ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ನ್ಯಾಯಕ್ಕಾಗಿ ಆಗ್ರಹಿಸಿ ಹಾಸನದಲ್ಲಿ ಪ್ರತಿಭಟನೆ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ನ್ಯಾಯಕ್ಕಾಗಿ ಆಗ್ರಹಿಸಿ ಹಾಸನದಲ್ಲಿ ಪ್ರತಿಭಟನೆ

ಹಾಸನ : ಧರ್ಮಸ್ಥಳದಲ್ಲಿ ಸೌಜನ್ಯ ಕೊಲೆಯಾಗಿ ಅಕ್ಟೋಬರ್ 09 ರಂದು 13 ವರ್ಷಗಳು ಸಂದುತ್ತಿದ್ದು, ಇನ್ನೂ ನೈಜ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಮತ್ತು ಧರ್ಮಸ್ಥಳದಲ್ಲಿ ದಾಖಲಾದ  ನೂರಾರು ಅಸಹಜ ಸಾವು, ಕೊಲೆ, ಅತ್ಯಾಚಾರ, ಭೂ ಹಗರಣ, ದಲಿತರಿಗೆ ಸೇರಿದ ಭೂಮಿಯ ಕಬಳಿಕೆ, ಬಡ್ಡಿ ದಂಧೆಯ ಸಂತ್ರಸ್ತರಿಗೆ ನ್ಯಾಯ ದೊರಕದ ಹಿನ್ನಲೆಯಲ್ಲಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯು ರಾಜ್ಯವ್ಯಾಪಿ ‘ನ್ಯಾಯಕ್ಕಾಗಿ ಜನಾಗ್ರಹ’ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು ಇದರ ಭಾಗವಾಗಿ ಹಾಸನದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಹವೀರ ಸರ್ಕಲ್‌ ಬಳಿ ಪ್ರತಿಭಟನಾ ಧರಣಿಯನ್ನು ನಡೆಸಲಾಯಿತು.

2012 ಅಕ್ಟೋಬರ್ 09 ರಂದು ಧರ್ಮಸ್ಥಳದ ಪಾಂಗಳ ನಿವಾಸಿಯಾಗಿರುವ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿ 17 ವರ್ಷ ಪ್ರಾಯದ ಸೌಜನ್ಯ ಅತ್ಯಾಚಾರ-ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಧರ್ಮಸ್ಥಳಕ್ಕೆ ಸಂಬಂಧಪಟ್ಟ ಮೂವರು ವ್ಯಕ್ತಿಗಳು ಸಂತೋಷ್ ರಾವ್ ಎಂಬ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಪೊಲೀಸರಿಗೆ ಹಿಡಿದುಕೊಟ್ಟ ಹಿನ್ನಲೆಯಲ್ಲಿ ಪೊಲೀಸರು ಸಂತೋಷ್ ರಾವ್ ವಿರುದ್ಧ ಎಫ್​ಐಆರ್ ದಾಖಲಿಸಿದ್ದರು. ಆ ಬಳಿಕ ನೈಜ ಆರೋಪಿಗಳನ್ನು ಬಂಧಿಸಲು ನಡೆದ ತೀವ್ರ ಹೋರಾಟದ ಹಿನ್ನಲೆಯಲ್ಲಿ ಅಂದಿನ ಬಿಜೆಪಿ ಸರ್ಕಾರವು ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಬಳಿಕ 2013 ರಲ್ಲಿ ಸಿದ್ದರಾಮಯ್ಯ ಸರ್ಕಾರವು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ಕೂಡಾ ಸಂತೋಷ್ ರಾವ್ ವಿರುದ್ಧ ಚಾರ್ಜ್​ಶೀಟ್ ಹಾಕಿತ್ತು. ಆದರೆ ವಿಶೇಷ ಕೋರ್ಟ್​ ವಿಚಾರಣೆ ನಡೆಸಿ ‘ಪೊಲೀಸರು ನೈಜ ಆರೋಪಿಯನ್ನು ಬಂಧಿಸಿಲ್ಲ. ಸಂತೋಷ್​ ರಾವ್​ ಗೂ ಘಟನೆಗೂ ಸಂಬಂಧವೇ ಇಲ್ಲ. ವೈಧ್ಯಕೀಯ ವಿಧಿವಿಜ್ಞಾನ ತನಿಖೆಯೇ ಸೂಕ್ತ ರೀತಿಯಲ್ಲಿ ನಡೆದಿಲ್ಲ’ ಎಂಬ ಅರ್ಥದ ಉಲ್ಲೇಖವನ್ನು ನೀಡಿ ಸಂತೋಷ್​ ರಾವ್​ ರನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತು. ಇದೀಗ ಸೌಜನ್ಯ ಅತ್ಯಾಚಾರ-ಕೊಲೆ ಆಗಿ 09 ಅಕ್ಟೋಬರ್ 2025 ಕ್ಕೆ 13 ವರ್ಷಗಳಾಗುತ್ತಿದೆ. ಇನ್ನೂ ಕೂಡಾ ಸೌಜನ್ಯ ಅತ್ಯಾಚಾರಿ-ಹಂತಕರಾದ ನೈಜ ಆರೋಪಿಗಳನ್ನು ಬಂಧಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ದಲಿತ, ಎಡ, ವಿದ್ಯಾರ್ಥಿ, ಯುವಜನ, ಮಹಿಳಾ, ಮಾನವ ಹಕ್ಕು ಸಂಘಟನೆಗಳ ಒಕ್ಕೂಟವಾಗಿರುವ ‘ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ’ಯು ರಾಜ್ಯಾದ್ಯಂತ ನ್ಯಾಯಕ್ಕಾಗಿ ಜನಾಗ್ರಹ ಕಾರ್ಯಕ್ರಮದ ಅಂಗವಾಗಿ ಹಾಸನದಲ್ಲಿಯೂ ಪ್ರತಿಭಟನಾ ಧರಣಿ ನಡೆಸಲಾಯಿತು ಈ ಧರಣಿಯಲ್ಲಿ ಹೋರಾಟಗಾರರಾದ ಧರ್ಮೇಶ್‌ , ಸಾಹಿತಿ ರೂಪ ಹಾಸನ್‌, ಸಿಐಟಿಯು ಅರವಿಂದ್‌ ಪುಷ್ಟಾ ಎಂ.ಬಿ ಸಾಹಿತಿ ಜ.ನಾ ತೇಜಶ್ರಿ, ಮಮತಾಶಿವು, ರಮೇಶ್‌ ಹಾಸನ್‌, ವಿವೇಕ್‌ ಮಧು ಇನ್ನತರು ಉಪಸ್ಥಿತರಿದ್ದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು