ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲಾರಿ ಕ್ಯಾಬಿನ್ನಿನಲ್ಲಿ ಹವಾನಿಯಂತ್ರಣ ವ್ಯವಸ್ಥೆ ಕಡ್ಡಾಯ: ಕರಡು ಅನುಮೋದಿಸಿದ ಕೇಂದ್ರ ಸರ್ಕಾರ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಲಾರಿ ಕ್ಯಾಬಿನ್ನಿನಲ್ಲಿ ಹವಾನಿಯಂತ್ರಣ ವ್ಯವಸ್ಥೆ ಕಡ್ಡಾಯ: ಕರಡು ಅನುಮೋದಿಸಿದ ಕೇಂದ್ರ ಸರ್ಕಾರ

ಇನ್ನು ಮುಂದೆ N2 ಮತ್ತು N3 ವರ್ಗಗಳಿಗೆ ಸೇರಿದ ಲಾರಿಗಳ ಕ್ಯಾಬಿನ್ನಿನಲ್ಲಿ ಎಸಿ ಆಳವಡಿಸುವುದು ಕಡ್ಡಾಯವಾಗಲಿದ್ದು ಈ ಕುರಿತು ಕೇಂದ್ರ ಸರಕಾರ ಕರಡು ಮಸೂದೆ ತಯಾರಿಸಿದೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕೆಲ ದಿನಗಳ ಹಿಂದೆ ಈ ಬಗ್ಗೆ ಮಾಹಿತಿ ನೀಡಿದ್ದರು. ಇದೀಗ ಹವಾನಿಯಂತ್ರಣ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವ ಕರಡು ಅಧಿಸೂಚನೆಗೂ ಸರ್ಕಾರದ ಒಪ್ಪಿಗೆ ಸಿಕ್ಕಿದೆ. ಈ ಮಾಹಿತಿಯನ್ನು ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.

ರಸ್ತೆ ಸುರಕ್ಷತೆಯಲ್ಲಿ ಟ್ರಕ್ ಚಾಲಕರ ಪಾತ್ರ ದೊಡ್ಡದು, ಎಸಿ ಕ್ಯಾಬಿನ್ ಇದ್ದರೆ ಚಾಲಕರಿಗೆ ನೆಮ್ಮದಿ: ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ತಮ್ಮ ಟ್ವೀಟಿನಲ್ಲಿ, “ಎನ್2 ಮತ್ತು ಎನ್3 ವರ್ಗದ ಟ್ರಕ್‌ಗಳ ಕ್ಯಾಬಿನ್‌ನಲ್ಲಿ ಹವಾನಿಯಂತ್ರಣ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಲು ಕರಡು ಅಧಿಸೂಚನೆಗೆ ಅನುಮೋದನೆ ನೀಡಲಾಗಿದೆ. ರಸ್ತೆ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಟ್ರಕ್ ಚಾಲಕರು ಪ್ರಮುಖ ಪಾತ್ರ ವಹಿಸುತ್ತಾರೆ. ಈ ನಿರ್ಧಾರವು ಟ್ರಕ್ ಡ್ರೈವರ್‌ಗಳಿಗೆ ಆರಾಮದಾಯಕ ಕೆಲಸದ ಪರಿಸ್ಥಿತಿಗಳನ್ನು ಒದಗಿಸುವಲ್ಲಿ ಪ್ರಮುಖ ಮೈಲಿಗಲ್ಲಾಗಿದೆ, ಇದು ಅವರ ದಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಡ್ರೈವಿಂಗ್‌ ಮಾಡುವಾಗಿನ ಆಯಾಸದ ಸಮಸ್ಯೆಯನ್ನು ಪರಿಹರಿಸುತ್ತದೆ.” ಎಂದಿದ್ದಾರೆ.

2025ರ ವೇಳೆಗೆ ಟ್ರಕ್ ಕ್ಯಾಬಿನ್‌ನಲ್ಲಿ ಎಸಿ ಕಡ್ಡಾಯ

ಇತ್ತೀಚೆಗೆ ಸಭೆಯೊಂದರಲ್ಲಿ ಲಾರಿಗಳು 2025ರೊಳಗೆ ಎಸಿ ಆಳವಡಿಸಿಕೊಳ್ಳುವುದು ಕಡ್ಡಾಯವಾಗಲಿದೆ ಎಂದಿದ್ದರು.

ಟ್ರಕ್ ಕ್ಯಾಬಿನ್‌ನಲ್ಲಿ ಎಸಿ ವೆಚ್ಚ ಹೆಚ್ಚಳಕ್ಕೆ ವಿರೋಧ: ಗಡ್ಕರಿ

ಕಾರ್ಯಕ್ರಮದಲ್ಲಿ ಟ್ರಕ್ ಚಾಲಕರ ಬಗ್ಗೆ ಕಳವಳ ವ್ಯಕ್ತಪಡಿಸಿದ ನಿತಿನ್ ಗಡ್ಕರಿ, ‘ನಮ್ಮ ಚಾಲಕರು 43.47 ಡಿಗ್ರಿಯಷ್ಟು ಕಠಿಣ ತಾಪಮಾನದಲ್ಲಿ ವಾಹನಗಳನ್ನು ಓಡಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ವಾಹನ ಚಲಾಯಿಸುವ ಚಾಲಕರ ಸ್ಥಿತಿಯನ್ನು ನಾವೇ ಊಹಿಸಿಕೊಳ್ಳಬೇಕು. ಸಚಿವನಾದ ಕೂಡಲೇ ನಾನು ಎಸಿ ಕ್ಯಾಬಿನ್‌ಗಳನ್ನು ಪರಿಚಯಿಸಲು ಉತ್ಸುಕನಾಗಿದ್ದೆ. ಆದರೆ ಟ್ರಕ್‌ಗಳ ಬೆಲೆ ಹೆಚ್ಚಾಗುತ್ತದೆ ಎಂದು ಕೆಲವರು ಇದನ್ನು ವಿರೋಧಿಸಿದರು. ಇಂದು ಎಲ್ಲಾ ಲಾರಿಗಳ ಕ್ಯಾಬಿನ್‌ ಎಸಿ ಕ್ಯಾಬಿನ್‌ ಆಗಿರಬೇಕೆನ್ನುವ ನಿರ್ಧಾರಕ್ಕೆ ನಾನು ಸಹಿ ಮಾಡಿದ್ದೇನೆʼ ಎಂದು ಹೇಳಿದ್ದಾರೆ.

ವಿಷಯಗಳು: #karnataka #peepal #peepalmedia
PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು