ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೆಸರಿಗೆ ಮಾತ್ರ ವಿಶ್ವವಿದ್ಯಾಲಯಗಳು: ಉತ್ತರ ಕರ್ನಾಟಕಕ್ಕೆ ಘೋರ ಅನ್ಯಾಯ

PPeepal Media

Peepal Media ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಹೆಸರಿಗೆ ಮಾತ್ರ ವಿಶ್ವವಿದ್ಯಾಲಯಗಳು: ಉತ್ತರ ಕರ್ನಾಟಕಕ್ಕೆ ಘೋರ ಅನ್ಯಾಯ

ಕಳೆದ ಬಜೆಟ್ಟಿನಲ್ಲಿ ಏಳು ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದ ಸರಕಾರವು ಈಗ ವಿಚಿತ್ರ ಷರತ್ತುಗಳನ್ನು ಹಾಕುವ ಮೂಲಕ ಈ ಜಿಲ್ಲೆಗಳ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಈ ವಿವಿಗಳಿಗೆ ಯಾವುದೇ ಹೊಸ ಜಮೀನು ಮಂಜೂರು ಮಾಡದೆ, ಯಾವುದೇ ಹೊಸ ಸಿಬ್ಬಂದಿ ನೇಮಿಸದಂತೆ ಷರತ್ತಿನಲ್ಲಿ ತಿಳಿಸುವ ಮೂಲಕ ಉತ್ತರ ಕರ್ನಾಟಕ ಮತ್ತು ಕರ್ನಾಟಕ ಇತರ ಜಿಲ್ಲೆಗಳಿಗೆ ಘೋರ ಅನ್ಯಾಯವನ್ನು ಎಸಗಿದೆ.
ಉನ್ನತ ಶಿಕ್ಷಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಸಹಿ ಮಾಡಿರುವ ಕರ್ನಾಟಕ ಸರ್ಕಾರದ ನಡಾವಳಿಗಳ ಅಧಿಕೃತ ಆದೇಶ ಪೀಪಲ್ ಮೀಡಿಯಾಗೆ ಲಭ್ಯವಾಗಿದ್ದು, ಹಿಂದುಳಿದ ಜಿಲ್ಲೆಗಳಿಗೆ ವಿಶೇಷವಾಗಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ಜನರ ಕನಸಿಗೆ ತಣ್ಣೀರೆರಚಿರುವುದು ಸ್ಪಷ್ಟವಾಗುತ್ತದೆ.

ಪ್ರಸ್ತುತ ಹೊಸ ವಿವಿಗಳನ್ನು ಘೋಷಿಸಲಾಗಿರುವ ಏಳು ಜಿಲ್ಲೆಗಳಲ್ಲಿ, ನಾಲ್ಕು ಉತ್ತರ ಕರ್ನಾಟಕದವು. ಬಹುತೇಕ ಎಲ್ಲವೂ ಹಿಂದುಳಿದ ಜಿಲ್ಲೆಗಳು, (ಹಾಸನ ಹೊರತುಪಡಿಸಿ) ಕಳೆದ ಬಜೆಟ್ಟಿನಲ್ಲಿ ಈ ಜಿಲ್ಲೆಗಳಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಘೋಷಿಸಲಾಗಿತ್ತು. ಈಗ ಷರತ್ತುಗಳನ್ನು ನೋಡಿದರೆ, ಇರುವ ಸ್ನಾತಕೋತ್ತರ ಕೇಂದ್ರಗಳನ್ನೇ ವಿವಿಗಳೆಂದು ಘೋಷಿಸಿ ಕೈ ತೊಳೆದುಕೊಂಡಿದೆ ಸರ್ಕಾರ. ಹೊಸ ಕಟ್ಟಡವಾಗಲಿ, ಸಿಬ್ಬಂದಿಯಾಗಲಿ, ಭೂಮಿಯಾಗಲಿ ಮಂಜೂರಾಗದ ಇರುವ ವ್ಯವಸ್ಥೆಗೇ ಹೊಸ ಹೆಸರಿಟ್ಟು ವಿವಿ ಘೋಷಣೆಯೆಂದರೆ ಅದನ್ನು ಹೇಗೆ ಒಪ್ಪುವುದೆನ್ನುವುದು ಜನಸಾಮಾನ್ಯರ ಪ್ರಶ್ನೆಯಾಗಿದೆ.

ಸಾಂಪ್ರದಾಯಿಕ ವಿವಿಗಳಿಗಿಂತ ಭಿನ್ನವಾಗಿ “ತಂತ್ರಜ್ಞಾನದ ಗರಿಷ್ಠ ಬಳಕೆ”ಯೊಂದಿಗೆ ಹೆಚ್ಚುವರಿ ಮಾನವ ಸಂಪನ್ಮೂಲ ಬಳಸದೇ ಈ ವಿವಿಗಳನ್ನು ಅಸ್ತಿತ್ವಕ್ಕೆ ತರಲಾಗುತ್ತಿದೆಯಂತೆ! ಇದರ ಅರ್ಥವೇನು? ಈಗ ಕಾರ್ಯನಿರ್ವಹಿಸುತ್ತಿರುವ ವಿವಿಗಳು ತಂತ್ರಜ್ಞಾನ ಬಳಸಿಕೊಳ್ಳದೆ, ಮಾನವ ಸಂಪನ್ಮೂಲ ಪೋಲು ಮಾಡುತ್ತಿವೆಯೇ? ಹೊಸ ವಿವಿಗಳು ಗರಿಷ್ಠ ತಂತ್ರಜ್ಞಾನ ಬಳಸಿಕೊಳ್ಳಬಹುದಾದರೆ ಹಳೆಯ ವಿವಿಗಳು ಯಾಕೆ ಬಳಸಿಕೊಳ್ಳಲಾಗದು?

ಈ ಜಿಲ್ಲೆಗಳ ಜನರು ತಮ್ಮ ಜಿಲ್ಲೆಗೂ ವಿವಿ ಬಂತು ಎಂದು ಹರ್ಷಪಟ್ಟಿದ್ದರು. ಈಗ ಇರುವ ಸ್ನಾತಕೋತ್ತರ ಕೇಂದ್ರಕ್ಕೇ ಬೋರ್ಡು ಬದಲಾಯಿಸುತ್ತಿದೆ ಸರ್ಕಾರ‌. ಉಳಿದಿರುವುದು ಜಮೀನು, ಕಟ್ಟಡ ವರ್ಗಾವಣೆಯ ತಾಂತ್ರಿಕ ಕೆಲಸಗಳು ಮಾತ್ರ. ಇದನ್ನೇ ಹೊಸ ವಿಶ್ವ ವಿದ್ಯಾಲಯ ಸ್ಥಾಪನೆಯೆನ್ನುವುದಾದರೆ ಇದನ್ನು ಕೇವಲ ಗಿಮಿಕ್‌ ಎನ್ನದೆ ಬೇರೆ ಯಾವ ಹೆಸರಿನಿಂದ ಕರೆಯಲು ಸಾಧ್ಯ?

ವಿವಿಗಳ ಸ್ಥಾಪನೆಗೆ ಸಂಬಂಧಸೊದಂತೆ ಸರಕಾರವು ಒಟ್ಟು 12 ಷರತ್ತುಗಳನ್ನು ವಿಧಿಸಿದ್ದು, ಮೊದಲ ಮೂರು ಷರತ್ತುಗಳು ಈ‌ ಕೆಳಕಂಡಂತಿವೆ.

  1. ನೂತನ 07 ವಿಶ್ವವಿದ್ಯಾಲಯಗಳು ಪ್ರಸ್ತುತ ಇರುವ ಸ್ನಾತಕೋತ್ತರ ಕೇಂದ್ರಗಳಲ್ಲಿಯೇ ಕಾರ್ಯನಿರ್ವಹಿಸತಕ್ಕದ್ದು,
  2. ನೂತನ 07 ವಿಶ್ವವಿದ್ಯಾಲಯಗಳ ಸ್ಥಾಪನೆಗಾಗಿ ಯಾವುದೇ ಜಮೀನನ್ನು ಖರೀದಿಸುವಂತಿಲ್ಲ ಹಾಗೂ ಹೊಸ ಕಟ್ಟಡಗಳನ್ನು ನಿರ್ಮಿಸುವಂತಿಲ್ಲ.
  3. ಈಗಾಗಲೇ ಮಾತ್ರ ವಿಶ್ವವಿದ್ಯಾಲಯಗಳಿಗೆ ಮಂಜೂರಾಗಿರುವ ಹುದ್ದೆಗಳಲ್ಲಿ ಅವಶ್ಯ ಹುದ್ದೆಗಳನ್ನು ಈ 07 ನೂತನ ವಿಶ್ವವಿದ್ಯಾಲಯಗಳಿಗೆ ಬಳಸಿಕೊಳ್ಳುವುದು ಹಾಗೂ ಯಾವುದೇ ಹೊಸ ಹುದ್ದೆಗಳನ್ನು ಸೃಜಿಸುವಂತಿಲ್ಲ. ಈ ಉದ್ದೇಶಕ್ಕಾಗಿ ಯಾವುದೇ ಹೊಸ ಹುದ್ದೆಗಳನ್ನು ಸೃಜಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತಿಲ್ಲ.
ಆದೇಶ ಪ್ರತಿಗಳು

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು