ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

2021 ರ ಕೋವಿಡ್ ಕಾಲದಲ್ಲಿ ಅತಿ ಹೆಚ್ಚು ಸಾವಿನ ಸಂಖ್ಯೆ ದಾಖಲಾಗಿದ್ದು ಕರ್ನಾಟಕದಲ್ಲಿ: 2021 ರ CRS ವರದಿ ಬಹಿರಂಗ

2021 ರ ಕೋವಿಡ್ ಕಾಲದಲ್ಲಿ ಅತಿ ಹೆಚ್ಚು ಸಾವಿನ ಸಂಖ್ಯೆ ದಾಖಲಾಗಿದ್ದು ಕರ್ನಾಟಕದಲ್ಲಿ: 2021 ರ CRS ವರದಿ ಬಹಿರಂಗ

2021ರ CRS (ನಾಗರಿಕ ನೋಂದಣಿ ವ್ಯವಸ್ಥೆ) ವರದಿಯು ಇದೇ ಮೇ ತಿಂಗಳ ಆರಂಭದಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ ಕೋವಿಡ್ 19 ಇದ್ದ ಸಂದರ್ಭದಲ್ಲಿನ ಒಟ್ಟಾರೆ ಸಾವಿನ ಸಂಖ್ಯೆಯ ಸರಾಸರಿಯನ್ನು ಹೊರಹಾಕಿದೆ. ಇದರಲ್ಲಿ 2021 ರ ವರ್ಷದಲ್ಲಿ ಕರ್ನಾಟಕದಲ್ಲಿ ಒಟ್ಟಾರೆ ಮರಣ ಪ್ರಮಾಣದಲ್ಲಿ ತೀವ್ರ ಏರಿಕೆಯನ್ನು ತೋರಿಸಿದೆ. ಇದರ ದತ್ತಾಂಶವು 2012 ಮತ್ತು 2020 ರ ನಡುವೆ ರಾಜ್ಯದಲ್ಲಿ ವಾರ್ಷಿಕ ಸರಾಸರಿ ಸಾವುಗಳ ಸಂಖ್ಯೆ 4.5 ಲಕ್ಷವಾಗಿದ್ದರೆ, 2021 ರಲ್ಲಿ ಈ ಸಂಖ್ಯೆ 6.6 ಲಕ್ಷಕ್ಕೆ ಏರಿದೆ – 2 ಲಕ್ಷಕ್ಕೂ ಹೆಚ್ಚು ಸಾವುಗಳ ಹೆಚ್ಚಳವಾಗಿದೆ ಎಂದು ಹೇಳಲಾಗಿದೆ.

2021ರ ವರ್ಷದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 3.5 ಲಕ್ಷ ಸಾವುಗಳಾಗಿದ್ದರೆ, ನಗರ ಪ್ರದೇಶಗಳಲ್ಲಿ 3.2 ಲಕ್ಷ ಸಾವುಗಳ ವರದಿಯಾಗಿವೆ. ಆ ವರ್ಷ ಕರ್ನಾಟಕದಲ್ಲಿ ಸಂಭವಿಸಿದ ಒಟ್ಟು ಸಾವುಗಳಲ್ಲಿ ಪುರುಷರ ಪಾಲು ಶೇ. 60 ರಷ್ಟಿದ್ದು, 4 ಲಕ್ಷ ಸಾವುಗಳು ಸಂಭವಿಸಿವೆ. ಅತಿ ಹೆಚ್ಚು ಸಾವುಗಳು 70 ವರ್ಷ ಮೇಲ್ಪಟ್ಟವರ ಸಂಖ್ಯೆಯಲ್ಲಿ 2.6 ಲಕ್ಷವಾಗಿದ್ದರೆ, ನಂತರದ ಸ್ಥಾನ 55–64 ವರ್ಷ ವಯಸ್ಸಿನವರಲ್ಲಿನ ಸಾವಿನ ಸಂಖ್ಯೆ 1.3 ಲಕ್ಷ ಮತ್ತು ಕನಿಷ್ಠ ಸಾವುಗಳು 1 ರಿಂದ 4 ವರ್ಷ ವಯಸ್ಸಿನವರಲ್ಲಿ ಸಂಭವಿಸಿದ್ದು, 947 ಸಾವುಗಳಾಗಿವೆ.

ಅಚ್ಚರಿ ಮತ್ತು ಆಘಾತಕಾರಿ ಅಂಶ ಏನೆಂದರೆ ಆ ವರ್ಷ 18 ರಾಜ್ಯಗಳಲ್ಲಿ ದಾಖಲಾದ 19.7 ಲಕ್ಷ ಹೆಚ್ಚುವರಿ ಸಾವುಗಳಿಗೆ ಕರ್ನಾಟಕ ಮಾತ್ರ 1.6 ಲಕ್ಷ ಕೊಡುಗೆ ನೀಡಿದೆ. ಇದು ಸಾಂಕ್ರಾಮಿಕ ರೋಗದ ಸಂಖ್ಯೆಯ ವ್ಯಾಪ್ತಿಯನ್ನು ಮತ್ತು ಆ ಸಂದರ್ಭದಲ್ಲಿ ಆಡಳಿತ ವ್ಯವಸ್ಥೆ ಕೋವಿಡ್ ಸಾಂಕ್ರಾಮಿಕದ ನಿಯಂತ್ರಣ ಎತ್ತಿ ತೋರಿಸುತ್ತದೆ.

2021 ರಲ್ಲಿ ಭಾರತವು ಒಂದು ಕೋಟಿಗೂ ಹೆಚ್ಚು ಸಾವುಗಳನ್ನು ದಾಖಲಿಸಿದೆ, ಇದು 2020 ರಲ್ಲಿ 81.2 ಲಕ್ಷ ಸಾವುಗಳಿಂದ 21 ಲಕ್ಷ ಹೆಚ್ಚಾಗಿದೆ. 2019 ರಲ್ಲಿ, ನೋಂದಾಯಿತ ಸಾವುಗಳ ಸಂಖ್ಯೆ 76.4 ಲಕ್ಷ ಎಂದು ಹೇಳಲಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 2021 ರಲ್ಲಿ 3.3 ಲಕ್ಷ ಕೋವಿಡ್ -19 ಸಾವುಗಳನ್ನು ವರದಿ ಮಾಡಿತ್ತು. ವೈದ್ಯಕೀಯ ಮರಣ ಪ್ರಮಾಣೀಕರಣ (MCCD) ವರದಿಯು ಆ ವರ್ಷ ಕೋವಿಡ್ -19 ಕಾರಣದಿಂದಾಗಿ 4.13 ಲಕ್ಷ ಸಾವುಗಳನ್ನು ತೋರಿಸಿದೆ.

ರಿಜಿಸ್ಟ್ರಾರ್ ಜನರಲ್ ಕಚೇರಿ ಇತ್ತೀಚೆಗೆ 2021 ಕ್ಕೆ ಸಂಬಂಧಿಸಿದ ಮೂರು ವರದಿಗಳನ್ನು ಬಿಡುಗಡೆ ಮಾಡಿದೆ. ಅವುಗಳಲ್ಲಿ 1)ಮಾದರಿ ನೋಂದಣಿ ವ್ಯವಸ್ಥೆ (SRS) ಅಂಕಿಅಂಶಗಳ ವರದಿ, 2)ನಾಗರಿಕ ನೋಂದಣಿ ವ್ಯವಸ್ಥೆ (CRS) ವರದಿ ಮತ್ತು 3)ಮರಣದ ಕಾರಣದ ವೈದ್ಯಕೀಯ ಪ್ರಮಾಣೀಕರಣ (MCCD) ವರದಿ.

ಕೋವಿಡ್ ಸಾಂಕ್ರಾಮಿಕ ರೋಗವು ಉತ್ತುಂಗಕ್ಕೇರಿದಾಗ 2021 ರಲ್ಲಿ ಕೋವಿಡ್ -19 ಬಲಿಪಶುಗಳ ಬೃಹತ್ ಎಣಿಕೆಯನ್ನು ಈ ಅಂಕಿಅಂಶಗಳು ಸೂಚಿಸುತ್ತವೆ ಎಂದು ವಿಶ್ಲೇಷಕರು ಹೇಳಿದ್ದಾರೆ.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version