ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದ 48 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ : ಭ್ರಷ್ಟ ಅಧಿಕಾರಿಗಳು ಬಲೆಗೆ

P

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ರಾಜ್ಯದ 48 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ : ಭ್ರಷ್ಟ ಅಧಿಕಾರಿಗಳು ಬಲೆಗೆ

ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ 48 ಕಡೆಗಳಲ್ಲಿ ಸುಮಾರು 200 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ 10 ಕಡೆ ಸೇರಿದಂತೆ ದಾವಣಗೆರೆ, ಚಿತ್ರದುರ್ಗ, ಮಡಿಕೇರಿ, ರಾಮನಗರ, ಕೊಪ್ಪಳ, ಬೀದರ್​ನಲ್ಲಿ ಈ ದಾಳಿ ನಡೆದಿದ್ದು, ಕೋಟ್ಯಂತರ ಮೌಲ್ಯದ ಹಣ, ಬಂಗಾರ, ಆಸ್ತಿಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊಳಲ್ಕೆರೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಮನೆ ಮೇಲೆ, ದಾವಣಗೆರೆ ಜಯನಗರದ ಮಹೇಶ್ ಗೌಡ ಮನೆ, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿ ಆರ್.ಎಫ್.ಒ ಸತೀಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೊಪ್ಪಳದ ನಿರ್ಮಿತಿ ಕೇಂದ್ರದ ಕಚೇರಿ ವ್ಯವಸ್ಥಾಪಕ‌ ಮಂಜುನಾಥ್ ಅವರ ಬನ್ನಿಕೊಪ್ಪ ಮನೆ ಹಾಗೂ ಕಚೇರಿ ಮೇಲೆ‌ ಲೋಕಾಯುಕ್ತ ದಾಳಿ ನಡೆದಿದೆ.

ಮಡಿಕೇರಿ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆಯ ಮೇಲೂ ದಾಳಿಯಾಗಿದೆ. ಆದಾಯಕ್ಕೆ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಪಾರ ಪ್ರಮಾಣದ ಹಣ, ಬಂಗಾರ ಹಾಗೂ ಆಸ್ತಿಪಾಸ್ತಿ ವಶಕ್ಕೆ ಪಡೆಯಲಾಗಿದೆ.

ಬೀದರ್ ಜಿಲ್ಲೆಯ ಚಿಟಗುಪ್ಪ ಠಾಣೆಯಲ್ಲಿ ಹೆಡ್​ ಕಾನ್ಸ್​ಟೇಬಲ್​ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಹುಮ್ನಾಬಾದ್ ಟೀಚರ್ ಕಾಲೋನಿ, ಹುಚಕನಳ್ಳಿ ಗ್ರಾಮದ ಮನೆ ಮೇಲೆ ಡಿವೈಎಸ್​​ಪಿ ಓಲೇಕಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಕನಕಪುರದಲ್ಲಿ ಇರುವ ಬಿಬಿಎಂಪಿ‌ ಅಧಿಕಾರಿ ಮನೆ ಮೇಲೆ‌ ಲೋಕಾಯುಕ್ತ ದಾಳಿ ನಡೆದಿದೆ. ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ಮನೆ ಮೇಲೆ ದಾಳಿಯಾಗಿದ್ದು, ಮನೆ ಜೊತೆ ಫಾರಂ ಹೌಸ್ ಅನ್ನೂ ಸೀಝ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕಚೇರಿಗಳಲ್ಲೂ ಈ ದಿನ ದಾಳಿ ಆಗಬಹುದು ಎಂದು ನಿರೀಕ್ಷಿಸಲಾಗಿದೆ.

ವಿಷಯಗಳು: #Lokayukta raids #news #peepal #peepalmedia
P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version