ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸ್ವಾತಂತ್ರ್ಯ ದಿನಾಚರಣೆಗೆ 81 ಕೈದಿಗಳ ಬಿಡುಗಡೆಗೆ ಆದೇಶ

PPeepal Media

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಸ್ವಾತಂತ್ರ್ಯ ದಿನಾಚರಣೆಗೆ 81 ಕೈದಿಗಳ ಬಿಡುಗಡೆಗೆ ಆದೇಶ

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ದಿನದಂದು ರಾಜ್ಯದ ವಿವಿಧ ಕಡೆಗಳಲ್ಲಿ ಇರುವ 81 ಕೈದಿಗಳ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶಕ್ಕೆ ಇಂದು ರಾಜ್ಯಪಾಲರು ಸಹಿ ಹಾಕಿದ್ದಾರೆ. ಸನ್ನಡತೆ ಹಿನ್ನೆಲೆಯಲ್ಲಿ ಈ ಕೈದಿಗಳನ್ನು ಬಿಡುಗಡೆ ಮಾಡುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆ ಅಥವಾ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಸನ್ನಡತೆಯ ಹಿನ್ನೆಲೆಯಲ್ಲಿ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿತ್ತು. ಅದರಂತೆ ಈ ಬಾರಿ 81 ಮಂದಿ ಕೈದಿಗಳಿಗೆ ಬಿಡುಗಡೆ ಭಾಗ್ಯ ದೊರಕಿದೆ.

ತಮ್ಮ ಶಿಕ್ಷೆಯ ಪ್ರಮಾಣದಲ್ಲಿ ಶೇ 50 ರಷ್ಟು ಪೂರ್ಣಗೊಳಿಸಿರುವ, ಶಿಕ್ಷೆಯ ಅವಧಿ ಪೂರ್ಣಗೊಳಿಸಿದ್ದರೂ ದಂಡ ಪಾವತಿಸಲಾಗದೇ ಇನ್ನೂ ಜೈಲಿನಲ್ಲೇ ಇರುವ ಕೈದಿಗಳು, ನಿರಂತರ ಅನಾರೋಗ್ಯಕ್ಕೆ ಒಳಗಾಗುತ್ತಿರುವ ಕೈದಿಗಳು,, 18 ರಿಂದ 21 ವರ್ಷಗಳ ಒಳಗಿನ ಕೈದಿಗಳು, ದೈಹಿಕ ಅಂಗವಿಕಲ ಕೈದಿಗಳನ್ನು ಅವರ ಸನ್ನಡತೆಯನ್ನು ಪರಿಶೀಲಿಸಿ ಬಿಡುಗಡೆ ಮಾಡಲಾಗುತ್ತದೆ. ಈ ಪ್ರಕ್ರಿಯೆಗೆ ಪ್ರಮುಖವಾಗಿ ಗೃಹ ಇಲಾಖೆ, ಕಾನೂನು ಇಲಾಖೆ ಅಧಿಕಾರಿಗಳು ಮತ್ತು ಜೈಲಿನ ಅಧಿಕಾರಿಗಳ ಜೊತೆಗೆ ಚರ್ಚಿಸಲಾಗುತ್ತದೆ. ನಂತರ ಬಿಡುಗಡೆ ಹೊಂದಬಹುದಾದ ಕೈದಿಗಳ ಆಯ್ಕೆ ಮಾಡಲಾಗುತ್ತದೆ. ನಂತರ ಸಂಪುಟದಲ್ಲಿ ಚರ್ಚಿಸಿ ಮುಖ್ಯಮಂತ್ರಿಗಳ ಮೂಲಕ ಆದೇಶ ಹೊರಡಿಸಲಾಗುತ್ತದೆ.

ಇಡೀ ರಾಜ್ಯದಲ್ಲಿ ಒಟ್ಟು ಸುಮಾರು 15,000 ಕ್ಕೂ ಹೆಚ್ಚು ಕೈದಿಗಳು ಕೇಂದ್ರ, ಜಿಲ್ಲಾ, ಮುಕ್ತ ಮತ್ತು ತಾಲ್ಲೂಕು ಮಟ್ಟದ ಜೈಲುಗಳಲ್ಲಿ ಬಂಧಿಗಳಾಗಿದ್ದಾರೆ. ಅದರಲ್ಲಿ 10,000 ಕೈದಿಗಳು ವಿಚಾರಣಾಧೀನ ಕೈದಿಗಳಾಗಿದ್ದಾರೆ‌. ಈ ಬಾರಿ ವಿಶೇಷವಾಗಿ ಸ್ವಾತಂತ್ರ್ಯ ದಿನದ 75 ನೇ ವರ್ಷದ ಅಮೃತ ಮಹೋತ್ಸವಕ್ಕೆ ಈ ಕೈದಿಗಳು ಬಿಡುಗಡೆ ಆಗುತ್ತಿದ್ದಾರೆ.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು