ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಎಸ್‌ಐಆರ್ ಪ್ರಕ್ರಿಯೆ ದಲಿತರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತರಿಗೆ ಬಾರಿ ಅಪಾಯ – ಸಿಪಿಐಎಂ

ಎಸ್‌ಐಆರ್ ಪ್ರಕ್ರಿಯೆ ದಲಿತರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತರಿಗೆ ಬಾರಿ ಅಪಾಯ – ಸಿಪಿಐಎಂ

ಹಾಸನ: ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಬಡವರು, ಕೂಲಿಕಾರರು, ವಲಸೆ ಕಾರ್ಮಿಕರು, ಮಹಿಳೆಯರು, ದಲಿತರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮತದಾನದ ಹಕ್ಕು ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಹಾಗೂ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಆತಂಕ ವ್ಯಕ್ತಪಡಿಸಿದೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಗಳು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕರ ಮತದಾನದ ಸಂವಿಧಾನಿಕ ಹಕ್ಕು ರಕ್ಷಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿವೆ.

ಹಾಸನದ ಸ್ವಾಭಿಮಾನ ಭವನದಲ್ಲಿ ಜೂನ್ 18ರಂದು ನಡೆದ ದುಂಡು ಮೇಜಿನ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಆಧಾರದ ಮೇಲೆ ಸಲ್ಲಿಸಿರುವ ಮನವಿಯಲ್ಲಿ, ಚುನಾವಣಾ ಆಯೋಗ ಅನುಸರಿಸುತ್ತಿರುವ ಎಸ್‌ಐಆರ್ ವಿಧಾನವು ಮತದಾರರ ಮೇಲೆಯೇ ಪೌರತ್ವ ಸಾಬೀತುಪಡಿಸುವ ಹೊಣೆಗಾರಿಕೆಯನ್ನು ಹಾಕುತ್ತಿದೆ ಎಂದು ಆರೋಪಿಸಲಾಗಿದೆ. ಮ್ಯಾಚಿಂಗ್ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಅನೇಕ ಮತದಾರರು ಹೊರಗುಳಿಯುವ ಅಪಾಯವಿದೆ ಎಂದು ತಿಳಿಸಲಾಗಿದೆ.

ಜನತಾ ಪ್ರಾತಿನಿಧ್ಯ ಕಾಯ್ದೆ 1950 ಮತ್ತು ಮತದಾರರ ನೋಂದಣಿ ನಿಯಮಗಳು 1960ರ ಅಡಿಯಲ್ಲಿ “ವಿಶೇಷ ತೀವ್ರ ಪರಿಷ್ಕರಣೆ”ಗೆ ಸ್ಪಷ್ಟ ಅವಕಾಶವಿಲ್ಲ ಎಂದು ಸಭೆ ಅಭಿಪ್ರಾಯಪಟ್ಟಿದೆ. ಮತದಾರರ ಪಟ್ಟಿಯಿಂದ ಮೃತರು, ನಕಲಿ ಹೆಸರುಗಳು ಹಾಗೂ ಶಾಶ್ವತವಾಗಿ ಸ್ಥಳಾಂತರಗೊಂಡವರನ್ನು ತೆಗೆಯುವುದು ಸಾಮಾನ್ಯ ಪ್ರಕ್ರಿಯೆಯಾಗಿದ್ದರೂ, ಅದರ ನೆಪದಲ್ಲಿ ಲಕ್ಷಾಂತರ ಜನರ ಮತದಾನದ ಹಕ್ಕಿಗೆ ಧಕ್ಕೆ ಉಂಟಾಗಬಾರದು ಎಂದು ಮನವಿಯಲ್ಲಿ ಹೇಳಲಾಗಿದೆ. ಕರ್ನಾಟಕದಲ್ಲಿ “ತಾರ್ಕಿಕ ವ್ಯತ್ಯಾಸ” (Logical Discrepancies) ಮಾನದಂಡ ಅಳವಡಿಸಿರುವುದಕ್ಕೆ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಹೆಸರುಗಳ ಸ್ಪೆಲ್ಲಿಂಗ್ ವ್ಯತ್ಯಾಸ, ವಯಸ್ಸಿನ ಅಂತರ, ಅಂತರ್ಜಾತಿ ಹಾಗೂ ಅಂತರ್ಧರ್ಮೀಯ ವಿವಾಹಗಳಂತಹ ಕಾರಣಗಳಿಂದ ಮತದಾರರು ಪಟ್ಟಿಯಿಂದ ಹೊರಗುಳಿಯುವ ಅಪಾಯವಿದೆ ಎಂದು ಎಚ್ಚರಿಸಿವೆ.

ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಏಳು ಪ್ರಮುಖ ಬೇಡಿಕೆಗಳನ್ನು ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ. ದಾಖಲೆಗಳ ಕೊರತೆಯಿಂದ ಯಾರ ಹೆಸರನ್ನೂ ಮತದಾರರ ಪಟ್ಟಿಯಿಂದ ಕೈಬಿಡಬಾರದು, ಅಗತ್ಯ ದಾಖಲೆಗಳನ್ನು ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಬೇಕು, “ತಾರ್ಕಿಕ ವ್ಯತ್ಯಾಸ” ಮಾನದಂಡವನ್ನು ಕೈಬಿಡುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಬೇಕು, ಮತದಾರರ ಸೇವಾ ಕೇಂದ್ರಗಳನ್ನು ತೆರೆಯಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಗೆ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಆಗ್ರಹಿಸಲಾಗಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು