ಶಿಕ್ಷಕರ ನೇಮಕಾತಿ ಮರುಸ್ಥಾಪನೆಗಾಗಿ ಅಭ್ಯರ್ಥಿಗಳ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್
ಲಿಂಕ್ ನಕಲಿಸಲಾಗಿದೆ ✓
ಬಿಹಾರ: ರಾಜಧಾನಿ ಪಾಟ್ನಾದಲ್ಲಿ ಸೋಮವಾರ ಶಿಕ್ಷಕರ ನೇಮಕಾತಿ ಅಭ್ಯರ್ಥಿಗಳು ಏಳನೇ ಹಂತದ ಪುನಶ್ಚೇತನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ತಮ್ಮ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ) ಮತ್ತು ಬಿಹಾರ ಶಿಕ್ಷಕರ ಅರ್ಹತಾ ಪರೀಕ್ಷೆ (ಬಿಟಿಇಟಿ) ಅಭ್ಯರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ ಕುರಿತು ಮಾತನಾಡಿರುವ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಎಸ್ಟಿಇಟಿ ಅಭ್ಯರ್ಥಿಯನ್ನು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ಥಳಿಸುತ್ತಿದ್ದು, ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಲಾಗಿದೆ. ತನಿಖಾ ಸಮಿತಿಯನ್ನು ರಚಿಸಲಾಗಿದೆ. ತಪ್ಪಿತಸ್ಥರು ಯಾರೇ ಕಂಡುಬಂದರು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಿಷಯಗಳು:
#Aam Aadmi Party
#bhihar
#BTET
#ctet
#india
#kannada
#karnataka
#lati charge
#news
#patna
#peepal
#peepalmedia
#tejasvi yadav
P
Peepal Media
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ