ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದುರಂಹಕಾರಿ ಶಿವಾನಂದ ಪಾಟೀಲ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು: ಎಎಪಿ ಆಗ್ರಹ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜಕೀಯ

• 2 ನಿಮಿಷದ ಓದು

ದುರಂಹಕಾರಿ ಶಿವಾನಂದ ಪಾಟೀಲ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು: ಎಎಪಿ ಆಗ್ರಹ

ಬೆಂಗಳೂರು: ಸಾಲಮನ್ನಾದ ಆಸೆಗಾಗಿ ರೈತರು ಬರಗಾಲವನ್ನು ಬಯಸುತ್ತಾರೆ ಎಂಬ ಉದ್ಧಟತನದ ಹೇಳಿಕೆ ನೀಡಿರುವ ಸಚಿವ ಶಿವಾನಂದ ಪಾಟೀಲ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡುವಂತೆ ಕರ್ನಾಟಕ ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ. ಸಚಿವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, ರೈತ ಸಮುದಾಯದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.

ಇತ್ತೀಚೆಗೆ ಚಿಕ್ಕೋಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಶಿವಾನಂದ ಪಾಟೀಲ್ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿ ಸೋಮವಾರ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಅನ್ನದಾತರನ್ನು ಪದೇಪದೆ ಅವಮಾನಿಸುವ, ರೈತರ ಜೀವನ ಹಾಳು ಮಾಡುವ, ರೈತರನ್ನು ನಿಂದಿಸುವ ಸಂಸ್ಕೃತಿಯನ್ನು ಕಾಂಗ್ರೆಸ್ ಸಚಿವ ಶಿವಾನಂದ ಪಾಟೀಲ ಅಳವಡಿಸಿಕೊಂಡಂತಿದೆ. ಪದೇಪದೆ ರೈತರನ್ನು ಅವಮಾನಿಸುವ ಮತ್ತು ಕೀಳಾಗಿ ಕಾಣುತ್ತಿದ್ದಾರೆ. ಇತ್ತೀಚೆಗಷ್ಟೇ ಬೆಳೆ ಪರಿಹಾರ ಘೋಷಣೆ ನಂತರ ರೈತರ ಆತ್ಮಹತ್ಯೆ ಪ್ರಮಾಣ ಹೆಚ್ಚಾಗಿದೆ ಎಂದು ನಾಲಿಗೆ ಹರಿಬಿಟ್ಟಿದ್ದರು. ರೈತರು ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದಾದರೆ ಅದೇ ಪರಿಹಾರವನ್ನು ದುಪ್ಪಟ್ಟಾಗಿ ಹಿಂತಿರುಗಿಸಿ ಕೊಟ್ಟರೆ ಶಿವಾನಂದ ಪಾಟೀಲರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಯೇ? ಎಂದು ಕಿಡಿಕಾರಿದರು.

ಕೃಷ್ಣಾ ನದಿ ನೀರು ಉಚಿತ, ಉತ್ತರ ಕರ್ನಾಟಕದ ಹಲವು ಪ್ರದೇಶಗಳು ಬರಗಾಲದಿಂದ ತತ್ತರಿಸಿರುವುದರಿಂದ ಮುಖ್ಯಮಂತ್ರಿಗಳು ಉಚಿತವಾಗಿ ಬಿತ್ತನೆಬೀಜ, ಗೊಬ್ಬರವನ್ನೂ ನೀಡುತ್ತಿದ್ದಾರೆ. ಈಗ ರೈತರು ತಮ್ಮ ಸಾಲವನ್ನು ಮನ್ನಾ ಆಗುವುದರಿಂದ ರಾಜ್ಯದಲ್ಲಿ ಪದೇ ಪದೇ ಬರಗಾಲ ಬರಲಿ ಎಂದು ಬಯಸುತ್ತಿದ್ದಾರೆ, ಇದು ಸರಿಯಾದ ಕ್ರಮವಲ್ಲ ಎಂದು ಶಿವಾನಂದ ಪಾಟೀಲ ಹೇಳಿಕೆ ನೀಡಿದ್ದರು.

ಸಚಿವ ಶಿವಾನಂದ ಪಾಟೀಲ ಅವರು ಕೂಡಲೇ ಕ್ಷಮೆಯಾಚಿಸಬೇಕು. ರೈತರ ಬಗ್ಗೆ ಅವರು ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ತಮ್ಮ ಸಂಪುಟದಿಂದ ಶಿವಾನಂದ ಪಾಟೀಲರನ್ನು ಕೈಬಿಡಬೇಕು. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಜಗದೀಶ್ ವಿ. ಸದಂ ಒತ್ತಾಯಿಸಿದರು.

ದೇಶದಲ್ಲಿ ದಿನಕ್ಕೆ 30 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮೋದಿ ಸರ್ಕಾರದ 2ನೇ ಅವಧಿಯಲ್ಲಿ, ಒಟ್ಟು 11,290 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕೃಷಿ ಕಾರ್ಮಿಕರ ಆತ್ಮಹತ್ಯೆಗಳು ಮಿತಿಮೀರಿವೆ. ರೈತರ ಆತ್ಮಹತ್ಯೆಯಲ್ಲಿ ನಮ್ಮ ರಾಜ್ಯ 2ನೇ ಸ್ಥಾನದಲ್ಲಿದೆ. ಬೆಳೆ ನಷ್ಟ, ಬೆಳೆಗೆ ಸಿಗದ ಬೆಂಬಲ ಬೆಲೆ, ಸಕಾಲದಲ್ಲಿ ಸಾಲ ಮರುಪಾವತಿಸಲು ಆಗದೆ ಇರುವುದು, ಹೀಗೆ ನಾನಾ ಕಾರಣಗಳಿಂದ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 2082 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯಲ್ಲಿ 200 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರುನಲ್ಲಿ 191 ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವರ್ಷ ಕಂಡೂಕೇಳರಿಯದ ಬರಗಾಲ ರಾಜ್ಯವನ್ನು ಆವರಿಸಿದೆ. ಕೇಂದ್ರ ಸರ್ಕಾರ ಇದುವರೆಗೆ ಬಿಡಿಗಾಸು ಬರ ಪರಿಹಾರ ನೀಡಿಲ್ಲ. ರಾಜ್ಯ ಸರ್ಕಾರ ಘೋಷಿಸಿದ್ದ ಮೊದಲ ಕಂತಿನ ₹ 2000 ಕೂಡ ತಲುಪಿಲ್ಲ. ಇಂತಹ ಸಂದರ್ಭದಲ್ಲಿ ರೈತರನ್ನು ಮಾನಸಿಕವಾಗಿ ದುರ್ಬಲರಾಗಿಸುವುದು ಸರಿಯಲ್ಲ. ರೈತರಿಗೆ ಪರಿಹಾರ ಕೊಡಿಸುವ ಯೋಗ್ಯತೆಯಿಲ್ಲದ ಸಚಿವ ಶಿವಾನಂದ ಪಾಟೀಲ ದುರಹಂಕಾರದಿಂದ ಮಾತನಾಡುತ್ತಾರೆ. ಇತ್ತೀಚೆಗೆ ಹೈದರಾಬಾದ್ ನಲ್ಲಿ ನಡೆದ ಯಾವುದೋ ಕಾರ್ಯಕ್ರಮದಲ್ಲಿ ದುಡ್ಡಿನ ಮೇಲೆ ಕಾಲಿಟ್ಟುಕೊಂಡು ದರ್ಪ ತೋರಿಸಿದ್ದರು. ಸಚಿವರಾದ ಮೇಲೆ ಅಧಿಕಾರ ಮತ್ತು ಹಣದ ಮದ ತಲೆಗೇರಿದೆ. ಅವತ್ತೇ ಪಾಟೀಲರ ವಿರದ್ಧ ಕ್ರಮ ತೆಗೆದುಕೊಂಡಿದ್ದಿದ್ದರೆ ರೈತರ ವಿರುದ್ಧ ಹೀಗೆ ಕೇವಲವಾಗಿ ನಾಲಿಗೆ ಹರಿಬಿಡುತ್ತಿರಲಿಲ್ಲ ಎಂದು ಜಗದೀಶ್ ಅವರು ವಾಗ್ದಾಳಿ ನಡೆಸಿದರು.

ವಿಷಯಗಳು: #AAP #peepal #peepalmedia #Shivananda Patil
PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು