ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ಅಂದರ್

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ಅಂದರ್

ಕೊಣನೂರು : ಹಾಸನ ಜಿಲ್ಲೆಯ ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಣ್ಣಸ್ವಾಮಿ (48) ಎಂದು ಗುರುತಿಸಲಾಗಿದೆ.‌ ಪೊಲೀಸರ ಮಾಹಿತಿ ಪ್ರಕಾರ, ದೊಡ್ಡಮಗ್ಗೆ ಹೋಬಳಿಯ ಕಣಿಯಾರು ಗ್ರಾಮದ ಬಾಲಕಿ ಮನೆಯ ಸಮೀಪದ ಸಂಬಂಧಿಕರ ಮನೆಗೆ ಆಟವಾಡಲು ಹೋಗಿದ್ದಳು. ಬಳಿಕ ಮನೆಗೆ ಮರಳಿದಾಗ ಆಕೆಯ ಬಟ್ಟೆಯಲ್ಲಿ ರಕ್ತದ ಕಲೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪೋಷಕರು ವಿಚಾರಣೆ ನಡೆಸಿದ್ದಾರೆ. ಮಗುವಿನ ವರ್ತನೆ ಮತ್ತು ಸನ್ನೆಗಳ ಆಧಾರದ ಮೇಲೆ ಅನುಮಾನ ವ್ಯಕ್ತವಾದ ಬಳಿಕ ತಕ್ಷಣ ಕೊಣನೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ವೈದ್ಯರ ಪ್ರಾಥಮಿಕ ಪರೀಕ್ಷೆಯ ನಂತರ ಹೆಚ್ಚಿನ ಚಿಕಿತ್ಸೆ ಹಾಗೂ ವೈದ್ಯಕೀಯ ಪರೀಕ್ಷೆಗಾಗಿ ಬಾಲಕಿಯನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬಾಲಕಿಯ ಪೋಷಕರು ಕೊಣನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿ ಸಣ್ಣಸ್ವಾಮಿಯನ್ನು ಬಂಧಿಸಿದ್ದಾರೆ.

ಆರೋಪಿಯ ವಿರುದ್ಧ ಪೋಕ್ಸೋ (POCSO) ಕಾಯ್ದೆ ಸೇರಿದಂತೆ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಪ್ರಕ್ರಿಯೆಯನ್ನು ಪೊಲೀಸರು ಕೈಗೊಂಡಿದ್ದಾರೆ.

ವಿಷಯಗಳು: #karnataka #news
ರ

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version