ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರೊ. ಜಿ ಎನ್ ಸಾಯಿಬಾಬಾ ಖುಲಾಸೆ ಆದೇಶವನ್ನು ಅಮಾನತ್ತಿನಲ್ಲಿಟ್ಟ ಸುಪ್ರೀಂಕೋರ್ಟ್

PPeepal Media

Peepal Media ದೇಶ, ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಪ್ರೊ. ಜಿ ಎನ್ ಸಾಯಿಬಾಬಾ ಖುಲಾಸೆ ಆದೇಶವನ್ನು ಅಮಾನತ್ತಿನಲ್ಲಿಟ್ಟ ಸುಪ್ರೀಂಕೋರ್ಟ್

ಹೊಸದಿಲ್ಲಿ: ಡೆಲ್ಲಿ ಯೂನಿವರ್ಸಿಟಿ ಪ್ರಾಧ್ಯಾಪಕರಾಗಿದ್ದ ಜಿ ಎನ್‌ ಸಾಯಿಬಾಬಾ ಮತ್ತು ಇತರ ಐವರನ್ನು ಮಾವೋವಾದಿಗಳೊಂದಿಗೆ ನಂಟು ಹೊಂದಿರುವ ಗುರುತರ ಆರೋಪಗಳಿಂದ ಖುಲಾಸೆಗೊಳಿಸಿ ನೆನ್ನೆ ಬಾಂಬೆ ಹೈಕೋರ್ಟು ನೀಡಿದ್ದ ತೀರ್ಪನ್ನು ಇಂದು ಸುಪ್ರೀಂ ಕೋರ್ಟು ಅಮಾನತ್ತುಗೊಳಿಸಿದೆ. ಬಾಂಬೆ ಹೈಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ತುರ್ತು ಮೇಲ್ಮನವಿಯನ್ನು ಪರಿಶೀಲಿಸಿದ ನ್ಯಾ. ಎಂ.ಆರ್.ಶಾ ಮತ್ತು ನ್ಯಾ.ಬೇಲಾ ಎಂ.ತ್ರಿವೇದಿಯವರನ್ನೊಳಗೊಂಡ ಪೀಠವು ಈ ಆದೇಶನ್ನು ಹೊರಡಿಸಿದೆ. ʼಬಾಂಬೆ ಹೈಕೋರ್ಟು ತೀರ್ಪು ನೀಡುವಾಗ ಕೇಸಿನ ಮೆರಿಟ್ಟನ್ನು ಪರಿಗಣನೆಗೆ ತೆಗೆದುಕೊಳ್ಳದಿರುವಲ್ಲಿ ತಪ್ಪೆಸಗಿದೆʼ ಎಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾ.ಶಾ ಬಾಯ್ಮಾತಿನಲ್ಲಿ ತಿಳಿಸಿದರು.

ಪ್ರೊ.ಜಿ.ಎನ್‌.ಸಾಯಿಬಾಬಾ ತಮ್ಮ ಸಂಗಾತಿಯೊಂದಿಗೆ

ಇದೇ ವೇಳೆಯಲ್ಲಿ ಮಹಾರಾಷ್ಟ್ರ ಸರ್ಕಾರವು ಸಲ್ಲಿಸಿರುವ ಅರ್ಜಿಗೆ ಪ್ರೊ ಸಾಯಿಬಾಬಾ ಇನ್ನು ನಾಲ್ಕು ವಾರಗಳಲ್ಲಿ ಉತ್ತರ ನೀಡಬೇಕು ಎಂದೂ ಸುಪ್ರೀಂ ಕೋರ್ಟು ತಿಳಿಸಿದೆ. ಬಾಂಬೆಹೈಕೋರ್ಟು ಇವರನ್ನು ಜೈಲಿನಿಂದ ಬಿಡುಗಡೆಗಳಿಸಬಹುದು ಎಂದು ಹೇಳಿದ್ದಕ್ಕೆ ತಡೆಯನ್ನೂ ಸುಪ್ರೀಂಕೋರ್ಟು ವಿಧಿಸಿದೆ. ಪ್ರೊ. ಸಾಯಿಬಾಬಾ ಅವರು ತಮ್ಮ ಅಂಗವಿಕಲತೆ ಮತ್ತು ಅನಾರೋಗ್ಯ ಕಾರಣಗಳನ್ನು ತಿಳಿಸಿ ತಮ್ಮನ್ನು ಅಂತಿಮ ತೀರ್ಪು ಬರುವ ವರೆಗೆ ಗೃಹಬಂಧನದಲ್ಲಿ ಇರಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟು ತಳ್ಳಿಹಾಕಿದೆ. ಇದಕ್ಕೆ ಮೊದಲು 90% ಅಂಗವಿಕಲತೆ ಹೊಂದಿರುವ ಸಾಯಿಬಾಬಾ ಅವರ ವಕೀಲರಾದ ಹಿರಿಯ ನ್ಯಾಯವಾದಿ ಆರ್‌ ಬಸಂತ್ ಅವರು, ʼಸಾಯಿಬಾಬಾ ಅವರು ವೀಲ್‌ ಚೇರ್‌ ಮೇಲೆಯೇ ಇರಬೇಕಾಗುತ್ತದೆ. ಅವರನ್ನು ಮೂತ್ರ ವಿಸರ್ಜನೆಗೆ ಕೊಂಡೊಯ್ಯಲೂ ಯಾರಾದರೂ ಜೊತೆಗಿರಬೇಕು. ಆದರೆ ಅಂತಹ ಸೌಲಭ್ಯ ಜೈಲಿನಲ್ಲಿ ಇಲ್ಲದಿರುವುದರಿಂದ ಅವರಿಗೆ ಸಮಸ್ಯೆಯಾಗುತ್ತಿದೆ. ಇದು ಅವರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ ಎಂದು ವೈದ್ಯರು ಹೇಳಿದ್ದಾರೆʼ ಎಂದು ತಿಳಿಸಿದ್ದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು, ʼಅರ್ಬನ್‌ ನಕ್ಸಲʼರಿಂದ ಪದೇ ಪದೇ ಗೃಹಬಂಧನದ ಬೇಡಿಕೆಗಳು ಬರುತ್ತಿವೆ ಎಂದಿದ್ದರು.‌

ಮಾರ್ಚ್‌ 2017ರಲ್ಲಿ ಮಹಾರಾಷ್ಟ್ರದ ಗಡ್ಚಿರೋಲಿ ಸೆಷನ್‌ ಕೋರ್ಟು ಪ್ರೊ. ಜಿ ಎನ್‌ ಸಾಯಿಬಾಬಾ ಮತ್ತು ಸಂಗಡಿಗರನ್ನು ಭಯೋತ್ಪಾದನಾ ವಿರೋಧಿ UAPA ಮತ್ತು IPC ಅಡಿಯಲ್ಲಿ ತಪಿತಸ್ಥರು ಎಂದು ತಿಳಿಸಿ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ಬಾಂಬೆ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು