ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿದ್ದರಾಮಯ್ಯ ಕೊಲೆಗೆ ಪ್ರಚೋದನೆ; ಅಶ್ವಥ್ ನಾರಾಯಣ್ ವಿರುದ್ಧ ಸುಪಾರಿ ಆರೋಪ : FIR ದಾಖಲು

PPeepal Media

Peepal Media • ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ಸಿದ್ದರಾಮಯ್ಯ ಕೊಲೆಗೆ ಪ್ರಚೋದನೆ; ಅಶ್ವಥ್ ನಾರಾಯಣ್ ವಿರುದ್ಧ ಸುಪಾರಿ ಆರೋಪ : FIR ದಾಖಲು

ಸಿದ್ದರಾಮಯ್ಯ ಅವರಿಗೆ ಸಾರ್ವಜನಿಕವಾಗಿ ಕೊಲೆಗೆ ಪ್ರಚೋದನೆ ನೀಡಿದ್ದ ಮಲ್ಲೇಶ್ವರ ಕ್ಷೇತ್ರ ಶಾಸಕ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಹೌದು, ತಮ್ಮದೇ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದು ಸಚಿವರಾಗಿದ್ದ ಅಶ್ವಥ್ ನಾರಾಯಣ ಅವರು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ರವರನ್ನು ಹೊಡೆದು ಹಾಕಬೇಕು ಎಂದು ಕೊಲೆಗೆ ಸಾರ್ವಜನಿಕ ಪ್ರಚೋದನೆ ನೀಡಿದ್ದರು.

ಈಗ ಈ ಹೇಳಿಕೆಗೆ ತಕ್ಕ ಬೆಲೆ ತೆತ್ತುವ ಸಂದರ್ಭ ಬಂದಂತೆ ಕಾಣುತ್ತಿದ್ದೆ. ಶಾಸಕ ಅಶ್ವಥ್ ನಾರಾಯಣ ಅವರ ವಿರುದ್ಧ ಐಪಿಸಿ ಸೆಕ್ಷನ್ 505, 153ರ ಅಡಿ ಮೈಸೂರಿನ ದೇವರಾಜ ಪೋಲಿಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಮೈಸೂರು ನಿವಾಸಿ ಹಾಗೂ ಕಾಂಗ್ರೆಸ್ ಪಕ್ಷದ ವಕ್ತಾರರು ಆಗಿರುವ ಎಂ ಲಕ್ಷ್ಮಣ್ ಕೊಟ್ಟಿರುವ ಕೇಸಿನ ಆಧಾರದ ಮೇಲೆ FIR ದಾಖಲಾಗಿದೆ.

ಈ ಕುರಿತು ಲಕ್ಷ್ಮಣ್ ಅವರನ್ನು ಸಂಪರ್ಕಿಸಿದ ಪೀಪಲ್ ಮೀಡಿಯಾ, ಸಿದ್ದರಾಮಯ್ಯ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಅವರನ್ನು ಕೊಲ್ಲುವ ಸಂಚು ಹೂಡಿದ್ದಾರೆ. ಅಶ್ವಥ್ ನಾರಾಯಣ್ ಬಹಿರಂಗವಾಗಿ ಹೇಳಿಕೆ ನೀಡಿದ್ದು, ಅವರೇ ಸುಫಾರಿ ಕೊಟ್ಟಿರಬಹುದು ಎಂದು ಆರೋಪಿಸಿದ್ದಾರೆ. ಹಾಗೂ ನಾಳೆ ಸ್ಥಳ ಮಹಜರಿಗೆ ಪೋಲಿಸರು ಹೋಗುತ್ತಿದ್ದಾರೆ. ಈ ತನಿಖೆಗೆ ಸಂಬಂಧಿಸಿದಂತೆ ಸಭಾಪತಿಗಳ ಅನುಮತಿಯನ್ನು ಪಡೆಯಲು ಪೋಲಿಸರು ಮುಂದಾಗಿದ್ದಾರೆ ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ಸಾತನೂರು ಹೊರವಲಯದ ಕಂಬದ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ ನಾರಾಯಣ ಮಾತನಾಡಿ, “ನಿಮಗೆ ಟಿಪ್ಪು ಬೇಕಾ..? ಸಾವರ್ಕರ್ ಬೇಕಾ..? ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಉರಿಗೌಡ ಮತ್ತು ನಂಜೇಗೌಡ ಏನ್ ಮಾಡಿದ್ದರು. ಹಾಗೇಯೇ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು” ಎಂದು ಹೇಳಿದ್ದರು.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು