ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದಲಿತ IAS, IPS ಅಧಿಕಾರಿಗಳ ಮಕ್ಕಳೂ ಮೀಸಲಾತಿಯನ್ನು ಪಡೆಯಬೇಕೆ?ಸರ್ವೋಚ್ಚ ನ್ಯಾಯಾಲಯದ ಭಾವಿ ನ್ಯಾಯಾದೀಶರ ಪ್ರಶ್ನೆ

N

N S • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ದಲಿತ IAS, IPS ಅಧಿಕಾರಿಗಳ ಮಕ್ಕಳೂ ಮೀಸಲಾತಿಯನ್ನು ಪಡೆಯಬೇಕೆ?ಸರ್ವೋಚ್ಚ ನ್ಯಾಯಾಲಯದ ಭಾವಿ ನ್ಯಾಯಾದೀಶರ ಪ್ರಶ್ನೆ

ಹೊಸದಿಲ್ಲಿ: ಎಸ್ಸಿ/ಎಸ್ಟಿ ಸಮುದಾಯಗಳಿಗೆ ಸೇರಿದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಮಕ್ಕಳೂ ಮೀಸಲಾತಿಯ ಲಾಭವನ್ನು ಪಡೆಯಬೇಕೇ ಎಂದು ಸ್ವತಃ ದಲಿತರಾಗಿರುವ ಮತ್ತು ಮುಂದಿನ ವರ್ಷದ ಮೇ ತಿಂಗಳಲ್ಲಿ ಭಾರತದ ಮುಖ್ಯ ನ್ಯಾಯಾಧೀಶ ಹುದ್ದೆಗೇರಲಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ನ್ಯಾ.ಬಿ.ಆರ್.ಗವಾಯಿ ಅವರು ಪ್ರಶ್ನಿಸಿದ್ದಾರೆ.


ಮೀಸಲಾತಿಗೆ ಸಂಬಂಧಿಸಿದ ತನ್ನ ಆದೇಶವನ್ನು ಪಂಜಾಬ ಮತ್ತು ಹರ್ಯಾಣ ಉಚ್ಚ ನ್ಯಾಯಾಲಯವು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಪಂಜಾಬ್ ಸರಕಾರವು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಸಂದರ್ಭದಲ್ಲಿ ನ್ಯಾ.ಗವಾಯಿ ಈ ಮಹತ್ವದ ಪ್ರಶ್ನೆಯನ್ನು ಕೇಳಿದರು.

ಪಂಜಾಬಿನ ಆಗಿನ ಅಮರಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರವು ವಾಲ್ಮೀಕಿಗಳು ಮತ್ತು ಮಝಬಿ ಸಿಕ್ಖರನ್ನು ಮಹಾ ದಲಿತರು ಎಂದು ಗುರುತಿಸಿತ್ತು. ಜೊತೆಗೆ ಪಂಜಾಬ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ಕಾಯ್ದೆ 2006 ಅನ್ವಯ ಶೇ.15ರಷ್ಟು ಸರಕಾರಿ ಉದ್ಯೋಗಗಳ ಕೋಟಾದಲ್ಲಿ ಶೇ.50ರಷ್ಟು ನೇಮಕಾತಿಗಳನ್ನು ಅವರಿಗೆ ಮೀಸಲಿರಿಸಿತ್ತು. ಪಂಜಾಬ ಮತ್ತು ಹರ್ಯಾಣ ಉಚ್ಚ ನ್ಯಾಯಾಲಯವು ಸರಕಾರದ ಈ ಕ್ರಮವನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಈಗಿನ ಆಪ್ ಸರಕಾರವು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದೆ.


ಮುಖ್ಯ ನ್ಯಾಯಮೂರ್ತಿ ಡಿ.ವಿ.ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ವಿಕ್ರಮನಾಥ, ಬೇಲಾ ಎಂ.ತ್ರಿವೇದಿ, ಪಂಕಜ್ ಮಿತ್ತಲ್ ಮತ್ತು ಸತೀಶಚಂದ್ರ ಮಿಶ್ರಾ ಅವರ ಪೀಠದ ಎದುರು ವಾದವನ್ನು ಮಂಡಿಸಿದ ಪಂಜಾಬಿನ ಅಡ್ವೋಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಅವರು, ಹಿಂದುಳಿದ ವರ್ಗಗಳ ಸಮುದಾಯದಲ್ಲಿ ಅತ್ಯಂತ ಹಿಂದುಳಿದವರನ್ನು ಗುರುತಿಸಿ ಅಂಥವರಿಗೆ ಅವಕಾಶಗಳನ್ನು ನೀಡಬೇಕು ಎಂದು ಹೇಳಿದರು.


ನೇಮಕಾತಿ ಪರೀಕ್ಷೆಗಳಲ್ಲಿ ಶೇ.99ರಷ್ಟು ಅಂಕಗಳನ್ನು ಗಳಿಸಿದ ಮುಂದುವರಿದ ವರ್ಗದ ವ್ಯಕ್ತಿಯು ಜೀವನದಲ್ಲಿ ಎಲ್ಲ ಸೌಲಭ್ಯಗಳನ್ನು ಹೊಂದಿರುತ್ತಾನೆ. ಅದೇ ಶೇ.56ರಷ್ಟು ಅಂಕ ಪಡೆದ ಹಿಂದುಳಿದ ವರ್ಗದ ವ್ಯಕ್ತಿಯು ಯಾವುದೇ ಮೂಲಸೌಲಭ್ಯಗಳಿಲ್ಲದೆ ಪರದಾಡುತ್ತಿರುತ್ತಾನೆ. ಹೀಗಾಗಿ ಸರಕಾರಿ ಉದ್ಯೋಗಗಳಲ್ಲಿ ಶೇ.99ರಷ್ಟು ಅಂಕ ಪಡೆದ ಮುಂದುವರಿದ ವರ್ಗದ ವ್ಯಕ್ತಿಗಿಂತ ಶೇ.56ರಷ್ಟು ಅಂಕ ಪಡೆದ ಹಿಂದುಳಿದ ವರ್ಗದ ವ್ಯಕ್ತಿಗೆ ಆದ್ಯತೆಯನ್ನು ನೀಡಬೇಕು ಎಂದು ಅವರು ವಾದಿಸಿದ್ದರು.


ಎಸ್ಸಿ ಎಂದು ವರ್ಗೀಕರಿಸಲಾಗಿರುವ ಸಮುದಾಯವು ಸರಕಾರಿ ಉದ್ಯೋಗಗಳಲ್ಲಿ ಸಾಕಷ್ಟು ಪ್ರಾತಿನಿಧ್ಯವನ್ನು ಪಡೆದು ಸಾಮಾಜಿಕ ವಲಯಗಳಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸಿದ ಬಳಿಕ ಅದನ್ನು ಮೀಸಲಾತಿಗೆ ಅರ್ಹರ ಪಟ್ಟಿಯಿಂದ ತೆಗೆದುಹಾಕಬಹುದು. ಮೀಸಲಾತಿ ಶಾಶ್ವತವಾಗಿರಬೇಕು ಎಂದು ಸಂವಿಧಾನವನ್ನು ರೂಪಿಸಿದವರು ಸೇರಿದಂತೆ ಯಾರೂ ಉದ್ದೇಶಿಸಿರಲಿಲ್ಲ ಎಂದು ಸಮರ್ಥಿಸಿಕೊಂಡರು.
ಈ ಹಂತದಲ್ಲಿ ನ್ಯಾ.ಗವಾಯಿ ಅವರು,ಐಎಎಸ್ ಮತ್ತು ಐಪಿಎಸ್ ನಂತಹ ಹುದ್ದೆಯಲ್ಲಿರುವ ವ್ಯಕ್ತಿ ಅತ್ಯುತ್ತಮ ಸೌಲಭ್ಯಗಳನ್ನು ಪಡೆಯುತ್ತಾನೆ, ಆದರೂ ಇಂತಹವರ ಮಕ್ಕಳೂ ಮೀಸಲಾತಿಯ ಲಾಭಗಳನ್ನು ಪಡೆದುಕೊಳ್ಳುವುದನ್ನು ಮುಂದುವರಿಸುತ್ತಾರೆ. ಇದು ಮುಂದುವರಿಯಬೇಕೇ ಎಂಬ ಪ್ರಶ್ನೆಯನ್ನು ಎಸೆದಿದ್ದರು.

N

N S

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version