ಇಂದು ಬೆಳಗ್ಗೆ ಕಿದ್ವಾಯಿ ಮೆಮೋರಿಯಲ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು. 80 ವರ್ಷ ವಯಸ್ಸಿನ ಉಮೇಶ್ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.

ಆರು ದಶಕಗಳ ಕಾಲ ಕನ್ನಡ ಸಿನಿಮಾ ಮತ್ತು ನಾಟಕ ರಂಗದಲ್ಲಿ ಸಕ್ರಿಯರಾಗಿದ್ದ ಉಮೇಶ್, 350ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿಶಿಷ್ಟ ಹಾಸ್ಯ ಪಾತ್ರಗಳನ್ನು ಅಭಿನಯಿಸಿ ಜನಪ್ರಿಯರಾದರು.

1990ರಲ್ಲಿ ಬಿಡುಗಡೆಯಾದ ‘ಗೋಲ್ಮಾಲ್ ರಾಧಾಕೃಷ್ಣ’ ಚಿತ್ರದಲ್ಲಿ ‘ಸೀತಾಪತಿ’ ಪಾತ್ರದ ಮೂಲಕ ಅವರ “ಅಪಾರ್ಥ ಮಾಡ್ಕೊಂಡ್ಬಿಟ್ರೋ ಎನೋ” ಡೈಲಾಗ್ ಜನಸಾಮಾನ್ಯರಲ್ಲಿ ಅಚ್ಚಳಿಯದೆ ಉಳಿದಿದೆ. ಬಾಲ್ಯದಿಂದಲೇ ಗುಬ್ಬಿ ವೀರಣ್ಣ, ಕೆ.ಹಿರಣ್ಣಯ್ಯ ಮತ್ತು ಎಂ.ಸಿ.ಮಹಾದೇವ ಸ್ವಾಮಿಯವರ ಕಂಪನಿಗಳಲ್ಲಿ ನಟನೆ ಕಲಿತು, ‘ಮಕ್ಕಳ ರಾಜ್ಯ’ ಚಿತ್ರದೊಂದಿಗೆ ಸಿನಿಮಾ ಜಗತ್ತಿಗೆ ಪಾದಾರ್ಪಣೆ ಮಾಡಿದರು.

ಪಿಯಾನೋ, ಹಾರ್ಮೋನಿಯಂ ವಾದನೆಯೊಂದಿಗೆ ಗಾಯನ ಕಲೆಯಲ್ಲೂ ಪರಿಣತರಾಗಿದ್ದ ಉಮೇಶ್, ‘ಕಥಾ ಸಂಗಮ’ ಚಿತ್ರಕ್ಕೆ ಉತ್ತಮ ಪೋಷಕ ನಟ ಪ್ರಶಸ್ತಿ, ನಾಟಕ ಅಕಾಡಮಿ ಪ್ರಶಸ್ತಿ, ಮಹಾನಗರ ಪಾಲಿಕೆ ಪ್ರಶಸ್ತಿ ಸೇರಿದಂತೆ ಅನೇಕ ಗೌರವಕ್ಕೆ ಪಾತ್ರರಾಗಿದ್ದಾರೆ. ಪತ್ರಿಕೆಗಳಲ್ಲಿ ಅಂಕಣ ಬರಹಗಾರರಾಗಿ, ‘ಅಮ್ಮಾವರ ಆಜ್ಞೆ’, ‘ನಮ್ಮೂರಲ್ಲೊಂದು ನಾಟಕ’ಗಳಂತಹ ನಾಟಕಗಳನ್ನು ರಚಿಸಿ ನಿರ್ದೇಶಿಸಿದ್ದಾರೆ. ಐದು ದಶಕಗಳ ಕೊಡುಗೆಯನ್ನು ಗುರುತಿಸಿ ಕನ್ನಡ ಚಿತ್ರರಂಗ ಕೂಡಾ ಅವರನ್ನು ಗೌರವಿಸಿದೆ.

ಮೈಸೂರಿನಲ್ಲಿ ಏಪ್ರಿಲ್ 22, 1945ರಲ್ಲಿ ಎ.ಎಲ್. ಶ್ರೀಕಂಠಯ್ಯ ಮತ್ತು ನಂಜಮ್ಮದ ಮಗನಾಗಿ ಜನಿಸಿದ ಉಮೇಶ್ ಅವರ ನಿಧನವು ಕನ್ನಡ ಚಿತ್ರರಂಗಕ್ಕಾದ ದೊಡ್ಡ ನಷ್ಟ ಎಂದು ಚಿತ್ರರಂಗದ ಹಿರಿ ಕಿರಿಯರು ಕಂಬನಿ ಮಿಡಿದಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು