ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯತ್ನಾಳ್ ಸವಾಲು ಸ್ವೀಕರಿಸಿದ ಶಿವಾನಂದ ಪಾಟೀಲ್ ರಾಜೀನಾಮೆ ಸಲ್ಲಿಕೆ : ಕುತೂಹಲ ಮೂಡಿಸಿದ ಯತ್ನಾಳ್ ಮುಂದಿನ ನಡೆ

ಯತ್ನಾಳ್ ಸವಾಲು ಸ್ವೀಕರಿಸಿದ ಶಿವಾನಂದ ಪಾಟೀಲ್ ರಾಜೀನಾಮೆ ಸಲ್ಲಿಕೆ : ಕುತೂಹಲ ಮೂಡಿಸಿದ ಯತ್ನಾಳ್ ಮುಂದಿನ ನಡೆ

“ಸಚಿವ ಶಿವಾನಂದ ಪಾಟೀಲ ಅವರಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ. ನಾನು ಅವರ ವಿರುದ್ಧ ಅವರದೇ ಬಸವನ ಬಾಗೇವಾಡಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧನಿದ್ದೇನೆ…” ಎನ್ನುವ ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲಿಗೆ ಸಚಿವ  ಶಿವಾನಂದ ಪಾಟೀಲ್ ಖಡಕ್ಕಾಗಿ ಉತ್ತರಿಸಿದ್ದು, ನೇರ ಸಭಾಪತಿ ಯುಟಿ ಖಾದರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಪತ್ರದಲ್ಲಿ ಏನಿದೆ?
ವಿಜಯಪುರ ನಗರ ಶಾಸಕರಾದ ಶ್ರೀ ಬಸನಗೌಡ ಆರ್. ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ. ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಆದುದರಿಂದ. ಶ್ರೀ ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ. ಎಂದಿದ್ದಾರೆ.

ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧವೂ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದ್ದು , ನೀವು ಸಾಬರ ಬೆನ್ನು ಹತ್ತಿದ್ದೀರಿ, ಹಿಂದೂ ಸನಾತನ ಧರ್ಮದ ವ್ಯಕ್ತಿಗೆ ಏನಾದರೂ ಆದಾಗ ನೀವು ಬರದಿದ್ದರೆ ನೀವು ಮುಸ್ಲಿಮರಿಗೆ ಹುಟ್ಟಿದಂಗೆ. ಶಿವಾನಂದ ಪಾಟೀಲ ಹಾಗೂ ಕಾಶಪ್ಪನವರ ರಾಜೀನಾಮೆ ನೀಡಿ ಪಕ್ಷೇತರರಾಗಿ ಸ್ಪರ್ಧಿಸಿ, ನಾನು ಭಾಗವಾ ಧ್ವಜ ಹಿಡಿದುಕೊಂಡು ಪಕ್ಷೇತರನಾಗಿ ಎರಡೂ ಕಡೆ ಆಯ್ಕೆಯಾಗುತ್ತೇನೆ ಎಂದಿದ್ದರು.

ಒಂದು ವಾರದಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ, ಸಭಾಪತಿಯವರಿಂದ ಅಂಗೀಕಾರ ಮಾಡಿಕೊಂಡು ಬನ್ನಿ. ನೀವು ಪಕ್ಷೇತರರಾಗಿ ಬನ್ನಿ ನಾನು ಬರುವೆ, ಬಾಗೇವಾಡಿಯಲ್ಲೇ ಬಂದು ಮಣ್ಣು ಕೊಡುತ್ತೇನೆ. ರಾಜಿನಾಮೆ ನೀಡದಿದ್ದರೆ ಇವರು ಅಪ್ಪಗೆ ಹುಟ್ಟಿಲ್ಲ ಎಂದು ನಾನು ಹೇಳುತ್ತೇನೆ. ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಇವರೆಲ್ಲರಿಗೂ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸುತ್ತೇನೆ ಎಂದಿದ್ದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು