ತುಮಕೂರು ರಸ್ತೆ ಅಪಘಾತದಲ್ಲಿ 9 ಪ್ರಯಾಣಿಕರು ಸಾವು: ಪ್ರಧಾನಿ ಮೋದಿ ಸಂತಾಪ
ಲಿಂಕ್ ನಕಲಿಸಲಾಗಿದೆ ✓
ತುಮಕೂರು: ತುಮಕೂರು ರಸ್ತೆ ಅಪಘಾತದಲ್ಲಿ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ತುಮಕೂರಿನ ಶಿರಾ ರಸ್ತೆಯ ಬಾಲೇನಹಳ್ಳಿ ಗೇಟ್ ಬಳಿ ಲಾರಿ ಮತ್ತು ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿ 14 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತವು ಹೃದಯ ವಿದ್ರಾವಕ. ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.
Peepal Media
Peepal Media · ಬ್ರೇಕಿಂಗ್ ಸುದ್ದಿ ವಿಭಾಗ