ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗೃಹಲಕ್ಷ್ಮಿ ಯೋಜನೆ ಇದು ಸಬಲೀಕರಣವಲ್ಲ, ದೊಡ್ಡ ಹಗರಣ – ಆರ್. ಅಶೋಕ್

ಗೃಹಲಕ್ಷ್ಮಿ ಯೋಜನೆ ಇದು ಸಬಲೀಕರಣವಲ್ಲ, ದೊಡ್ಡ ಹಗರಣ – ಆರ್. ಅಶೋಕ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಗೆ ಮೂರು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ತೀವ್ರಗೊಂಡಿದೆ.ಯೋಜನೆಯ ಮೂರು ವರ್ಷಗಳ ಸಂಭ್ರಮಾಚರಣೆಯನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರವಾಗಿ ಖಂಡಿಸಿದ್ದು, ಇದನ್ನು “ನಾಚಿಕೆಗೇಡಿನ ಮಹಾ ಹಗರಣ” ಎಂದು ಬಣ್ಣಿಸಿದ್ದಾರೆ.ಯೋಜನೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ ಅವರು, ಹಲವು ಲೋಪಗಳ ನಡುವೆಯೂ ಸರ್ಕಾರ ಯೋಜನೆಯ ಮೂರನೇ ವರ್ಷಾಚರಣೆ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಾರೆ.

ಜೂನ್‌ವರೆಗೆ 1,10,562 ಮೃತ ಫಲಾನುಭವಿಗಳ ಖಾತೆಗಳಿಗೆ ರೂ.117.31 ಕೋಟಿ ಜಮೆಯಾಗಿತ್ತು ಎಂದು ಆರೋಪಿಸಿದ ಅವರು, ಜೀವಂತ ಫಲಾನುಭವಿಗಳಿಗೆ ಮಾತ್ರ ಸರ್ಕಾರ ಸಮಯಕ್ಕೆ ಸರಿಯಾಗಿ ಹಣ ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು.ನೈಜ ಫಲಾನುಭವಿಗಳಿಗೆ ಮಾಸಿಕ ಕಂತುಗಳು ವಿಳಂಬವಾಗುತ್ತಿವೆ ಎಂದು ಆರೋಪಿಸಿದ ಅಶೋಕ್, ಯೋಜನೆಯಲ್ಲಿನ ಅಕ್ರಮಗಳಿಗೆ ಹೊಣೆಗಾರಿಕೆಯನ್ನು ನಿಗದಿಪಡಿಸಿದ ಬಳಿಕವಷ್ಟೇ ಸರ್ಕಾರ ವಾರ್ಷಿಕೋತ್ಸವ ಆಚರಿಸಬೇಕಿತ್ತು ಎಂದು ಒತ್ತಾಯಿಸಿದ್ದಾರೆ. ಇದು ಮಹಿಳಾ ಸಬಲೀಕರಣವಲ್ಲ, ದೊಡ್ಡ ಹಗರಣ ಎಂದು ಆರೋಪಿಸಿದ ಅವರು, ಮಾಸಿಕ ಗೌರವಧನ ಪಡೆಯಲು ಮಹಿಳಾ ಫಲಾನುಭವಿಗಳು ಕಚೇರಿಯಿಂದ ಕಚೇರಿಗೆ ಅಲೆಯುವಂತಾಗಿದೆ ಎಂದರು.

ಕಳೆದ ಮೂರು ವರ್ಷಗಳಿಂದ ಗೃಹಲಕ್ಷ್ಮಿ ಯೋಜನೆಯ ಹೆಸರಿನಲ್ಲಿ ಸರ್ಕಾರ ಭ್ರಷ್ಟಾಚಾರ, ಅಕ್ರಮ ಮತ್ತು ಹಣದ ದುರುಪಯೋಗದಲ್ಲಿ ತೊಡಗಿದೆ. ಇಂತಹ ಪರಿಸ್ಥಿತಿಯಲ್ಲಿ ಮೂರನೇ ವರ್ಷಾಚರಣೆಯನ್ನು ಯಾವ ಆಧಾರದ ಮೇಲೆ ಆಚರಿಸಲಾಗುತ್ತಿದೆ? ಇದು “ನಾಚಿಕೆಗೇಡಿನ ಸಂಗತಿ” ಎಂದು ಕಿಡಿಕಾರಿದ್ದಾರೆ.ಇದೇ ವೇಳೆ ಸರ್ಕಾರದ ಹಣ ಸೋರಿಕೆಯಾಗುವುದನ್ನು ತಡೆಯಲು ವಿಫಲವಾಗಿರುವ ಸರ್ಕಾರ, ಹೊಸ ಪರಿಶೀಲನಾ ವ್ಯವಸ್ಥೆಗಾಗಿ ಹೆಚ್ಚುವರಿಯಾಗಿ ರೂ.20 ಕೋಟಿ ಸಾರ್ವಜನಿಕ ಹಣ ಖರ್ಚು ಮಾಡಲು ಮುಂದಾಗಿರುವುದನ್ನೂ ಅವರು ಪ್ರಶ್ನಿಸಿದ್ದಾರೆ.ಏತನ್ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ ಪೂರ್ಣಗೊಂಡಿರುವುದಕ್ಕೆ ಭಾನುವಾರ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಯೋಜನೆಯು ರಾಜ್ಯದ ಕೋಟ್ಯಂತರ ಮಹಿಳೆಯರಿಗೆ ಆರ್ಥಿಕ ನೆರವು, ಆತ್ಮವಿಶ್ವಾಸ ಮತ್ತು ಹೆಚ್ಚಿನ ಸ್ವಾವಲಂಬನೆಯನ್ನು ಒದಗಿಸಿದೆ ಎಂದು ಹೇಳಿದರು.ಮಹಿಳೆಯರ ಸಬಲೀಕರಣ ಮತ್ತು ಗೌರವಕ್ಕೆ ಸರ್ಕಾರದ ಬದ್ಧತೆಯನ್ನು ಗೃಹಲಕ್ಷ್ಮಿ ಯೋಜನೆ ಪ್ರತಿಬಿಂಬಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು