ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಳೆಯಿಂದ ಆಗಬಹುದಾದ ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಿ – ಜಿಲ್ಲಾಧಿಕಾರಿ ಸತ್ಯಭಾಮ

ಮಳೆಯಿಂದ ಆಗಬಹುದಾದ ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಿ – ಜಿಲ್ಲಾಧಿಕಾರಿ ಸತ್ಯಭಾಮ


ಹಾಸನ : ಜಿಲ್ಲೆಯಲ್ಲಿ ಮಳೆಯಿಂದ ಆಗಬಹುದಾದ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸತ್ಯಭಾಮಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದಅವರು ಜಲಾಶಯಗಳಿಗೆ ಭದ್ರತೆ ವ್ಯವಸ್ಥೆಗೆ ಹೆಚ್ಚಿನ ಗಮನಹರಿಸಿ ಎಂದು ತಿಳಿಸಿದರು. ಎಲ್ಲಾ ತಹಸೀಲ್ದಾರ್ ಗಳು ಮಳೆಯ ಸಂದರ್ಭದಲ್ಲಿಕೆರೆ,ಕೋಡಿ,ಏರಿಒಡೆದು ಸಂಭವಿಸಬಹುದಾದ ಅನಾಹುತ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆವಹಿಸಿ ಎಂದು ಸೂಚಿಸಿದರು. ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ಸರ್ಕಾರದ ಮಾರ್ಗ ಸೂಚಿಗಳಂತೆ ಪರಿಹಾರ ನೀಡಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.ಕಳೆದ ವರ್ಷ ಸಕಲೇಶಪುರದ ಅಜಾದ್ ನಗರ ಮತ್ತು ಹೊಳೆನರಸೀಪುರದ ಶಾದಿ ಮಹಲ್ ಬಳಿ ಮನೆಗಳಿಗೆ ನೀರು ನುಗ್ಗಿತ್ತು ಈ ಬಾರಿ ಮರುಕಳಿಸದಂತೆ ಎಚ್ಚರಿವಹಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಳೆಯಿಂದ ಹಾನಿಯಾಗಿರುವ ಕೃಷಿ ಮತ್ತುತೋಟಗಾರಿಕೆ ಬೆಳೆಗಳ ಬಗ್ಗೆ ಪಂಚಾಯಿತಿವಾರು ಪರಿಶೀಲನೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ನಗರ ಪ್ರದೇಶಗಳಲ್ಲಿ ರಾಜಕಾಲುವೆಗಳು ಮತ್ತು ಚರಂಡಿಗಳನ್ನು ಸ್ವಚ್ಚತೆಗೆ ಕ್ರಮವಹಿಸಿ ಮಳೆಯ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಸಿಡಿಲು ಬಂದ ಸಂದರ್ಭದಲ್ಲಿ ಅನುಸರಿಸುವ ಮುನ್ನೆಚ್ಚರಿಕೆ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಅರಿವು ಮೂಡಿಸಲು ಸೂಚಿಸಿದರಲ್ಲದೆ, ಮಳೆಗಾಳಿಗೆ ಬಿಳುವಂತಿರುವ ಮರ ಮತ್ತು ವಿದ್ಯುತ್ ಕಂಬಗಳನ್ನು ಗುರುತಿಸಿ ಅಗತ್ಯಕ್ರಮ ಕೈಗೊಳ್ಳಲು ತಿಳಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿತಮ್ಮಯ್ಯ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ಮೂರ್ತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು