ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

RBI ಗೆ ಬೆದರಿಕೆ ಮೇಲ್: ಮೂವರ ಬಂಧನ..!

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

RBI ಗೆ ಬೆದರಿಕೆ ಮೇಲ್: ಮೂವರ ಬಂಧನ..!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಾಜೀನಾಮೆ ನೀಡಬೇಕು ಇಲ್ಲವಾದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ), ಐಸಿಐಸಿಐ ಬ್ಯಾಂಕ್‌ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಕಳುಹಿಸಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ಮೂವರನ್ನು ಬಂಧಿಸಿದೆ.

ಗುಜರಾತ್‌ನ ವಡೋದರಾದಲ್ಲಿ ಈ ಮೂವರನ್ನು ಬಂಧಿಸಲಾಗಿದೆ. ಒಬ್ಬನನ್ನು ಆದಿಲ್ ರಫೀಕ್ ಎಂದು ಗುರುತಿಸಲಾಗಿದ್ದು, ಇನ್ನೊಬ್ಬನನ್ನು ಆತನ ಸೋದರ ಸಂಬಂಧಿ ಮತ್ತು ಇನ್ನೊಬ್ಬನನ್ನು ಆತನ ಸ್ನೇಹಿತ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆದರಿಕೆ ಇಮೇಲ್‌ಗಳ ಹಿಂದಿನ ಉದ್ದೇಶವನ್ನು ತಿಳಿಯಲು ಅಧಿಕಾರಿಗಳು ಬಂಧಿತ ವ್ಯಕ್ತಿಗಳನ್ನು ಪ್ರಶ್ನಿಸಿದ್ದಾರೆ. ಸೀತಾರಾಮನ್ ರಾಜೀನಾಮೆ ನೀಡದಿದ್ದರೆ ಆರ್‌ಬಿಐ, ಐಸಿಐಸಿಐ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ ಕಚೇರಿಗಳ ಮೇಲೆ ದಾಳಿ ನಡೆಸಲಾಗುವುದು ಎಂದು ಇಮೇಲ್‌ಗಳನ್ನು ಕಳುಹಿಸಲು ಬಳಸಿದ ಸಾಧನವನ್ನು ವಶಕ್ಕೆ ಪಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಬೆದರಿಕೆ ಈ ಮೇಲ್‌ ಮೂಲಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲಾಗಿತ್ತು. ಮುಂಬೈನ ಆರ್‌ಬಿಐ ಕಚೇರಿ, ಎಚ್‌ಡಿಎಫ್‌ಸಿ ಮತ್ತು ಐಸಿಐಸಿಐ ಸೇರಿದಂತೆ 11 ಸ್ಥಳಗಳಲ್ಲಿ ಬಾಂಬ್‌ಗಳನ್ನು ಸ್ಫೋಟಿಸಲಾಗುವುದು ಎಂದು ಮೇಲ್‌ ಕಳುಹಿಸಿ ಬೆದರಿಸಲಾಗಿತ್ತು. ಇ-ಮೇಲ್‌ನಲ್ಲಿ ನಮೂದಿಸಲಾದ ಎಲ್ಲಾ ಸ್ಥಳಗಳನ್ನು ಅಧಿಕಾರಿಗಳು ನಿಕಟವಾಗಿ ಪರಿಶೀಲಿಸಿದ್ದಾರೆ. ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ ಎಂಬುದು ದೃಢಪಟ್ಟಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಖಿಲಾಫತ್ ಇಂಡಿಯಾ’ ಹೆಸರಿನಲ್ಲಿ ಬೆದರಿಕೆ ಇ-ಮೇಲ್ ಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು