ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಾಸನದಲ್ಲಿ ಸರಣಿ ಕಳ್ಳತನ ಹುಂಡಿ ಹೊಡೆದು ಲಕ್ಷಾಂತರ ರೂ ದೋಚಿದ ಕಳ್ಳರು

ಹಾಸನದಲ್ಲಿ ಸರಣಿ ಕಳ್ಳತನ ಹುಂಡಿ ಹೊಡೆದು ಲಕ್ಷಾಂತರ ರೂ ದೋಚಿದ ಕಳ್ಳರು

ಹಾಸನ : ನಗರದ ಸಮೀಪ ಅರಸೀಕೆರೆ ರಸ್ತೆ, ಬಿ. ಕಾಟಿಹಳ್ಳಿ ಬಳಿ ಇರುವ ದೂರವಾಣಿ ನಗರದ ಪಂಚಮುಖಿ ಗಣಪತಿ ಸುಬ್ರಮಣ್ಯ ಮತ್ತು ನವಗ್ರಹ ದೇವಾಲಯದಲ್ಲಿ ತಡರಾತ್ರಿ ದೇವಸ್ಥಾನದ ಬಾಗಿಲು ಮುರಿದು ಕಾಣಿಕೆ ಹುಂಡಿ ಹೊಡೆದು ಅಂದಾಜು ಒಂದು ಲಕ್ಷಕ್ಕೂ ಹೆಚ್ಚಿನ ಕಳವು ಮಾಡಲಾಗಿದೆ ಎಂದು ಇಲ್ಲಿನ ನಿವಾಸಿಗಳು ಹೇಳಿದ್ದಾರೆ.


ಇದೆ ವೇಳೆ ಇಲ್ಲಿನ ನಿವಾಸಿಗಳು ಹಾಗೂ ದೇವಾಲಯದ ಜವಬ್ದಾರಿ ಹೊತ್ತಿರುವ ಸಂಪತ್ತು ಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ, ದೂರವಾಣಿ ನಗರದಲ್ಲಿರುವ ಪಂಚಮುಖಿ ಗಣಪತಿ ಸುಬ್ರಮಣ್ಯ ಮತ್ತು ನವಗ್ರಹದ ದೇವಾಸ್ಥಾನದ ಬಾಗಿಲಿನ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಗರ್ಭಗುಡಿಯ ಬಾಗಿಲು ತೆರೆದು ಒಳ ಇದ್ದ ಬೀರುವಿನ ಬಾಗಿಲು ತೆಗೆದು ಹಾಗೂ ಕಾಣಿಕೆ ಹುಂಡಿ ಬೀಗ ಹೊಡೆದು ಜಾಲಾಡಿ ಕೈಗೆ ಸಿಕ್ಕಿದ ಹಣವನ್ನು ದೋಚಿಕೊಂಡು ಹೋಗಿದ್ದಾರೆ. ಕಳೆದ ವರ್ಷಕೂಡ ಇದೆ ದೇವಸ್ಥಾನದ ಬಾಗಿಲು ಮುರಿದು ಒಳಗಿದ್ದ ಎರಡು ಲಕ್ಷ ಬೆಲೆ ಬಾಳುವ ಬೆಳ್ಳಿಯ ಆಭರಣ ಮತ್ತು ಹಣವನ್ನೆಲ್ಲಾ ದೋಚಿಕೊಂಡು ಹೋಗಿದ್ದರು.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮಾಡಲಾಗಿತ್ತು ಎಂದರು. ಭಕ್ತರ ದೇವಾಲಯದಲ್ಲಿ ಇಂತಹ ಘಟನೆ ನಡೆದರೂ ಇದುವರೆಗೂ ಪೊಲೀಸ್ ಠಾಣೆಯಿಂದ ಯಾವ ಮಾಹಿತಿ ಸಿಕ್ಕಿರುವುದಿಲ್ಲ ಎಂದು ದೂರಿದರು. ಈಗ ಮೂರನೇ ಬಾರಿಗೆ ಒಂದೆ ದೇವಾಲಯದಲ್ಲಿ ಕಳ್ಳತನ ನಡೆದಿರುವುದು. ದೇವಾಲಯದಲ್ಲಿ ಆಗಿರುವ ಅನ್ಯಾಯ ಏನಾಗಿದೆ ಒಡವೆ ಹಾಗೂ ಹಣವನ್ನು ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು. ದೇವಾಲಯ ಒಂದೆ ಕಳ್ಳತನವಲ್ಲ. ದೂರಾವಣಿ ಸುತ್ತ ಏಳೆಂಟು ಬಾರಿ ಮನೆಕಳ್ಳತನವಾಗಿದೆ. ದೂರು ಕೂಡ ದಾಖಲಾಗಿದ್ದರೂ ಕಳ್ಳತನ ಪತ್ತೆ ಆಗಿರುವುದಿಲ್ಲ. ಇದರಿಂದ ಜನರು ಭಯಭೀತರಾಗಿದ್ದಾರೆ. ಪೊಲೀಸ್ ಇಲಾಖೆಯು ವಿಶೇಷವಾದ ತನಿಖೆ ನಡೆಸಿ ನಮಗೆ ನ್ಯಾಯಾದೊರಕಿಸಿಕೊಡಬೇಕೆಂದು ಮನವಿ ಮಾಡಿದರು. ಇಲ್ಲಿನ ಮನೆಗಳಲ್ಲಿ ವಾಸ ಮಾಡುವುದೇ ಕಷ್ಟವಾಗಿದೆ. ಇಷ್ಟೊಂದು ಕಳ್ಳತನವಾಗಿರುವುದರಿಂದ ಮಹಿಳೆಯರು ಓಡಾಡುವುದಕ್ಕೆ ಮತ್ತು ಮನೆಯಿಂದ ಹೊರ ಬರುವುದಕ್ಕೆ ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು