ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸುಪ್ರೀಂ ಕೋರ್ಟ್ ಶಾಕ್; ಜಾಮೀನು ರದ್ದು, ಎರಡು ವಾರಗಳಲ್ಲಿ ಶರಣಾಗತಿಗೆ ಸೂಚನೆಒಂದೇ ದಿನದಲ್ಲಿ 4.16 ಲಕ್ಷ ಮತದಾರರ ಅರ್ಜಿ; ಒಂದೇ ವಿಳಾಸದಿಂದ 44 ಅರ್ಜಿಗಳು: ಉತ್ತರ ಪ್ರದೇಶದಲ್ಲಿ ಮತದಾರರ ನೋಂದಣಿಯಲ್ಲಿ ಅಸಾಮಾನ್ಯ ಏರಿಕೆ ಪತ್ತೆಸ್ವತಂತ್ರ ಭಾರದ್ವಾಜ್ ವಿರುದ್ಧ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಪೋಸ್ಟ್‌ ಹಾಕಿದ ಆರೋಪ: ದೆಹಲಿ ಪೊಲೀಸರಿಂದ ವರದಿ ಕೇಳಿದ ನ್ಯಾಯಾಲಯ‘‌ಕೃಷ್ಣನ ಕುರಿತ ಹೇಳಿಕೆಯಿಂದ ನನಗೆ ಬಹಳ ನೋವಾಗಿತ್ತು…’: ಧೀರೇಂದ್ರ ಶಾಸ್ತ್ರಿ ನನ್ನ ತಮ್ಮನಿದ್ದಂತೆ – ಬಾಬಾ ರಾಮದೇವ್ಕಬ್ಬನ್ ಪಾರ್ಕ್‌ನಲ್ಲಿ ಇಂದಿನಿಂದ 13 ದಿನಗಳ ಪುಷ್ಪ ಪ್ರದರ್ಶನ; 15 ಲಕ್ಷಕ್ಕೂ ಅಧಿಕ ಹೂವುಗಳ ಆಕರ್ಷಣೆಮೋದಿ ಸರ್ಕಾರ ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಸರ್ಕಾರಿ ಸಂಸ್ಥೆಗಳನ್ನು ಬಳಸಿಕೊಂಡಿದೆ: ಹ್ಯೂಮನ್ ರೈಟ್ಸ್ ವಾಚ್ ವರದಿಸಾಮಾಜಿಕ ಜಾಲತಾಣಗಳ ರೀಲ್ಸ್‌, ಕಿರು ವಿಡಿಯೊಗಳಿಗೆ ದಿನಾಂಕ ಮತ್ತು ಎಐ ಲೇಬಲ್ ಕಡ್ಡಾಯಗೊಳಿಸಲು ಕೇಂದ್ರಕ್ಕೆ ಉದ್ಯಮಿಗಳ ಸಂಘದಿಂದ ಒತ್ತಾಯಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ರಮ್ಯಾ ಸಾಥ್; ಸರ್ಕಾರದ ಭರವಸೆ ನೆನಪಿಸಿದ ಮಾಜಿ ಸಂಸದೆಒಂದು ಬ್ಯಾಚ್‌ನ ನೀರಿನ ಮಾದರಿಯನ್ನಷ್ಟೇ ಪರೀಕ್ಷೆ ಮಾಡಿದ್ದು: ಬಿಸ್ಲೇರಿ ನೀರು ಸುರಕ್ಷಿತವೆಂದು ಸ್ಪಷ್ಟಪಡಿಸಿದ ಎಫ್‌ಎಸ್‌ಎಸ್‌ಎಐ₹3.5 ಕೋಟಿ ಲಂಚಕ್ಕೆ ಕೆಪಿಎಸ್‌ಸಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಮೊಬೈಲ್‌ ವಶಕ್ಕೆ ಪಡೆದ ಇಡಿಬೆಂಗಳೂರಿನಲ್ಲಿ ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ; ಭದ್ರತೆ ಹೆಚ್ಚಳಗುರುನಾನಕ್ ಜಯಂತಿ: ಪಾಕಿಸ್ತಾನದ ನಂಕಾನಾ ಸಾಹಿಬ್‌ನಲ್ಲಿ ಸಾವಿರಾರು ಭಾರತೀಯ ಸಿಖ್ ಭಕ್ತರ ಸಂಗಮಯುಎಇಯಲ್ಲಿ ಭೀಕರ ರಸ್ತೆ ಅಪಘಾತ: ಭಾರತೀಯರೂ ಸೇರಿ 13 ಮಂದಿ ಸಾವುಭಾವಪುಂಜ : ಮಾತೆಂಬುದು ಜ್ಯೋತಿರ್ಲಿಂಗತಿರುಪ್ಪರಂಕುಂದ್ರಂ ಬೆಟ್ಟದ ದೀಪ ವಿವಾದ: ಸುಪ್ರೀಂ ಕೋರ್ಟ್ ಆದೇಶ, ತಮಿಳುನಾಡು ಸರ್ಕಾರದ ವಿರೋಧ; ಧರ್ಮ ಮತ್ತು ಸಂವಿಧಾನದ ನಡುವೆ ಸಂಘರ್ಷರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಎ.ಐ (AI) ತಂತ್ರಜ್ಞಾನದ ಬಲ – ಸಿಎಸ್ ಡಾ. ಶಾಲಿನಿ ರಜನೀಶ್ಜಿಲ್ಲಾಧಿಕಾರಿ ವಿರುದ್ಧದ ಆರೋಪ – ಪೊಲೀಸ್ ನೋಟಿಸ್‌ಗೆ ಡೋಂಟ್‌ ಕೇರ್ ಎಂದ ಕುಮಾರಸ್ವಾಮಿಬಾಂಗ್ಲಾದೇಶಕ್ಕೆ ಶೇಖ್ ಹಸೀನಾ: ಭಾರತದಿಂದ ವಾಪಸ್; ರಾಷ್ಟ್ರೀಯ ವಿಮಾನವೇ ಬೇಕೆಂಬ ಬೇಡಿಕೆ; ಬಂಧನಕ್ಕೆ ಸಿದ್ಧವಾಗಿರುವ ಸರ್ಕಾರ!ರಾಜಧಾನಿಯಲ್ಲಿ ಕುಡಿದು ವಾಹನ ಚಾಲನೆ – ಒಂದೇ ವಾರದಲ್ಲಿ 744 ಕೇಸ್‌28 ಎಸೆತಗಳಲ್ಲಿ ಶತಕ, 15ನೇ ವಯಸ್ಸಿನಲ್ಲೇ ವಿಶ್ವದಾಖಲೆ: ವೈಭವ್ ಸೂರ್ಯವಂಶಿ ಎಂಬ ಕ್ರಿಕೆಟ್ ವಿಸ್ಮಯ!

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸುಪ್ರೀಂ ಕೋರ್ಟ್ ಶಾಕ್; ಜಾಮೀನು ರದ್ದು, ಎರಡು ವಾರಗಳಲ್ಲಿ ಶರಣಾಗತಿಗೆ ಸೂಚನೆ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸುಪ್ರೀಂ ಕೋರ್ಟ್ ಶಾಕ್; ಜಾಮೀನು ರದ್ದು, ಎರಡು ವಾರಗಳಲ್ಲಿ ಶರಣಾಗತಿಗೆ ಸೂಚನೆ

ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಮತ್ತೆ ಹಿನ್ನಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಶಿಕ್ಷೆ ಅಮಾನತು ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸಲ್ಲಿಸಿದ್ದ ಮೇಲ್ಮನವಿಗಳನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಗೊಳಿಸಿದೆ. ಅಲ್ಲದೆ, ಎರಡು ವಾರಗಳ ಒಳಗಾಗಿ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಶರಣಾಗುವಂತೆ ಸೂಚಿಸಿದೆ.

ಸುಪ್ರೀಂ ಕೋರ್ಟ್‌ನ ಈ ಆದೇಶದಿಂದಾಗಿ ಸದ್ಯ ಜಾಮೀನಿನ ಮೇಲೆ ಹೊರಗಿದ್ದ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರುವ ಪರಿಸ್ಥಿತಿ ಎದುರಾಗಿದೆ.

ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್‌ನಲ್ಲಿ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠವು ಜುಲೈ 31ರಂದು ಶಿಕ್ಷೆಯನ್ನು ಅಮಾನತುಗೊಳಿಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಅಕ್ಟೋಬರ್ 27ರಂದು ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ್ದ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಅಂತಿಮ ಆದೇಶ ಪ್ರಕಟಿಸಿರುವ ನ್ಯಾಯಾಲಯ, ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದೆ.

2016ರಲ್ಲಿ ನಡೆದಿತ್ತು ಯೋಗೇಶ್ ಗೌಡ ಹತ್ಯೆ
2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್‌ನಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿತ್ತು. ಆರಂಭದಲ್ಲಿ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.

ತನಿಖೆಯ ಸಂದರ್ಭದಲ್ಲಿ ಕೊಲೆಯ ಹಿಂದೆ ರಾಜಕೀಯ ದ್ವೇಷ ಮತ್ತು ಸಂಚು ಇತ್ತು ಎಂಬ ಆರೋಪಗಳನ್ನು ಸಿಬಿಐ ಮುಂದಿಟ್ಟಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದರು.

ಸುಮಾರು ಹತ್ತು ವರ್ಷಗಳ ಕಾಲ ನಡೆದ ಕಾನೂನು ಪ್ರಕ್ರಿಯೆಯ ಬಳಿಕ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದ್ದು, ಇದೀಗ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ಆದೇಶ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ನೀಡಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು