ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸದಾ ಧನಾತ್ಮಕ ವಿಷಯಗಳತ್ತ ನಾವು ಗಮನ ಹರಿಸಬೇಕು – ಸಾಹಿತಿ ಬಾನು ಮುಷ್ತಾಕ್

ಸದಾ ಧನಾತ್ಮಕ ವಿಷಯಗಳತ್ತ ನಾವು ಗಮನ ಹರಿಸಬೇಕು – ಸಾಹಿತಿ ಬಾನು ಮುಷ್ತಾಕ್

ಹಾಸನ : ವಿದ್ಯಾರ್ಥಿಗಳು ಸಮಯಕ್ಕೆ ಆದ್ಯತೆ ನೀಡಬೇಕು. ಸಕಾರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಉನ್ನತ ಗುರಿ ತಲುಪಬೇಕು ಎಂದು ಅಂತಾರಾಷ್ಟ್ರೀಯ ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಅವರು ಸಲಹೆ ನೀಡಿದರು. ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಉನ್ನತಿ ಎಜುಕೇಷನ್‌ ಟ್ರಸ್ಟ್‌ನ ಎ.ಪಿ.ಜೆ. ಪಿಯು ಕಾಲೇಜಿನ ಆಡಳಿತ ಮಂಡಳಿಯಿಂದ ಪಿಯುಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ನವೋನ್ನತಿ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮನುಷ್ಯ ತನ್ನ ಹೃದಯದಲ್ಲಿ ಮಾನವೀಯತೆಗೆ ಜಾಗ ಕೊಡಬೇಕು. ಸತ್ಕಾರ್ಯ, ಇನ್ನೊಬ್ಬರಿಗೆ ಒಳಿತು ಬಯಸುವ ಗುಣ ನಮ್ಮದಾಗಬೇಕೆಂದರೆ ಸದಾ ಧನಾತ್ಮಕ ವಿಷಯಗಳತ್ತ ಗಮನ ಹರಿಸಬೇಕು. ಆಧುನಿಕ ದಿನಗಳಲ್ಲಿ ಮೊಬೈಲ್‌ ಪ್ರಭಾವ ಹೆಚ್ಚಾಗುತ್ತಿದೆ. ಅದರಲ್ಲಿ ಒಳಿತು-ಕೆಡಕು ಎರಡೂ ಇರುತ್ತದೆ. ವಿದ್ಯಾರ್ಥಿಗಳು ತಮ್ಮ ಕಲಿಕೆಗೆ ಬೇಕಾದುದನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕೆಂದರು.

ನಾವು ಯಾವ ಬೀಜ ಬಿತ್ತುತ್ತೇವೆಯೋ ಅದೇ ಫಲ ಸಿಗುತ್ತದೆ. ಇದನ್ನು ವಿದ್ಯಾರ್ಥಿಗಳು ಗಮನದಲ್ಲಿಟ್ಟುಕೊಳ್ಳಬೇಕು ಎಂದರು. ಸಂಪನ್ಮೂಲ ವ್ಯಕಿ ಡಾ. ರಾಹುಲ್‌ ದೇವರಾಜ್‌ ಅವರು ಮಾತನಾಡಿ, ಮಕ್ಕಳು ದೊಡ್ಡ ಕನಸುಗಳನ್ನು ಕಾಣಬೇಕು. ನಮ್ಮಿಂದ ಆಗುವುದಿಲ್ಲವೆಂಬ ಸಂಕುಚಿತ ಮನೋಭಾವದಿಂದ ಹೊರಬಂದು ಏನನ್ನಾದರೂ ಸಾಧಿಸುತ್ತೇನೆಂಬ ಛಲವಿದ್ದರೆ ಜೀವನದಲ್ಲಿ ಮುಂದೆ ಬರಬಹುದು. ಮಕ್ಕಳು ಪಠ್ಯಪುಸ್ತಕ ಅಧ್ಯಯನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕೆಂದರು. ಮಹಾರಾಷ್ಟ್ರದಲ್ಲಿ ಐಫೋನ್‌ ಕೊಡಿಸಿ ಎಂದು ಯುವಕನೊಬ್ಬ ಪರ್ವತದಿಂದ ಬಿದ್ದ ಘಟನೆ ಮನಕಲುಕುತ್ತಿದೆ. ಮಗನನ್ನು ಉಳಿಸಲು ಬಂದ ತಂದೆ ಹಾಗು ತಾಯಿ ಇಬ್ಬರು ಪರ್ವತದಿಂದ ಜಿಗಿದು ಸಾವಿಗೆ ಶರಣಾಗಿದ್ದಾರೆ. ವಿದ್ಯಾರ್ಥಿಗಳು ಸರಳತೆ ಮೈಗೂಡಿಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಸಂದೇಶದಂತೆ ಸರಳತೆ ಪಾಲಿಸಬೇಕು. ಜೀವನವನ್ನು ಬ್ರಾಂಡ್‌ ಮಾಡಿಕೊಳ್ಳಬೇಕೆ ಹೊರತು ಮೊಬೈಲ್‌ ಹಾಗು ಧರಿಸುವ ಬಟ್ಟೆಗಳಿಂದ ಅಲ್ಲವೆಂದು ಕಿವಿಮಾತು ಹೇಳಿದರು. 2025ರ ಸಾಲಿನ ಪಿಯುಸಿಯಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್‌, ಜಿಲ್ಲೆಗೆ ತೃತೀಯ ಸ್ಥಾನ ಹಾಗು ನೀಟ್‌ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿನಿ ಹೆಚ್‌.ಜಿ. ಅರ್ಪಿತಾ ಅವರಿಗೆ 1 ಲಕ್ಷ ರೂ. ನಗದು ಪುರಸ್ಕಾರವನ್ನು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ.ಕೆ.ದೇವರಾಜ್‌,ಸಂಸ್ಥಾಪಕ -ನಿರ್ದೇಶಕ ರಾದ ಡಿ.ಮುರಳಿ ನೀಡಿದರು. ಪ್ರಾಂಶುಪಾಲ ರಾಮಣ್ಣ ಮಾತನಾಡಿದರು. ಕಾಲೇಜು ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು