ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಈ ಬಾರಿಯ ಮುಂಗಾರು, ಜೂನ್‌ಗೂ ಮೊದಲೆ ಕರ್ನಾಟಕಕ್ಕೆ ಮಳೆ

ಈ ಬಾರಿಯ ಮುಂಗಾರು, ಜೂನ್‌ಗೂ ಮೊದಲೆ ಕರ್ನಾಟಕಕ್ಕೆ ಮಳೆ

ಬೆಂಗಳೂರು : ಈ ಬಾರಿಯ ಮುಂಗಾರು ಋತುವಿನಲ್ಲಿ ವಾಡಿಕೆಗಿಂತಲೂ ಹೆಚ್ಚಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯು ಏಪ್ರಿಲ್‌ನಲ್ಲೇ ಮುನ್ಸೂಚನೆ ಕೊಟ್ಟಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೂ ನಾಲ್ಕು ತಿಂಗಳು ಮುಂಗಾರು ಋತುವಿನಲ್ಲಿ ಹೆಚ್ಚಿನ ಮಳೆಯು ಸುರಿಯುವ ಸಾಧ್ಯತೆ ಇದೆ. ಈ ಬಾರಿ ಶೇಕಡ 105ರಷ್ಟು ಮಳೆಯಾಗಲಿದೆ ಹಾಗೂ ಸರಾಸರಿ 87 ಸೆಂ.ಮೀ. ಮಳೆಯಾಗುವುದಾಗಿ ಅಂದಾಜಿಸಲಾಗಿದೆ. ಈ ಅವಧಿಯಲ್ಲಿ ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ಒಡಿಶಾ, ಛತ್ತೀಸಗಢ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ ಜಮ್ಮು ಮತ್ತು ಕಾಶ್ಮೀರ, ಲಡಾಖ್, ತಮಿಳುನಾಡು, ಬಿಹಾರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಸುರಿಯುವ ಮುನ್ಸೂಚನೆ ಇದೆ.

ಇನ್ನೇನು ಕೆಲವು ವಾರಗಳಲ್ಲೇ ಬೇಸಿಗೆಯ ಕಾವು ತಣ್ಣಗೆ ಮಾಡಲು ಮುಂಗಾರು ಮಳೆಯ ಪ್ರವೇಶ ಆಗಲಿದೆ. 16 ವರ್ಷಗಳ ಬಳಿಕ ಈ ವರ್ಷ ಮುಂಗಾರು ಬಹಳ ಬೇಗನೆ ನೈರುತ್ಯ ಭಾಗಕ್ಕೆ ಬರುತ್ತಿದೆ. ಅಷ್ಟೇ ಅಲ್ಲದೇ, ಈ ಬಾರಿ ಹಿಂದಿನ ವರ್ಷಗಳಿಗಿಂತ ಮಳೆಯ ಅಬ್ಬರವು ಜೋರಾಗಿರುತ್ತದೆ. ಮುಂಗಾರು ಶೀಘ್ರ ಆಗಮನದ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿದೆ. ನೈರುತ್ಯ ಮುಂಗಾರು ಸಾಮಾನ್ಯವಾಗಿ ಜೂನ್ 1ರ ಬಳಿಕ ಕೇರಳಕ್ಕೆ ಆಗಮಿಸುತ್ತಿತ್ತು. ಈ ಬಾರಿ ಅದಕ್ಕಿಂತಲೂ ನಾಲ್ಕು ದಿನ ಮುಂಚಿತವಾಗಿ, ಮೇ 27 ರಂದು ಕೇರಳ ಕರಾವಳಿಯನ್ನು ತಲುಪಲಿದೆ. ಈ ಸಲದ ಖಾರಿಫ್‌ ಬಿತ್ತನೆಯ ಋತುವಿನ ಮೇಲೆ ಒಳ್ಳೆಯ ಪರಿಣಾಮವು ಮುಂಗಾರು ಮಳೆಯಿಂದ ಆಗುವ ನಿರೀಕ್ಷೆ ಇದೆ.

ಕರ್ನಾಟಕದಲ್ಲಿ ಯಾವಾಗಿಂದ ಮುಂಗಾರು ಮಳೆ

ಈ ಬಾರಿ ಬೇಸಿಗೆಯಲ್ಲೂ ಆಗಾಗ್ಗೆ ಮಳೆಯ ಸಿಂಚನ ಕರ್ನಾಟಕದ ಹಲವು ಭಾಗಗಳಲ್ಲಿ ಆಗಿದೆ. ಬೇಸಿಗೆಯ ತಾಪವು ಮಳೆಯಿಂದಾಗಿ ಕಡಿಮೆಯಾಗಿದೆ. ಮೇ ಮೂರನೇ ವಾರ ಕೂಡ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇರೋದಾಗಿ ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿದೆ. ಈ ಮಳೆ ಮತ್ತು ಬಿಸಿಲಿನ ಆಟಗಳು ಮುಗಿಯೋಷ್ಟರಲ್ಲೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ ಆಗಲಿದೆ. ಸಾಮಾನ್ಯವಾಗಿ ಕೇರಳಕ್ಕೆ ಮುಂಗಾರು ಪ್ರವೇಶ ಆಗಿ ಮೂರು ನಾಲ್ಕು ದಿನಗಳಲ್ಲೇ ಕರ್ನಾಟಕಕ್ಕೂ ಮಳೆಗಾಲ ಶುರುವಾಗುತ್ತೆ.

2024ರಲ್ಲಿ ಕರ್ನಾಟಕಕ್ಕೆ ಜೂನ್‌ 4 ರಂದು ಮುಂಗಾರು ಪ್ರವೇಶ ಆಗಿತ್ತು. ಈ ಬಾರಿ ಕೇರಳಕ್ಕೆ ಮೇ 27 ಕ್ಕೆ ಆಗಮಿಸುತ್ತಿದ್ದು, ಕರ್ನಾಟಕಕ್ಕೆ ಮೇ 30 ಅಥವಾ 31ಕ್ಕೆ ಪ್ರವೇಶ ಮಾಡುವ ನಿರೀಕ್ಷೆ ಇದೆ. ಅಂದರೆ, ರಾಜ್ಯಕ್ಕೆ ಸಾಮಾನ್ಯ ದಿನಗಳಿಗಿಂತ 5 ರಿಂದ 6 ದಿನ ಮುಂಚಿತವಾಗಿ ಮುಂಗಾರು ಆಗಮನವಾಗುವ ಸಾಧ್ಯತೆ ಇದೆ. 2009ರಲ್ಲಿ ಮೇ 23 ರಂದೇ ಮುಂಗಾರು ಕೇರಳವನ್ನು ಪ್ರವೇಶಿಸಿತ್ತು. ಅದು ಅತ್ಯಂತ ವೇಗವಾಗಿ ಬಂದ ಮಾನ್ಸೂನ್ ಆಗಿತ್ತು, ಹಾಗೂ ಆ ವರ್ಷ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿತ್ತು. ಈ ಬಾರಿಯೂ ಶೀಘ್ರ ಮುಂಗಾರು ಪ್ರವೇಶ ಆಗ್ತಿರೋದ್ರಿಂದ ಈ ಸಲವೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ವಿಷಯಗಳು: #karnataka #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು