ಕಾಶ್ಮೀರ : ಕನ್ನಡಿಗರ ರಕ್ಷಣೆಗೆ ಸಂತೋಷ್ ಲಾಡ್ ಅವರನ್ನು ಕಾಶ್ಮೀರಕ್ಕೆ ಕಳುಹಿಸಿದ ರಾಜ್ಯ ಸರ್ಕಾರ
ಲಿಂಕ್ ನಕಲಿಸಲಾಗಿದೆ ✓
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಸರ್ಕಾರ ಕಾಶ್ಮೀರಕ್ಕೆ ಕಳುಹಿಸಿದೆ. ಭಯೋತ್ಪಾದಕ ದಾಳಿಗೆ ಸಿಲುಕಿ ಮೃತಪಟ್ಟ ಇಬ್ಬರ ಕುಟುಂಬದ ರಕ್ಷಣೆಗೆ ಮತ್ತು ಮೃತದೇಹವನ್ನು ಆದಷ್ಟು ಬೇಗನೆ ಕರ್ನಾಟಕಕ್ಕೆ ತರಲು ಸಂತೋಷ್ ಲಾಡ್ ಅವರನ್ನು ಕಳುಹಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಂತೋಷ್ ಲಾಡ್ ಕಾಶ್ಮೀರಕ್ಕೆ ಇಂದು ಮುಂಜಾನೆ ತಲುಪಿದ್ದಾರೆ. ಈಗಾಗಲೇ ಮೃತ ಕುಟುಂಬಸ್ಥರ ಭೇಟಿ ಮಾಡಿದ್ದು ಸಾಂತ್ವನ ಹೇಳಿದ್ದಾರೆ.
ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತೋಷ್ ಲಾಡ್ ತಿಳಿಸಿದ್ದಾರೆ.
ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ