ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

“ಆಪರೇಷನ್ ಕಮಲ” ಚರ್ಚೆಯ ನಡುವೆಯೇ ಡಿಕೆಶಿ ಭೇಟಿಯಾದ ಇಬ್ಬರು ಬಿಜೆಪಿ ಶಾಸಕರು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

“ಆಪರೇಷನ್ ಕಮಲ” ಚರ್ಚೆಯ ನಡುವೆಯೇ ಡಿಕೆಶಿ ಭೇಟಿಯಾದ ಇಬ್ಬರು ಬಿಜೆಪಿ ಶಾಸಕರು

ಒಂದು ಕಡೆ ಮಹಾರಾಷ್ಟ್ರದ ಮುಖ್ಯಮಂತ್ರಿ ಲೋಕನಾಥ್ ಶಿಂಧೆ ಚುನಾವಣಾ ಫಲಿತಾಂಶದ ನಂತರ ಕರ್ನಾಟಕದಲ್ಲಿ ಸರ್ಕಾರ ಪತನದ ಬಾಂಬ್ ಸಿಡಿಸಿದರೆ, ಇನ್ನೊಂದು ಕಡೆ ಬಿಜೆಪಿ ಒಬ್ಬೊಬ್ಬರೇ ಶಾಸಕರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ರಹಸ್ಯವಾಗಿ ಭೇಟಿ ಮಾಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಚುನಾವಣಾ ಸಂದರ್ಭದಲ್ಲೇ ಬಿಜೆಪಿ ಪಕ್ಷದಿಂದ ಆಗಲೇ ಒಂದು ಕಾಲು ಹೊರಗಿಟ್ಟಿದ್ದ ಯಶವಂತಪುರದ ಶಾಸಕ ಎಸ್.ಟಿ.ಸೋಮಶೇಖರ್ ಈಗ ರೆಬೆಲ್ ಗೆಳೆಯ ಯಲ್ಲಾಪುರದ ಶಾಸಕ ಶಿವರಾಮ್ ಹೆಬ್ಬಾರ್ ಜೊತೆ ಡಿಕೆ ಶಿವಕುಮಾರ್ ಭೇಟಿ ಮಾಡಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.

ಬಿಜೆಪಿ ನಾಯಕರ ಮೇಲೆ ಮುನಿಸಿಕೊಂಡಿರುವ ಈ ಇಬ್ಬರು ನಾಯಕರು ಕಾಂಗ್ರೆಸ್‌ಗೆ ಸೇರಲು ತುದಿಗಾಲಿನ ಮೇಲೆ ನಿಂತಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್ ಕಾಂಗ್ರೆಸ್‌ಗೆ ಮತ ಹಾಕುವ ಮೂಲಕ ಅಡ್ಡ ಮತದಾನ ಮಾಡಿದ್ದರು. ಇನ್ನು ಶಾಸಕ ಶಿವರಾಮ್ ಹೆಬ್ಬಾರ್ ಮತದಾನ ಮಾಡದೇ ಬಿಜೆಪಿ ಆಘಾತ ನೀಡಿದ್ದರು. ಮತ್ತು ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗಳ ಪರ ಈ ಇಬ್ಬರು ನಾಯಕರು ಪ್ರಚಾರ ಮಾಡದೆ, ಹಿಂದೆ ಸರಿದಿದ್ದಾರೆ.

ಇಬ್ಬರು ಶಾಸಕರು ಹಲವು ದಿನಗಳಿಂದ ಕಾಂಗ್ರೆಸ್ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಇನ್ನು ಶಾಸಕ ಎಸ್‌ಟಿ ಸೋಮಶೇಖರ ಕಾಂಗ್ರೆಸ್ ನಾಯಕರ ಜೊತೆ ಬಹಿರಂಗವಾಗಿಯೇ ಗುರುತಿಸಿಕೊಂಡಿದ್ದಾರೆ. ಅಲ್ಲದೇ ಈ ಇಬ್ಬರೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್‌ಟಿ ಸೋಮಶೇಖರ ಇಂದು ಉಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೆನೆಗೆ ಭೇಟಿ ನೀಡಿದರು. ಇದೇ ವೇಳೆ ಮಾಲೀಕಯ್ಯ ಗುತ್ತೇದಾರ್, ಶಾಸಕ ಗಣೇಶ್ ಅವರೂ ಸಹ ಭೇಟಿ ನೀಡಿದ್ದಾರೆ.

ವಿಷಯಗಳು: #peepal #peepalmedia #politics
PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು