ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆ

ಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆ

ಬೆಂಗಳೂರು: ತಮ್ಮ ಶೈಕ್ಷಣಿಕ ಅರ್ಹತೆ ವಿಚಾರವಾಗಿ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ನಾನು ಅಫಿಡವಿಟ್ಟು ಹಾಕಿದ್ದೇನೆ, ಪ್ರಧಾನಿ ಮೋದಿಯವರ ಡಿಗ್ರಿ ಏನಿದೆ, ನನ್ನ ವಿದ್ಯಾರ್ಹತೆ ಕುರಿತು ಸಾರ್ವಜನಿಕವಾಗಿ ಚರ್ಚಿಸಲು ಸಿದ್ಧರಿರುವುದಾಗಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣಪತ್ರದ ಬಗ್ಗೆ ಆರ್​ಟಿಐ ಮೂಲಕವೂ ಮಾಹಿತಿ ಲಭ್ಯವಿಲ್ಲ, ತಾವು ಮೋದಿ ಅವರಿಗಿಂತ ಹೆಚ್ಚು ವಿದ್ಯಾರ್ಹತೆ ಹೊಂದಿದ್ದೇನೆ, ಅವರಿಗಿಂತ ಚೆನ್ನಾಗಿ ಇಂಗ್ಲೀಷ್ ನಲ್ಲಿ ಮಾತನಾಡಬಲ್ಲೆ ಎಂದರು. ಕಾನ್ವೆಂಟ್ ದಲಿತ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ತಾವು‘ಗ್ರಾಫಿಕ್ ಡಿಸೈನರ್ ಎಂದು ಇಡೀ ಜಗತ್ತಿಗೆ ಗೊತ್ತಿದೆ, ಅದರಲ್ಲಿ ಏನು ತಪ್ಪಿದೆ, ಆರೋಪಿಸಿದವರ ನಾಯಕರ ಮಕ್ಕಳೇ ಕಾನ್ವೆಂಟ್ ಶಾಲೆಗೆ ಹೋಗಿ ಕಲಿತವರು, ನಾನು ಅದಮಾರು ಮಠ ಶಾಲೆಯಲ್ಲಿ ಓದಿದವನು, ಮೋದಿಯವರಿಗಿಂತ ಉತ್ತಮ ಶೈಕ್ಷಣಿಕ ಅರ್ಹತೆ ಹೊಂದಿದವನು ನಾನು, ಅವರಿಗೆ ಕನ್ನಡ ಬರುವುದಿಲ್ಲ ಬಿಡಿ, ನನಗೂ ಹಿಂದಿ ಬರುತ್ತದೆ, ಸಂಸ್ಕೃತ ಕೂಡ ಓದಲು ಬರುತ್ತದೆ ಎಂದರು. ನಾರಾಯಣಸ್ವಾಮಿ ಅವರು ಯಾವುದೇ ಭಾಷೆ, ಯಾವುದೇ ವಿಷಯದ ಕುರಿತು ಯಾವುದೇ ಸಮಯದಲ್ಲಿ ಚರ್ಚೆಗೆ ಬರಬಹುದು ಎಂದು ಸವಾಲು ಹಾಕಿದ್ದಾರೆ.

ಇದೇ ವೇಳೆ, ವಂದೇ ಮಾತರಂ ಕುರಿತು ತಮ್ಮ ಜ್ಞಾನದ ಮಿತಿ ಒಪ್ಪಿಕೊಂಡ ಪ್ರಿಯಾಂಕ್ ಖರ್ಗೆ, ಇತರರ ಸಾಮರ್ಥ್ಯವನ್ನೂ ಪ್ರಶ್ನಿಸಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಹಳ್ಳಿ ಗುಗ್ಗುಎಂದು ಕರೆದಿದ್ದಕ್ಕೆ ಕ್ಷಮೆಯಾಚಿಸಬೇಕೆಂಬ ಬಿಜೆಪಿ ನಾಯಕ ಎನ್. ರವಿಕುಮಾರ್ ಅವರ ಬೇಡಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, ರವಿಕುಮಾರ್ ಗೆ ಯಾವಾಗ ಕೋಟ್ಯಂತರ ಜನರ ಬೆಂಬಲ ಸಿಕ್ಕಿತು, ಅವರಿಗೆ ಅಷ್ಟು ಬೆಂಬಲ ಸಿಕ್ಕಿದರೆ ಸಿಎಂ ಆಗೋದಿಕ್ಕೆ ಹೇಳಿ ಎಂದರು.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು