ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಂದಿನ ಚುನಾವಣೆ, ಜನತೆಗೆ ಜೆಡಿಎಸ್ ಮುಖ್ಯ ಸಂದೇಶ ನೀಡಲು ಈ ಸಮಾವೇಶ – ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ

ಮುಂದಿನ ಚುನಾವಣೆ, ಜನತೆಗೆ ಜೆಡಿಎಸ್ ಮುಖ್ಯ ಸಂದೇಶ ನೀಡಲು ಈ ಸಮಾವೇಶ – ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ

ಹಾಸನ: ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆ ದೃಷ್ಟಿಯಿಂದ ಹಾಸನದಲ್ಲಿ ಜ.24ರಂದು ಜೆಡಿಎಸ್‌‍ ಬೆಳ್ಳಿಹಬ್ಬದ ಜನತಾ ಸಮಾವೇಶ ನಡೆಸುವ ಮೂಲಕ ಪಕ್ಷದ ಕಾರ್ಯಕರ್ತರು, ನಾಡಿನ ಜನತೆಗೆ ಸಂದೇಶ ರವಾನಿಸಲಾಗುವುದು ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಸಮಾವೇಶ ನಡೆಯುವ ನಗರ ಹೊರವಲಯದ ಬೂವನಹಳ್ಳಿ ಸಮೀಪ ಇರುವ ಬಿಜಿಎಸ್‌‍ಕೆ ವಸತಿ ಬಡಾವಣೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಜಿಲ್ಲೆ ನಮ್ಮ ಪಕ್ಷಕ್ಕೆ ಕರ್ಮಭೂಮಿ, ಈ ಜಿಲ್ಲೆಯಿಂದಲೇ ಹೊಸದಾಗಿ 2028 ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗೆ ಈ ಪವಿತ್ರ ಭೂಮಿಯಿಂದಲೇ ಸಂಘಟನೆ ಚಾಲನೆ ನೀಡಲಾಗುವುದು ಎಂದರು.ಜಾತ್ಯಾತೀತ ಜನತಾ ದಳದ 25ನೇ ವರ್ಷದ ಬೆಳ್ಳಿಹಬ್ಬನ್ನು ಸಾಂಕೇತಿಕವಾಗಿ ಬೆಂಗಳೂರಿನಲ್ಲಿ ಆಚರಿಸಲಾಗಿದೆ. ಬೆಳ್ಳಿಹಬ್ಬವನ್ನು ಮುಂದಿನ ದಿನಗಳಲ್ಲಿ ರಾಜ್ಯದ 30 ಜಿಲ್ಲೆಯಲ್ಲಿ ಆಚರಿಸಲು ಘೋಷಣೆ ಮಾಡಲಾಗಿತ್ತು. ಅದರಂತೆ ಪ್ರಥಮ ಸಮಾವೇಶವನ್ನು ಜ.24ರಂದು ಹಾಸನದಲ್ಲಿ ನಡೆಸಲಾಗುತ್ತಿದೆ.

ಜಿಲ್ಲೆಯಲ್ಲಿ ಜೆಡಿಎಸ್‌‍ ಮುಗಿಸುವ ಉದ್ದೇಶದಿಂದ ಈಗಿನ ಕಾಂಗ್ರೆಸ್‌‍ ಸರ್ಕಾರ ಹಾಸನದಲ್ಲಿ ಎರಡು ಸಮಾವೇಶ ಮಾಡಿರುವುದನ್ನು ನಾನು ಗಮನಿಸಿದ್ದೇನೆ. ಪ್ರಥಮ ಸಮಾವೇಶ ಹಾಸನದಲ್ಲಿ ನಡೆದ ನಂತರ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲು ದಿನಾಂಕ ನಿಗದಿ ಮಾಡಲಾಗುವುದು ಎಂದು ಹೇಳಿದರು.ದೇವೇಗೌಡರು ಸಹಕಾರ ಸಂಘದ ಮೂಲಕ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದರು. ಅವರ ಇಷ್ಟು ವರ್ಷಗಳ ಸುದೀರ್ಘ ರಾಜಕೀಯ ಜೀವನ ನಡೆದಿರುವುದು ಈ ಜಿಲ್ಲೆಯ ಜನರ ಸಹಕಾರ ಮಹತ್ವದ್ದಾಗಿದೆ. ಹಾಗಾಗಿ ಸಮಾವೇಶ ನಡೆಸಲು ಈ ಜಿಲ್ಲೆಯಲ್ಲೇ ಆಯ್ಕೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಸುಪ್ರೀಂ ಕೋರ್ಟ್‌ ಕೂಡ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವಂತೆ ಸೂಚಿಸಿದೆ.ಸದ್ಯದಲ್ಲೇ ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಕೂಡ ಮುಕ್ತಾಯಗೊಳ್ಳುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷ ಸಂಘಟನೆಗೆ ಇಲ್ಲಿಂದಲೇ ಸಂದೇಶ ರವಾನಿಸಲಾಗುವುದು ಎಂದರು. ಈಗಾಗಲೇ ನಮ್ಮ ಕಾರ್ಯಕರ್ತರು ಹಬ್ಬದ ರೀತಿಯಲ್ಲಿ ಮಾಡಬೇಕೆಂಬ ಉತ್ಸಾಹದಲ್ಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿ ರೂಪುಗೊಳ್ಳಲಿದೆ ಎಂಬ ವಿಶ್ವಾಸ ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.

ವಿಷಯಗಳು: #news #peepalmedia #state politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು