ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಕಲಿ ಪಿಹೆಚ್.ಡಿ ಪ್ರಮಾಣ ಪತ್ರ ಹಾಸನ ಜಿಲ್ಲೆಯ 20ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ

ನಕಲಿ ಪಿಹೆಚ್.ಡಿ ಪ್ರಮಾಣ ಪತ್ರ ಹಾಸನ ಜಿಲ್ಲೆಯ 20ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ

ಹಾಸನ : ಅಮಾನ್ಯ ಪಿಹೆಚ್.ಡಿ ಪ್ರಮಾಣ ಪತ್ರ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿರುವ ಆದೇಶದಂತೆ, 2025–26ನೇ ಶೈಕ್ಷಣಿಕ ವರ್ಷದಲ್ಲಿ ನಕಲಿ ಅಥವಾ ಅಮಾನ್ಯ ಪಿಹೆಚ್.ಡಿ ಪ್ರಮಾಣ ಪತ್ರ ಸಲ್ಲಿಸಿರುವ ಅತಿಥಿ ಉಪನ್ಯಾಸಕರನ್ನು ಮುಂದಿನ ಎಲ್ಲಾ ಶೈಕ್ಷಣಿಕ ವರ್ಷಗಳ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಿಂದ ಶಾಶ್ವತವಾಗಿ ಹೊರಗಿಡಲಾಗಿದೆ.

ಇದರ ಜೊತೆಗೆ, ಸರ್ಕಾರಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ವಂಚನೆ ಎಸಗಲು ಯತ್ನಿಸಿರುವ ಆರೋಪದಡಿ ಸಂಬಂಧಪಟ್ಟ ಉಪನ್ಯಾಸಕರ ವಿರುದ್ಧ ಭಾರತ ನ್ಯಾಯ ಸಂಹಿತೆ (BNS) ಅನ್ವಯ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.

ಪ್ರಕರಣ ದಾಖಲಿಸಿದ ಬಳಿಕ ಒಂದು ವಾರದೊಳಗೆ ವರದಿಯನ್ನು ಕಾಲೇಜು ಶಿಕ್ಷಣ ಇಲಾಖೆಗೆ ಸಲ್ಲಿಸುವಂತೆ ಹಾಗೂ ಇಲಾಖೆಯ EMIS ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಆದೇಶಿಸಲಾಗಿದೆ.

ಹಾಸನ ಜಿಲ್ಲೆಯ ಹಲವು ಕಾಲೇಜುಗಳ ಉಪನ್ಯಾಸಕರ ಹೆಸರು ಪಟ್ಟಿಯಲ್ಲಿ
ಸರ್ಕಾರದ ಆದೇಶದ ಅನುಬಂಧಗಳಲ್ಲಿ ಹಾಸನ ಜಿಲ್ಲೆಯ ವಿವಿಧ ಸರ್ಕಾರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹೆಸರೂ ಸೇರಿದೆ.

ಹಾಸನ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಯ ಜೀವನ್ ಕುಮಾರ್ ಸಿ.ಎಂ., ಡಾ. ರೋಹಿ ತಾಜ್, ಶೃತಿ ಎ.ವಿ., ದರ್ಶನ್ ವೈ., ಡಾ. ಧರಣೇಂದ್ರ ಕುಮಾರ್, ಡಾ. ಭರತ್ ಜಿ.ಜಿ., ಡಾ. ಅಂಜುಮ್ ಅರಾ ಆರ್., ಮೊಹಮ್ಮದ್ ಪಾಷಾ ಹಾಗೂ ವಾಸು ಡಿ.ಆರ್. ಅವರ ಹೆಸರುಗಳು ಪಟ್ಟಿಯಲ್ಲಿವೆ.

ಹಾಸನ ಸರ್ಕಾರಿ ಸೈನ್ಸ್ ಕಾಲೇಜುದ ಓಂಕಾರ ಮೂರ್ತಿ, ಡಾ. ಚೂಡಾಮಣಿ ಟಿ., ಹೇಮಾವತಿ ಹಾಗೂ ಪವಿತ್ರ ಎಂ.ಜೆ. ಅವರ ಹೆಸರುಗಳೂ ಸೇರಿವೆ.
ಹಾಸನ ಸರ್ಕಾರಿ ಕಲಾ ಕಾಲೇಜುದ ಮಾಲತಿ ಬಿ.ಆರ್., ಮಾನಸ ಎ.ಎಂ. ಹಾಗೂ ಡಾ. ಮೇಘ ಅವರ ಹೆಸರುಗಳೂ ಆದೇಶದಲ್ಲಿವೆ.

ಇದಲ್ಲದೆ, ಹಾಸನ ಸರ್ಕಾರಿ ಸೈನ್ಸ್ ಕಾಲೇಜುದ ಚಂದ್ರಶೇಖರ್ ಎಂ.ಬಿ., ಬಾಣಾವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜುದ ಪ್ರದೀಪ್ ಟಿ.ಎನ್. ಮತ್ತು ಡಾ. ಉಮೇಶ್, ಹೊಳೆನರಸೀಪುರ ಮಹಿಳಾ ಪ್ರಥಮ ದರ್ಜೆ ಕಾಲೇಜುದ ಎಂ.ಆರ್. ಬಾಬು, ಗಂಧದಕೋಟೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುದ ಡಾ. ಇಂದಿರಾ ಮಣಿ ಹಾಗೂ ಡಾ. ಮಂಜುನಾಥ ಎ.ಕೆ. ಅವರ ಹೆಸರೂ ಪಟ್ಟಿಯಲ್ಲಿದೆ.

ಕಾಲೇಜು ಮಟ್ಟದ ಸಮಿತಿಗಳು, ಕೇಂದ್ರ ಕಚೇರಿಯ ಪರಿಶೀಲನಾ ಸಮಿತಿಯ ವರದಿ ಹಾಗೂ ವಿಶ್ವವಿದ್ಯಾಲಯಗಳಿಂದ ಪಡೆದ ದಾಖಲೆಗಳ ನೈಜತೆ ಪರಿಶೀಲನೆಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಬಾಕ್ಸ್:
ಮೇಲಿನ ಹೆಸರುಗಳು ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯ ಆದೇಶದ ಅನುಬಂಧದಲ್ಲಿ ಉಲ್ಲೇಖವಾಗಿರುವ ಪಟ್ಟಿಯನ್ನು ಆಧರಿಸಿವೆ. ಈ ಆದೇಶದ ವಿರುದ್ಧ ಸಂಬಂಧಪಟ್ಟವರು ಕಾನೂನುಬದ್ಧ ಮೇಲ್ಮನವಿ ಅಥವಾ ನ್ಯಾಯಾಂಗ ಪರಿಹಾರವನ್ನು ಪಡೆಯುವ ಹಕ್ಕು ಹೊಂದಿರುತ್ತಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು