ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಜ್ವಲ್ ರೇವಣ್ಣನ ಬಗೆಗಿನ ಹೇಳಿಕೆ ; ರಾಹುಲ್ ಗಾಂಧಿ ವಿರುದ್ಧ PIL ದಾಖಲು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಪ್ರಜ್ವಲ್ ರೇವಣ್ಣನ ಬಗೆಗಿನ ಹೇಳಿಕೆ ; ರಾಹುಲ್ ಗಾಂಧಿ ವಿರುದ್ಧ PIL ದಾಖಲು

ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಆಗಿರುವ ಪ್ರಜ್ವಲ್ ರೇವಣ್ಣ ಕುರಿತಾದ ರಾಹುಲ್ ಗಾಂಧಿ ಹೇಳಿಕೆಗೆ ಈಗ ಮತ್ತೊಂದು ಕಂಟಕ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ನೀಡಿದ ಹೇಳಿಕೆಯೊಂದಕ್ಕೆ ಈಗ ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು, ಪ್ರಜ್ವಲ್ ರೇವಣ್ಣನನ್ನು ಸಾಮೂಹಿಕ ಅತ್ಯಾಚಾರಿ ಎಂದು ಕರೆದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಸಾರ್ವಜನಿಕ ಭಾಷಣ ಮಾಡಿದ್ದ ರಾಹುಲ್ ಗಾಂಧಿಯವರು ಪ್ರಜ್ವಲ್ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ಉಲ್ಲೇಖಿಸಿದ್ದರು.

ಇದರ ವಿಡಿಯೋ ಹಿಡಿದು ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ರಾಮು ಅವರು ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಈ ವರೆಗೆ ತೀರ್ಪು ಪ್ರಕಟವಾಗಿಲ್ಲ. ಪ್ರಕರಣ ಇನ್ನೂ ತನಿಖೆಯ ಹಂತದಲ್ಲೇ ಇದೆ. ಸಾಕ್ಷ್ಯಾಧಾರಗಳು ಲಭಿಸಿಲ್ಲ. ರಾಹುಲ್ ಗಾಂಧಿ ಹೇಳಿರುವಂತೆ ಯಾವುದೇ ಮಹಿಳೆಯರೂ ದೂರು ನೀಡಿಲ್ಲ. ಆದರೂ ರಾಹುಲ್ ಗಾಂಧಿಯವರು ಸಾರ್ವಜನಿಕ ಭಾಷಣದಲ್ಲಿ ಪ್ರಜ್ವಲ್ ಅವರನ್ನು ಸಾಮೂಹಿಕ ಅತ್ಯಾಚಾರಿ ಎಂದು ನಿಂದಿಸಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಉದ್ದೇಶಪೂರ್ವಕವಾಗಿ ಪ್ರಜ್ವಲ್ ರೇವಣ್ಣನನ್ನು ದೂರಿದ ಪರಿಣಾಮ ಈಗ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ರಾಹುಲ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಅರ್ಜಿದಾರ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ರಾಮು ಅವರು ಆಗ್ರಹಿಸಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು