ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಮರುತನಿಖೆ ಸುಪ್ರೀಂಕೋರ್ಟ್ ಆದೇಶ ; ಸಿಬಿಐ ತನಿಖೆ ವಿರುದ್ಧ ತೀವ್ರ ಅಸಮಾಧಾನ

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಮರುತನಿಖೆ ಸುಪ್ರೀಂಕೋರ್ಟ್ ಆದೇಶ ; ಸಿಬಿಐ ತನಿಖೆ ವಿರುದ್ಧ ತೀವ್ರ ಅಸಮಾಧಾನ

ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣದ ಮರುತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ. ಮರುತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸುವಂತೆ ನ್ಯಾಯಾಲಯ ಗಡುವು ವಿಧಿಸಿದೆ.

ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ) ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಸೌಜನ್ಯಾ ಅವರ ತಾಯಿ ಕುಸುಮಾವತಿ ಗೌಡ ಅವರು ಪ್ರಕರಣವನ್ನು ಮರುತನಿಖೆಗೆ ಒಳಪಡಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು.

ಹೈಕೋರ್ಟ್ ಆದೇಶದ ಬಳಿಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ತನಿಖಾ ಪ್ರಕ್ರಿಯೆ ಕುರಿತು ಸಿಬಿಐ ವಿರುದ್ಧ ಈ ಹಿಂದೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಜುಲೈನಲ್ಲಿ ನಡೆದ ವಿಚಾರಣೆ ವೇಳೆ ಸಿಬಿಐ ನಡೆಸಿದ ತನಿಖೆಯನ್ನು ನ್ಯಾಯಾಲಯ ಪ್ರಶ್ನಿಸಿತ್ತು. ತನಿಖೆ ಸ್ವತಂತ್ರವಾಗಿ ನಡೆದಿಲ್ಲ ಹಾಗೂ ಹಿಂದಿನ ತನಿಖೆಯಲ್ಲಿ ಸಂಗ್ರಹಿಸಲಾಗಿದ್ದ ಸಾಕ್ಷ್ಯಗಳು ಮತ್ತು ದಾಖಲೆಗಳನ್ನೇ ಆಧರಿಸಿ ವರದಿ ಸಿದ್ಧಪಡಿಸಲಾಗಿದೆ ಎಂಬ ರೀತಿಯಲ್ಲಿ ನ್ಯಾಯಪೀಠ ಅಸಮಾಧಾನ ದಾಖಲಿಸಿತ್ತು.

‘ವಾಸ್ತವವಾಗಿ, ಸಿಬಿಐನ ತನಿಖಾಧಿಕಾರಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ್ದಾರೆ. ಹಿಂದೆ ಸಂಗ್ರಹಿಸಿದ ಸಾಕ್ಷ್ಯಗಳನ್ನು ಪರಿಶೀಲಿಸಿ ಅವರು ತಮ್ಮ ವರದಿ ಸಲ್ಲಿಸಿದ್ದಾರೆ. ಅವರು ಯಾವುದೇ ಸ್ವತಂತ್ರ ತನಿಖೆ ನಡೆಸಿಲ್ಲ’ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಸಂಜೀವ್ ಸಚ್‌ದೇವ್ ಅವರಿದ್ದ ಪೀಠ ಹೇಳಿತ್ತು.

ಸಿಬಿಐನ ತನಿಖಾ ಪ್ರಕ್ರಿಯೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಲಯ, ಇಂತಹ ತನಿಖೆಯು ಸಂಸ್ಥೆಯ ‘ಕೆಟ್ಟ ಕಾರ್ಯವೈಖರಿ’ಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿ ತೀರ್ಪನ್ನು ಕಾಯ್ದಿರಿಸಿತ್ತು.

ಇದೀಗ ತೀರ್ಪು ಪ್ರಕಟಿಸಿರುವ ಸುಪ್ರೀಂ ಕೋರ್ಟ್, ಸೌಜನ್ಯಾ ಪ್ರಕರಣದ ಮರುತನಿಖೆಗೆ ಆದೇಶಿಸಿರುವುದರೊಂದಿಗೆ ತನಿಖೆಯನ್ನು ನಿಗದಿತ ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದೆ. ಈ ಬೆಳವಣಿಗೆಯು ಹಲವು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಸೌಜನ್ಯಾ ಕುಟುಂಬಕ್ಕೆ ಮಹತ್ವದ ತಿರುವು ನೀಡಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು