ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ವಾಪಸ್‌ ಬಂದ್ರೆ ಕೊಲ್ತೀವಿ: ಶೇಖ್ ಹಸೀನಾರನ್ನು ಎಚ್ಚರಿಸಿದ ಬಾಂಗ್ಲಾ ದೇಶದ ಮುಖ್ಯ ಅಭಿಯೋಜಕ2004ರಲ್ಲಿ ಸೋನಿಯಾ ಗಾಂಧಿ ಪ್ರಧಾನಿ ಹುದ್ದೆ ನಿರಾಕರಿಸಿದ್ದೇಕೆ?; ಸೋನಿಯಾ ಗಾಂಧಿ ಆತ್ಮಕಥನದಲ್ಲಿ ಮಹತ್ವದ ವಿಚಾರ ಬಹಿರಂಗಕರ್ನಾಟಕ ಉರ್ದು ಅಕಾಡೆಮಿಗೆ ಹೆಚ್ಚಿನ ಅನುದಾನ, ಅಲ್ಪಸಂಖ್ಯಾತರ ಸಮಸ್ಯೆಗಳ ಚರ್ಚೆಗೆ ಪ್ರತ್ಯೇಕ ಸಭೆ: ಡಿ.ಕೆ. ಶಿವಕುಮಾರ್ ಭರವಸೆಜಿಟಿ ದೇವೇಗೌಡ ಜೆಡಿಎಸ್‌ನಲ್ಲಿ ಮುಂದುವರಿಯೋದು ಡೌಟ್! ಬಿಜೆಪಿ, ಕಾಂಗ್ರೆಸ್ ಆಫರ್ ಗುಟ್ಟು ರಟ್ಟುಚುನಾವಣಾ ನೀತಿ ಸಂಹಿತೆ: ಮರುನೇಮಕಗೊಂಡ ನಿವೃತ್ತ ಸರ್ಕಾರಿ ಅಧಿಕಾರಿಗಳಿಗೂ ರಾಜಕೀಯ ಚಟುವಟಿಕೆ ನಿಷೇಧ; ಚುನಾವಣಾ ಆಯೋಗದ ಸೂಚನೆಕರ್ನಾಟಕದ 64 ಕ್ಷೇತ್ರಗಳಲ್ಲಿ 8.80 ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರ ಹೆಸರು ಅಳಿಸಲಾಗಿದೆ: ಮುಸ್ಲಿಂ ಒಕ್ಕೂಟ ಆರೋಪಗೌರಿ ಲಂಕೇಶ್, ಕಲಬುರ್ಗಿ ಹತ್ಯೆ ಪ್ರಕರಣ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೇಜಸ್ವಿ ಸೂರ್ಯ ತಿರುಗೇಟು; ಮೂರು ದಿನಗಳಲ್ಲಿ ಸಾಕ್ಷ್ಯ ನೀಡುವಂತೆ ಸವಾಲುಭಾವಪುಂಜ – 3 : ಅಡುಗೆಮನೆ ಅಂದು ಇಂದುಬೆಂಗಳೂರು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ವಿಜಯನಗರ ನಿಲ್ದಾಣದಲ್ಲಿ ಹಳಿಗೆ ಹಾರಿದ ಪ್ರಯಾಣಿಕನಾಟಕಕ್ಕೂ ಬೇಕಾ ಪೋಲೀಸ್ ಕಣ್ಗಾವಲು?ರಾಮಾಯಣ ಮತ್ತು ಕರುನಾಡಿನ ಭೌಗೋಳಿಕ ನಂಟುಕಲಬುರಗಿ ಸಮೀಪ ಶರಣರ ವಚನ ಪರಂಪರೆಗೆ ಹೊಸ ಸ್ಪರ್ಶ; ವಚನ ಮಂಟಪ ನಿರ್ಮಾಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಿಂತನೆರಾಜ್ಯ ಕಂದಾಯ ಇಲಾಖೆಯಲ್ಲಿ ಭಾರಿ ವರ್ಗಾವಣೆ: 35 ತಹಶೀಲ್ದಾರ್‌ಗಳಿಗೆ ಹೊಸ ಜವಾಬ್ದಾರಿಏಳು ಮಂದಿಯ ಭೀಕರ ಹತ್ಯೆ ಪ್ರಕರಣ ಶಿರಾಡಿಘಾಟ್ ಕಂದಕದಲ್ಲಿ – ಬೆಚ್ಚಿ ಬೀಳಿಸುವ ಸಂಗತಿE20 ಪೆಟ್ರೋಲ್ ವಿವಾದಕ್ಕೆ ಮತ್ತೊಂದು ತಿರುವು: 20% ಎಥನಾಲ್ ಎಂದ BPCL ಪೋಸ್ಟ್‌ನಲ್ಲಿ ಕಂಡಿದ್ದು 33%; ತಕ್ಷಣವೇ ಟ್ವಿಟ್ ಡಿಲೀಟ್ಟರ್ಕಿಯ ಉಕ್ಕಿನ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 16 ಕಾರ್ಮಿಕರು ಸಾವು, ಹಲವರಿಗೆ ಗಾಯಐಫೋನ್ ಬಿಡಿಭಾಗಗಳ ತಯಾರಿಕಾ ಘಟಕದಲ್ಲಿ ದುರಂತ; ವಿಷಕಾರಿ ಅನಿಲ ಸೇವಿಸಿ ಮೂವರು ಕಾರ್ಮಿಕರು ಸಾವು!ಹಾಸನ DC ಹುದ್ದೆಯಲ್ಲಿ ಮುಂದುವರಿಯಲು ₹75 ಲಕ್ಷ ಲಂಚ – ತನಿಖೆಗೆ HDK ಒತ್ತಾಯದೀಪಾವಳಿ ಪಟಾಕಿ ಹಾವಳಿ; ದೆಹಲಿ ವಾಯುಮಾಲಿನ್ಯದ ನಂತರ ಬೆಂಗಳೂರಿನ ಗಾಳಿ ಕಲುಷಿತ!ಮಾಲಿನ್ಯದಲ್ಲಿ ಶೇ.25ರಷ್ಟು ಏರಿಕೆLPG ಕೆ.ಜಿಗೆ 11 ರೂ ಹೆಚ್ಚಳ ಆಟೋ ಚಾಲಕರಿಗೆ – ಗಾಯದ ಮೇಲೆ ಬರೆ

ಏಳು ಮಂದಿಯ ಭೀಕರ ಹತ್ಯೆ ಪ್ರಕರಣ ಶಿರಾಡಿಘಾಟ್ ಕಂದಕದಲ್ಲಿ – ಬೆಚ್ಚಿ ಬೀಳಿಸುವ ಸಂಗತಿ

ಏಳು ಮಂದಿಯ ಭೀಕರ ಹತ್ಯೆ ಪ್ರಕರಣ ಶಿರಾಡಿಘಾಟ್ ಕಂದಕದಲ್ಲಿ – ಬೆಚ್ಚಿ ಬೀಳಿಸುವ ಸಂಗತಿ

ಹಾಸನ: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್‌ನ ಮಾರನಹಳ್ಳಿ ಸಮೀಪದ ಕಂದಕಕ್ಕೆ ಎಸೆಯಲಾಗಿದ್ದ ನಳಿನಿ ಹಾಗೂ ಶಂಕರ್ ಅವರ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ.

ಕೊಲೆ ಪ್ರಕರಣದ ಆರೋಪಿ ಇಂದುಶೇಖರ್ ನೀಡಿದ ಮಾಹಿತಿ ಮೇರೆಗೆ ಪೊಲೀಸರು ಶವಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಿದರು. ಆದರೆ, ಶವಗಳನ್ನು ಎಸೆದಿದ್ದ ನಿಖರ ಸ್ಥಳವನ್ನು ತೋರಿಸದೆ ಆರೋಪಿಯು ಪೊಲೀಸರನ್ನು ಹಲವು ಕಡೆ ಅಲೆದಾಡಿಸಿದ್ದಾನೆ. ಐದಾರು ಸ್ಥಳಗಳನ್ನು ತೋರಿಸಿ ತನಿಖಾಧಿಕಾರಿಗಳನ್ನು ದಾರಿ ತಪ್ಪಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ. ಕೊನೆಗೆ ಶವಗಳನ್ನು ಎಸೆದಿದ್ದ ಸ್ಥಳವನ್ನು ತೋರಿಸಿದ್ದಾನೆ.

ಮಲ್ಲೇಶ್ವರಂ ಎಎಸ್ಪಿ ಪ್ರಭಾವತಿ ಅವರ ನೇತೃತ್ವದಲ್ಲಿ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರನಹಳ್ಳಿ ಸಮೀಪ ಕಾರ್ಯಾಚರಣೆ ನಡೆಯಿತು. ಸುಮಾರು 100 ಅಡಿ ಆಳದ ಕಂದಕಕ್ಕೆ ಹಗ್ಗದ ಸಹಾಯದಿಂದ ಇಳಿದ ಪೊಲೀಸರು ನಳಿನಿ ಮತ್ತು ಶಂಕರ್ ಅವರ ಮೃತದೇಹಗಳನ್ನು ಹೊರತೆಗೆದರು. ನಂತರ ಮೃತದೇಹಗಳನ್ನು ಆಂಬ್ಯುಲೆನ್ಸ್ ಮೂಲಕ ಹಾಸನದ ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು. ಆರೋಪಿ ಇಂದುಶೇಖರ್‌ನನ್ನು ಪೊಲೀಸರು ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಆರಂಭಕ್ಕೂ ಸುಮಾರು ಒಂದು ಗಂಟೆ ಮುಂಚಿತವಾಗಿಯೇ ಸ್ಥಳದಿಂದ ಕರೆದೊಯ್ದಿದ್ದರು. ಮೃತರ ಕುಟುಂಬಸ್ಥರು ಆಂಬ್ಯುಲೆನ್ಸ್ ಹಿಂಬಾಲಿಸಿ ತೆರಳಿದರು.

ಸ್ಥಳದಲ್ಲಿ ನಳಿನಿ ಅವರ ಕುಟುಂಬಸ್ಥರು ಉಪಸ್ಥಿತರಿದ್ದು, ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು