ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಮಿಷನ್ ಹಣಕ್ಕಾಗಿ ಗಂಗಾಜಲ ಹಿಡಿದು ಪ್ರಮಾಣ – ಭ್ರಷ್ಟಾಚಾರದಲ್ಲೂ ಪ್ರಾಮಾಣಿಕತೆ ಮರೆದ ಉತ್ತರ ಪ್ರದೇಶದ ರಾಜಕರಣಿಗಳು

ಕಮಿಷನ್ ಹಣಕ್ಕಾಗಿ ಗಂಗಾಜಲ ಹಿಡಿದು ಪ್ರಮಾಣ – ಭ್ರಷ್ಟಾಚಾರದಲ್ಲೂ ಪ್ರಾಮಾಣಿಕತೆ ಮರೆದ ಉತ್ತರ ಪ್ರದೇಶದ ರಾಜಕರಣಿಗಳು

ಉತ್ತರ ಪ್ರದೇಶ: ರಾಜಕಾರಣಿಗಳು ಜನಸೇವೆಯೇ ಜನಾರ್ಧನ ಸೇವೆಯನ್ನುತ್ತಾ ಅಧಿಕಾರಕ್ಕೆ ಬರುತ್ತಾರೆ. ಆದರೆ, ಅಧಿಕಾರಕ್ಕೆ ಬಂದ ಮೇಲೆ ಜನರು ಇಲ್ಲ, ಜನಾರ್ದನನೂ ಇಲ್ಲ ಎನ್ನುವ ಮಾತು ಅಕ್ಷರಶಃ ಸತ್ಯ! ಹೌದು, ಉತ್ತರ ಪ್ರದೇಶದ ಶಹಜಹಾನ್‌ಪುರ ಮಹಾನಗರ ಪಾಲಿಕೆಯ ಹಲವು ಕಾರ್ಪೊರೇಟರ್‌ಗಳು ಗಂಗಾಜಲ ಹಿಡಿದು, ಲಂಚದ ಹಣವನ್ನು ತಮ್ಮ ನಡುವೆ ಪ್ರಾಮಾಣಿಕವಾಗಿ ಹಂಚಿಕೊಳ್ಳುವುದಾಗಿ ಪ್ರಮಾಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ವೈರಲ್ ವಿಡಿಯೋ?

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಉತ್ತರ ಪ್ರದೇಶದ ಶಹಜಹಾನ್‌ಪುರ ಮಹಾನಗರ ಪಾಲಿಕೆಯ ಕೆಲವು ಕಾರ್ಪೊರೇಟರ್‌ಗಳು ಒಟ್ಟಿಗೆ ಕುಳಿತುಕೊಂಡು, ಒಬ್ಬರ ಕೈಯಲ್ಲಿ ಗಂಗಾಜಲವಿರುವ ಬಾಟಲಿಯನ್ನು ಹಿಡಿದು ಲಂಚದ ಹಣದ ಹಂಚಿಕೆ ಬಗ್ಗೆ ಪ್ರಮಾಣ ಮಾಡುತ್ತಿರುವುದು ಕಂಡುಬಂದಿದೆ. ಅದರಂತೆ, ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಂದಿರುವ ಕಮಿಷನ್ ಹಣವನ್ನು ಎಲ್ಲರೂ ಸಮಾನವಾಗಿ ಮತ್ತು ಪ್ರಾಮಾಣಿಕವಾಗಿ ಹಂಚಿಕೊಳ್ಳಬೇಕು, ಯಾರೂ ಯಾರಿಗೂ ಮೋಸ ಮಾಡಬಾರದು ಎಂದು ಅವರು ಗಂಗಾಜಲದ ಮೇಲೆ ಆಣೆ ಮಾಡಿದ್ದಾರೆ. ಅದರಲ್ಲೂ, ಈ ವಿಡಿಯೋದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳಾದ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಕಾರ್ಪೊರೇಟರ್‌ಗಳು ಒಟ್ಟಿಗೆ ಇರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಮುಂದುವರೆದು, ವೈರಲ್ ವಿಡಿಯೋದಲ್ಲಿ, ಮಹಾನಗರ ಪಾಲಿಕೆಗೆ ಬರುವ ಹಣವನ್ನು ಎಲ್ಲಾ 60 ಜನ ಸದಸ್ಯರ ನಡುವೆ ಸಮಾನವಾಗಿ ಹಂಚಿಕೊಳ್ಳುವ ಬಗ್ಗೆ ಮತ್ತು ಯಾವುದೇ ಸದಸ್ಯರು ಸಂಕಷ್ಟಕ್ಕೆ ಸಿಲುಕಿದಾಗ ಒಗ್ಗಟ್ಟಾಗಿ ನಿಲ್ಲುವ ಬಗ್ಗೆ ಪ್ರತಿಜ್ಞೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಪ್ರಮಾಣವಚನವನ್ನು ಉಲ್ಲಂಘಿಸಿದ ಓರ್ವ ಪಾಲಿಕೆ ಸದಸ್ಯನನ್ನು, ಇತರರು ದೇಶದ್ರೋಹಿ ಎಂದು ಕರೆದಿರುವುದನ್ನು ಸ್ಪಷ್ಟವಾಗಿ ಕೇಳಬಹುದಾಗಿದೆ. ಮತ್ತೊಂದೆಡೆ, ಸಾಮಾನ್ಯವಾಗಿ, ಭ್ರಷ್ಟಾಚಾರವನ್ನು ತಡೆಯಲು ಗಂಗಾಜಲದ ಮೇಲೆ ಆಣೆ ಮಾಡುವುದನ್ನು ಕೇಳಿದ್ದೇವೆ. ಆದರೆ, ಲಂಚದ ಹಣವನ್ನು ಸರಿಯಾಗಿ ಹಂಚಿಕೊಳ್ಳಲು ಗಂಗಾಜಲದ ಮೇಲೆ ಪ್ರಮಾಣ ಮಾಡಿರುವುದನ್ನು ಕಂಡು ಸಾರ್ವಜನಿಕರು ತೀವ್ರ ಆಕ್ರೋಶ ಮತ್ತು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇನ್ನು, ಈ ವಿಡಿಯೋ ವೈರಲ್ ಬೆನ್ನಲ್ಲೇ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಜನರಿದ ಕೇಳಿಬಂದಿದೆ.

ವಿಷಯಗಳು: #india #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು