ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವೇದಗಣಿತ ಕಲಿಕೆ- ಸರ್ಕಾರದ ಆದೇಶ ವಾಪಾಸ್‌: ಹೋರಾಟಕ್ಕೆ ಗೆಲುವು

P

Peepal Media • ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ವೇದಗಣಿತ ಕಲಿಕೆ- ಸರ್ಕಾರದ ಆದೇಶ ವಾಪಾಸ್‌: ಹೋರಾಟಕ್ಕೆ ಗೆಲುವು

ಬೆಂಗಳೂರು: ರಾಜ್ಯ ಸರ್ಕಾರವು ಕಳೆದ ಜನವರಿ ತಿಂಗಳಿನಲ್ಲಿ ಎಸ್‌ ಸಿ, ಎಸ್‌ ಟಿ ಅಭಿವೃದ್ಧಿಗೆ ವಿನಿಯೋಗಿಸಬೇಕಾದ ಹಣದಲ್ಲಿ ಕೆಲಸಕ್ಕೆ ಬಾರದ ವೇದಗಣಿತ ಕಲಿಸಲು ಮುಂದಾಗಿ ನೀಡಿದ್ದ ಆದೇಶವನ್ನು ಹಿಂದಕ್ಕೆ ಪಡೆದುಕೊಂಡಿದೆ. ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳ ಸಿಇಓಗಳಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂ.ರಾಜ್)‌ ಇವರಿಂದ ಸುತ್ತೋಲೆ ಹೊರಡಿಸಲಾಗಿದೆ. ಇದರಲ್ಲಿ ಈ ಹಿಂದೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಶೇ.25ರ ಅನುದಾನದಲ್ಲಿ 5 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಯೂನಿಫಾರಂ ಸಮೇತ ವೇದಗಣಿತ ತರಬೇತಿ ನೀಡಲು ಹಿರಿಯೂರಿನ ಎವಿಎಂ ಅಕಾಡೆಮಿಗೆ ಅವಕಾಶ ಕಲ್ಪಿಸಿ ಕೊಟ್ಟಿದ್ದ ಸರ್ಕಾರಿ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ನಿರ್ದೇಶನ ನೀಡಲಾಗಿದೆ.

ರಾಜ್ಯದ ಎಲ್ಲಾ ಸಿಇಒಗಳಿಗೆ ಸರ್ಕಾರ (ಅಪರ) ಮುಖ್ಯ ಕಾರ್ಯದರ್ಶಿಗಳು (ಪಂರಾಜ್)‌ ಕಳಿಸಿರುವ ಸುತ್ತೋಲೆ

ಹಿನ್ನೆಲೆ:

ದಿನಾಂಕ 16-01-22ರಂದು ಸರ್ಕಾರ ಮಾಡಿದ್ದ ಆದೇಶದ ಪ್ರಕಾರ SCSP/TSPಯ ಸುಮಾರು 70 ಕೋಟಿ ಹಣವನ್ನು ವಿದ್ಯಾರ್ಥಿಗಳಿಗೆ ಕೆಲಸಕ್ಕೆ ಬಾರದ ವೇದ ಗಣಿತ ಕಲಿಕೆಗೆ ವಿನಿಯೋಗಿಸುವ ಕೆಲಸ ನಡೆದಿತ್ತು. ವೇದಗಣಿತ ಎಂಬುದೇ ಒಂದು ಬೋಗಸ್‌ ಎಂಬುದು ಹಲವಾರು ವಿದ್ವಾಂಸರ ಅಭಿಪ್ರಾಯವಾಗಿರುವಾಗ ಇದನ್ನು ದಲಿತರ ಹಣದಲ್ಲಿ ಕಲಿಸುವ ಜರೂರತ್ತು ಏನು ಎಂಬ ಪ್ರಶ್ನೆಯನ್ನು ಸರ್ಕಾರಕ್ಕೆ ಹಲವಾರು ಪ್ರಜ್ಞಾವಂತರು ಕೇಳಿದ್ದರು. ಅಲ್ಲದೇ ಹ.ರಾ.ಮಹೇಶ್‌, ಡಾ.ಕೆ.ಎನ್.ನಾಗೇಶ್‌, ರುದ್ರು ಪುನೀತ್‌, ಗೋವಿಂದರಾಜು, ದಲಿತ ಬಹುಜನ ವೆಂಕಟೇಶ್‌, ಕೆ ನಾಗೇಂದ್ರಕುಮಾರ್ ಮೊದಲಾದ ಯುವ ಸಾಮಾಜಿಕ ಚಿಂತಕರು‌, ಕರ್ನಾಟಕ ಬೌದ್ಧ ಸಮಾಜದ ಪ್ರಮುಖರು ಹಾಗೂ ವಕೀಲರ ತಂಡವು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ, ಸಮಾಜಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಿಗೆ ಹಾಗು ಪಂಚಾಯತ್ ರಾಜ್ ಇಲಾಖೆಯ ಅಪರ ಕಾರ್ಯದರ್ಶಿಗಳಿಗೆ ಕಾನೂನಾತ್ಮಕವಾಗಿ ಮನವಿ ಪತ್ರವನ್ನೂ ಸಲ್ಲಿಸಿತ್ತು.

ಈ ಪ್ರತಿಭಟನೆ ಮತ್ತು ಮನವಿಯ ಹಿನ್ನೆಲೆಯಲ್ಲಿ ಇದೀಗ ಸರ್ಕಾರದ ಅಧಿಕಾರಿಗಳು ತಮ್ಮ ಹಿಂದಿನ ಆದೇಶವನ್ನು ಪರಿಶೀಲಿಸಿ, ಆ ಆದೇಶವನ್ನು ಅನೂರ್ಜಿತಗೊಳಿಸಿ, ವೇದಗಣಿತ ಕಲಿಕೆಯ ಕುರಿತ ನಿರ್ದೇಶನವನ್ನು ಹಿಂಪಡೆಯುವ ಆದೇಶವನ್ನು ಹೊರಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಚಿಂತಕ ಹ.ರಾ ಮಹೇಶ್‌ ಅವರು, ‘ವೇದಗಣಿತದ ನೆಪದಲ್ಲಿ ನಾಡಿನ ಸುಮಾರು ಒಂದೂವರೆ ಲಕ್ಷ ಎಸ್‌ ಸಿ, ಎಸ್‌ ಟಿ ವಿದ್ಯಾರ್ಥಿಗಳು ಅನರ್ಥ ವೈದಿಕೀಕರಣಗೊಳ್ಳುವುದನ್ನು ತಪ್ಪಿಸಿದ್ದೇವೆ,  ಇದೊಂದು ಐತಿಹಾಸಿಕ ಗೆಲುವು, ಇದು ಬಾಬಾಸಾಹೇಬರ ಕಾನೂನಿನ ತಾಕತ್ತು’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

P

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version