ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಟೀಸರ್‌ ನಲ್ಲಿ ಅಶ್ಲೀಲತೆ ಟಾಕ್ಸಿಕ್‌ ತಂಡಕ್ಕೆ ಶಾಕ್‌, ದೂರು ದಾಖಲು

ಟೀಸರ್‌ ನಲ್ಲಿ ಅಶ್ಲೀಲತೆ ಟಾಕ್ಸಿಕ್‌ ತಂಡಕ್ಕೆ ಶಾಕ್‌, ದೂರು ದಾಖಲು

ರಾಕಿಂಗ್ ಸ್ಟಾರ್ ಯಶ್ (Actor Yash) ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ (Toxic) ಟೀಸರ್ (Teaser) ಎರಡು ದಿನಗಳ ಹಿಂದೆ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಮೊದಲ 24 ಗಂಟೆಗಳಲ್ಲೇ 5 ಕೋಟಿಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡು ವ್ಯಾಪಕ ಗಮನ ಸೆಳೆದಿದೆ. ಆದರೆ ಈ ಜನಪ್ರಿಯತೆಯ ನಡುವೆಯೇ, ಟೀಸರ್‌ನಲ್ಲಿರುವ ವಿಷಯದ ಬಗ್ಗೆ ವಿವಾದ ಶುರುವಾಗಿದೆ.

ಟಾಕ್ಸಿಕ್ ಟೀಸರ್‌ನಲ್ಲಿ ಅಶ್ಲೀಲ ದೃಶ್ಯಗಳು ಹಾಗೂ ವಯಸ್ಕರಿಗೆ ಮಾತ್ರ ಸೂಕ್ತವಾದ ಅಂಶಗಳಿವೆ ಎಂದು ಆರೋಪಿಸಿ, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಅಧ್ಯಕ್ಷರಿಗೆ ಅಧಿಕೃತ ದೂರು ನೀಡಲಾಗಿದೆ. ವಕೀಲ ಲೋಹಿತ್ ಹನುಮಪುರ ಅವರು ಸಲ್ಲಿಸಿರುವ ದೂರಿನಲ್ಲಿ, ಟೀಸರ್ ಸಾರ್ವಜನಿಕ ನೈತಿಕತೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಮತ್ತು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಟಾಕ್ಸಿಕ್ ಚಿತ್ರವನ್ನು ‘A’ ಪ್ರಮಾಣಪತ್ರದೊಂದಿಗೆ ಮಾತ್ರ ಬಿಡುಗಡೆ ಮಾಡಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ. ಜೊತೆಗೆ, ವಯಸ್ಕ ವಿಷಯಗಳನ್ನು ಒಳಗೊಂಡಿರುವ ಟೀಸರ್ ಅನ್ನು ತಕ್ಷಣವೇ ತೆಗೆದುಹಾಕಲು ಅಥವಾ ಸೂಕ್ತವಾಗಿ ತಿದ್ದುಪಡಿ ಮಾಡಲು ಚಿತ್ರ ನಿರ್ಮಾಪಕರಿಗೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ, ಸೆನ್ಸಾರ್ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು