ದ್ವಿತೀಯ ಪಿಯು ಫಲಿತಾಂಶ ಅರ್ಪಿತಾ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ
ಲಿಂಕ್ ನಕಲಿಸಲಾಗಿದೆ ✓
ಹಾಸನ : ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಅರ್ಪಿತಾ ಹೆಚ್.ಜಿ. ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ಹಾಸನದ ಎಪಿಜೆ ಕಾಲೇಜಿನ ವಿದ್ಯಾರ್ಥಿನಿಯಾದ ಅರ್ಪಿತಾ, ಒಟ್ಟು 600ರಲ್ಲಿ 597 ಅಂಕಗಳನ್ನು ಗಳಿಸಿ ಶೇ.99.5 ಫಲಿತಾಂಶ ಸಾಧಿಸಿದ್ದಾರೆ. ಸಂಸ್ಕೃತ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ.
ನಾಲ್ಕು ವಿಷಯಗಳಲ್ಲಿ ಪೂರ್ಣ ಅಂಕಗಳನ್ನು ಗಳಿಸಿರುವ ಅರ್ಪಿತಾ ಸಾಧನೆಗೆ ಜಿಲ್ಲೆಯಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದೆ.
ರ
ರಮೇಶ್ ಹಾಸನ್
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ