ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದಿ ಫೈಲ್ ಪತ್ರಕರ್ತ ಜಿ. ಮಹಂತೇಶ್ ಗೆ ಜೀವ ಬೆದರಿಕೆ – FIR ದಾಖಲು ತನಿಖೆ ಆರಂಭ

ದಿ ಫೈಲ್ ಪತ್ರಕರ್ತ ಜಿ. ಮಹಂತೇಶ್ ಗೆ ಜೀವ ಬೆದರಿಕೆ – FIR ದಾಖಲು ತನಿಖೆ ಆರಂಭ

ಬೆಂಗಳೂರು: ‘ದಿ ಫೈಲ್’ (The File) ಸುದ್ದಿ ಪೋರ್ಟಲ್‌ನ ಸಂಪಾದಕ ಜಿ. ಮಹಂತೇಶ್ ಅವರಿಗೆ ವಾಟ್ಸಾಪ್ ಕರೆಯ ಮೂಲಕ ಜೀವ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಿನಿ ಲೇಔಟ್ ಪೊಲೀಸರು ಅಂತಿಮವಾಗಿ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಖಾಸಗಿ ಟ್ರಸ್ಟ್ ಒಂದರ ಕುರಿತು ವೆಬ್‌ಸೈಟ್ ಪ್ರಕಟಿಸಿದ್ದ ಎರಡು ವರದಿಗಳಿಗೆ ಸಂಬಂಧಿಸಿದಂತೆ ಈ ಬೆದರಿಕೆಗಳನ್ನು ಒಡ್ಡಲಾಗಿತ್ತು ಎಂದು ಆರೋಪಿಸಲಾಗಿದೆ.

ಗುರುವಾರ ದೂರು ಸ್ವೀಕರಿಸಿದ್ದ ನಂದಿನಿ ಲೇಔಟ್ ಪೊಲೀಸರು ಆರಂಭದಲ್ಲಿ ಎನ್‌ಸಿಆರ್ (NCR – Non-Cognizable Report) ದಾಖಲಿಸಿದ್ದರು.

ಅಪರಿಚಿತ ವ್ಯಕ್ತಿಯ ವಿರುದ್ಧ ಎನ್‌ಸಿಆರ್ ಮೂಲಕ ಕ್ರಮ ಕೈಗೊಂಡಿದ್ದಕ್ಕಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕರ್ನಾಟಕ ರಾಷ್ಟ್ರ ಸಮಿತಿ ಸೇರಿದಂತೆ ಹಲವು ನಾಯಕರು ತೀವ್ರವಾಗಿ ಟೀಕಿಸಿದ್ದರು.ಈ ವಿಷಯದ ಕುರಿತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಹ ಪತ್ರಿಕಾ ಹೇಳಿಕೆಯನ್ನು ನೀಡಿತ್ತು. ಪೊಲೀಸರು ಗುರುವಾರ ರಾತ್ರಿ ಸುಮಾರು 10.30ರ ಸುಮಾರಿಗೆ ಎಫ್‌ಐಆರ್ ದಾಖಲಿಸಿದ್ದಾರೆ.

ದೂರಿನಲ್ಲಿ ನೀಡಲಾದ ಮೊಬೈಲ್ ಸಂಖ್ಯೆಯನ್ನು ಉಲ್ಲೇಖಿಸಿರುವ ಪೊಲೀಸರು, ಅಪರಿಚಿತ ವ್ಯಕ್ತಿಯ ವಿರುದ್ಧ ಬಿಎನ್‌ಎಸ್ (BNS) ಸೆಕ್ಷನ್ 352 (ಶಾಂತಿ ಭಂಗವನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಮತ್ತು ಬಿಎನ್‌ಎಸ್ ಸೆಕ್ಷನ್ 351(3) (ಗಂಭೀರ ಹಾನಿ, ಸಾವು ಅಥವಾ ಆಸ್ತಿಗೆ ಭಾರಿ ಹಾನಿ ಉಂಟುಮಾಡುವ ಬೆದರಿಕೆಗಳನ್ನು ಒಳಗೊಂಡಿರುವ ತೀವ್ರ ಸ್ವರೂಪದ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿಷಯಗಳು: #karnataka #news
ರ

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version