ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತಿಹಾರ್ ಜೈಲಿಗೆ ತಹಾವುರ್ ರಾಣಾ ; ವಶಕ್ಕೆ ಪಡೆದ ಎನ್‌ಐಎ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ಮೀಡಿಯಾ

• 1 ನಿಮಿಷದ ಓದು

ತಿಹಾರ್ ಜೈಲಿಗೆ ತಹಾವುರ್ ರಾಣಾ ; ವಶಕ್ಕೆ ಪಡೆದ ಎನ್‌ಐಎ

26/11 ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ಆರೋಪಿ ತಹಾವುರ್ ರಾಣಾನನ್ನು ಗುರುವಾರ ವಿಶೇಷ ವಿಮಾನದ ಮೂಲಕ ದೆಹಲಿಗೆ ಕರೆತರಲಾಗಿದೆ. ಅಮೆರಿಕದಿಂದ ಗಡಿಪಾರುಗೊಂಡ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆತನನ್ನು ವಶಕ್ಕೆ ತೆಗೆದುಕೊಂಡಿದೆ.

ರಾಣಾ ವಿರುದ್ಧ ಕ್ರಿಮಿನಲ್ ಸಂಚು, ಭಾರತ ಸರಕಾರದ ವಿರುದ್ಧ ಸಮರ ಸಾರುವಿಕೆ, ಹತ್ಯೆ, ಫೋರ್ಜರಿ ಪ್ರಕರಣಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಗೆ ಸಂಬಂಧಿಸಿದ ಆರೋಪಗಳನ್ನು ಹೊರಿಸಲಾಗಿದೆ. ಪ್ರಸ್ತುತ ಆತನನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಭಾರತಕ್ಕೆ ಗಡಿಪಾರುಗೊಳಿಸುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು, ಉದರಕ್ಕೆ ಸಂಬಂಧಿಸಿದ ಕಾಯಿಲೆ, ಪಾರ್ಕಿನ್ಸನ್ ರೋಗ ಸೇರಿದಂತೆ ವಿವಿಧ ವ್ಯಾಧಿಗಳಿಂದ ಬಳಲುತ್ತಿರುವುದರಿಂದ ಗಡಿಪಾರು ಮಾಡದಂತೆ ಅಮೇರಿಕಾ ಸರ್ವೋಚ್ಚ ನ್ಯಾಯಾಲಯಕ್ಕೆ ಕೋರಿದ್ದನು. ರಾಣಾನ ಮನವಿಯನ್ನು ಅಮೆರಿಕದ ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದ ಬೆನ್ನಲ್ಲೇ ಎನ್‌ಐಎ ಹಾಗೂ ದೇಶದ ಬೇಹುಗಾರಿಕಾ ಸಂಸ್ಥೆ ‘ರಾ’ದ ಅಧಿಕಾರಿಗಳ ಜಂಟಿ ತಂಡವೊಂದು ರಾಣಾನನ್ನು ಕರೆತರಲು ಅಮೆರಿಕಕ್ಕೆ ತೆರಳಿತ್ತು.

ಪಾಕ್ ಮೂಲದ ಕೆನಡ ಪ್ರಜೆಯಾದ ರಾಣಾ ಮುಂಬೈ ಭಯೋತ್ಪಾದಕ ದಾಳಿಗಾಗಿ ಸಾಗಣೆ ಹಾಗೂ ಆರ್ಥಿಕ ಬೆಂಬಲವನ್ನು ಒದಗಿಸಿದ್ದನೆಂದು ಪ್ರಕರಣದ ಇನ್ನೋರ್ವ ಪ್ರಮುಖ ಆರೋಪಿ ಪಾಕ್ ಮೂಲದ ಅಮೆರಿಕನ್ ಉಗ್ರ ಡೇವಿಡ್ ಕೋಲ್‌ ಮ್ಯಾನ್ ಹ್ಯಾಡ್ಲಿ ಆಪಾದಿಸಿದ್ದನು.

ರಾಣಾ, ಡೇವಿಡ್ ಕೋಲ್ಮನ್ ಹ್ಯಾಡ್ಲಿ ಹಾಗೂ ಇತರ ಆರು ಮಂದಿ ಭಾರತದಲ್ಲಿ ಭಯೋತ್ಪಾದಕ ದಾಳಿಗೆ ಸಂಚುಹೂಡಿದ ಹಾಗೂ ಅವುಗಳನ್ನು ಕಾರ್ಯಗತಗೊಳಿಸಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ರಾಷ್ಟ್ರೀಯ ತನಿಖಾ ಸಂಸ್ಥೆಯು 2011ರ ಡಿಸೆಂಬರ್‌ ನಲ್ಲಿ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಆರೋಪಿಸಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು