ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

“ಥಗ್ ಲೈಫ್”ಗೆ ಸೂಕ್ತ ಭದ್ರತೆ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ; ಅಸ್ತು ಎಂದ ಸರ್ಕಾರ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ಸಿನಿಮಾ

• 1 ನಿಮಿಷದ ಓದು

“ಥಗ್ ಲೈಫ್”ಗೆ ಸೂಕ್ತ ಭದ್ರತೆ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ; ಅಸ್ತು ಎಂದ ಸರ್ಕಾರ

ನಟ ಕಮಲ್ ಹಾಸನ್ ಅವರ ಭಾಷಾ ವಿವಾದದ ನಂತರ ಕರ್ನಾಟಕದಲ್ಲಿ ವ್ಯಾಪಕ ವಿರೋಧ ಎದುರಿಸಿದ ನಂತರ ಥಗ್ ಲೈಫ್ ತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಸಧ್ಯ ಇತ್ತೀಚಿನ ಬೆಳವಣಿಗೆಯಂತೆ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅನುವು ಮಾಡಿಕೊಡುವಂತೆ ಸುಪ್ರೀಂಕೋರ್ಟ್, ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ತಿಳಿಸುವಂತೆ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿತ್ತು, ರಾಜ್ಯ ಸರ್ಕಾರವು ನಿನ್ನೆ (ಜೂನ್ 18) ಸುಪ್ರೀಂಕೋರ್ಟ್​ಗೆ ತನ್ನ ಪ್ರತಿಕ್ರಿಯೆ ತಿಳಿಸಿದೆ. ರಾಜ್ಯ ಸರ್ಕಾರ ನೇರವಾಗಿ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾದ ಮೇಲೆ ನಿಷೇಧ ಹೇರಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ಹಾಗೆಯೇ ಸಿನಿಮಾವನ್ನು ನಿರ್ಮಾಪಕರು ರಾಜ್ಯದಲ್ಲಿ ಬಿಡುಗಡೆ ಮಾಡಲು ಇಚ್ಛಿಸಿದರೆ, ಅದಕ್ಕೆ ಸೂಕ್ತ ಭದ್ರತೆಯನ್ನು ನೀಡುವುದಾಗಿಯೂ ಸಹ ರಾಜ್ಯ ಸರ್ಕಾರ ಹೇಳಿದೆ.

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ನಾಗರೀಕರ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಯಾವುದೇ ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ’ ಎಂದಿರುವ ರಾಜ್ಯ ಸರ್ಕಾರ, ಒಂದೊಮ್ಮೆ ‘ಥಗ್ ಲೈಫ್’ ಸಿನಿಮಾ ರಾಜ್ಯದಲ್ಲಿ ಬಿಡುಗಡೆ ಆದರೆ ಸಿನಿಮಾ ಮತ್ತು ಅದರ ತಂಡಕ್ಕೆ ಸೂಕ್ತ ಭದ್ರತೆ ಒದಗಿಸುವುದಾಗಿ ಸ್ಪಷ್ಟಪಡಿಸಿದೆ.

ಈ ನಡುವೆ ವಿತರಕರು ರಾಜ್ಯದಲ್ಲಿ ಥಗ್ ಲೈಫ್ ರಿಲೀಸ್ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ನಿನ್ನೆಯಷ್ಟೇ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಳಗದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನಾವು ಟಿಕೆಟ್ ಕೊಂಡು ಸಿನಿಮಾ ನೋಡುತ್ತೇವೆ ಎಂಬ ಹೇಳಿಕೆ ಹಲವು ರೀತಿಯಲ್ಲಿ ಅನುಮಾನ ಹುಟ್ಟುವಂತೆ ಮಾಡಿದೆ.

ಸರ್ಕಾರ ಥಿಯೇಟರ್ ಹೊರಗೆ ಭದ್ರತೆ ಕೊಡಬಹುದು. ಆದರೆ ಸಿನಿಮಾ ಥಿಯೇಟರ್ ಒಳಗೆ ರಕ್ಷಣೆ ನೀಡುವುದು ಹೇಗೆ ಎಂಬ ಅನುಮಾನ ಈಗ ರಕ್ಷಣಾ ವೇದಿಕೆ ಮುಖ್ಯಸ್ಥರ ಹೇಳಿಕೆಯಿಂದ ಹೊಸದಾಗಿ ಹುಟ್ಟಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು