ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಾಮಾಜಿಕ ಹೋರಾಟಗಾರ ಪಟ್ಟಾಭಿರಾಮ ಸೋಮಯಾಜಿ ನಿಧನ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಸಾಮಾಜಿಕ ಹೋರಾಟಗಾರ ಪಟ್ಟಾಭಿರಾಮ ಸೋಮಯಾಜಿ ನಿಧನ

ಮಂಗಳೂರು: ಸಾಮಾಜಿಕ ಚಿಂತಕ ನಿವೃತ್ತ ಪ್ರಾಧ್ಯಾಪಕ ಪ್ರೊ. ಪಟ್ಟಾಭಿರಾಮ ಸೋಮಯಾಜಿಯವರು ಶನಿವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ನಗರದ ದೇರೆಬೈಲು ಕೊಂಚಾಡಿ ಬಳಿಯಿರುವ ಗಿರಿನಗರದಲ್ಲಿ ಒಂಟಿಯಾಗಿ ವಾಸವಿದ್ದ ಅವರು ಇಂದು ಬೆಳಗ್ಗೆ ಮನೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ನಿವೃತ್ತರಾಗಿರುವ ಇವರು ಕೋಮುಸೌಹಾರ್ದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.

ದಕ್ಷಿಣ ಕನ್ನಡ ಭಾಗದ ಬಹುತೇಕ ಸಾಮಾಜಿಕ ಹೋರಾಟಗಳು, ಜನಪರ ಕಾರ್ಯಗಳಲ್ಲಿ ಸಕ್ರಿಯರಾಗಿದ್ದ ಪಟ್ಟಾಭಿರಾಮ ಸೋಮಯಾಜಿಯವರು ಚಿರಪರಿಚಿತ ವ್ಯಕ್ತಿಯಾಗಿ ಗುರುತಿಸಿಕೊಂಡವರು.

ಅನಾರೋಗ್ಯದಿಂದ‌ ಬಳಲುತ್ತಿದ್ದ ಪ್ರೊ.ಪಟ್ಟಾಭಿರಾಮ ಸೋಮಯಾಜಿಯವರು ಕೆಲದಿನಗಳ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಶುಕ್ರವಾರ ರಾತ್ರಿ ಕೆಲ ಆಪ್ತರೊಡನೆ ಫೋನ್ ಮೂಲಕ ಮಾತನಾಡಿದ್ದರು. ಆದರೆ ಶನಿವಾರ ಬೆಳಗ್ಗೆ ಮನೆಯಿಂದ ಹೊರಬಾರದಿರುವುದನ್ನು ನೋಡಿ ನೆರೆಹೊರೆಯವರು ಪೊಲೀಸರರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆಗಮಿಸಿ ಮನೆಬಾಗಿಲನ್ನು ಒಡೆದು ನೋಡಿದಾಗ ಅವರು ಮಲಗಿದಲ್ಲೇ ಕೊನೆಯುಸಿರೆಳೆದಿದ್ದುದು ಕಂಡು ಬಂದಿದೆ. ವಿಚ್ಛೇದಿತರಾಗಿ ಒಂಟಿಯಾಗಿ ವಾಸವಿರುವ ಅವರಿಗೆ ಮಕ್ಕಳಿಲ್ಲ.

ಮಂಗಳೂರು ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ಇಂದು ಮುಂಜಾನೆ ಮಂಗಳೂರಿನ ಲ್ಯಾಂಡ್ ಲಿಂಕ್ಸ್ ಗಿರಿನಗರದ ನಿವಾಸದಲ್ಲಿ ನಿಧನರಾಗಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು