ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ; ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ : ಸಿಎಂ ಸಿದ್ದರಾಮಯ್ಯ

PPeepal Media Desk
ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ; ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 29: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಅವರು ಇಂದು ತಮ್ಮ ನಿವಾಸದಲ್ಲಿ ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದರು.

ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ
ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ . ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈ ಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದರು.

ಆದರೆ ಗೊಂದಲ ಸೃಷ್ಟಿಯಾಗಿದೆ. ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿದ್ದಾರೆ ಎಂದರು.   ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿದರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.

ಉಪಹಾರ ಸಭೆಯಲ್ಲಿ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್, ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು. ಉಪಹಾರ ಸಭೆಯಲ್ಲಿ ಏನೂ ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್  ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಪಕ್ಷದ ವರಿಷ್ಠರಾದ ವೇಣುಗೋಪಾಲ್ ಅವರು ಪೊನ್ನಣ್ಣ ಅವರಿಗೆ ಕರೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಉಪಾಹಾರಕ್ಕೆ ಕರೆಯಲು ಸೂಚಿಸಿದ್ದರು. ಡಿ.ಕೆ ಶಿವಕುಮಾರ್ ಅವರಿಗೂ ಇದನ್ನೇ ತಿಳಿಸಿದರು. ಡಿ.ಕೆ. ಶಿವಕುಮಾರ್ ಅವರೇ, ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಆಹ್ವಾನವಿತ್ತಿದ್ದರು. ಮತ್ತೊಂದು ದಿನ ಊಟಕ್ಕೆ ಬರೋಣ ಎಂದು ತಿಳಿಸಿ ನಮ್ಮ ಮನೆಗೇ ಉಪಾಹಾರಕ್ಕೆ ಕರೆದೆವು ಎಂದರು.

2028 ರಲ್ಲಿ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ತೀರ್ಮಾನ: ಕಾರ್ಯತಂತ್ರಗಳ ಬಗ್ಗೆ ಚರ್ಚೆ
ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028 ರ  ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಕಾರ್ಪೋರೇಷನ್, ತಾಲ್ಲೂಕು , ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028 ರಲ್ಲಿ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ.  2022 ರ ವಿಧಾನ ಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ ಎಂದರು.

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ,  ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದೆ. ನಾವು  ವಿರೋಧ ಪಕ್ಷದವರನ್ನು ಸಮರ್ಥವಾಗಿ ಇವರಿಗೆ ಎದುರಿಸಿದ್ದೇವೆ ಮುಂದೆಯೂ ಎದುರಿಸುತ್ತೇವೆ. ಬಿಜೆಪಿ,  ಜೆಡಿಎಸ್ ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ. ಅದಕ್ಕೆ ಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸಿಕೊಂಡಿದ್ದೇವೆ ಎಂದರು.

ಮಾಧ್ಯಮಗಳು ಗೊಂದಲ ಸೃಷ್ಟಿಸಿವೆ
ಇತ್ತೀಚೆಗೆ ಅಧಿಕಾರ ಹಸ್ತಾತ್ಮ್ಯರದ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ ಎಂದು ಆರೋಪಿಸಿದ ಸಿಎಂ, ಬಿಜೆಪಿ , ಜೆಡಿಎಸ್ ಪಕ್ಷಗಳು  ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ ವಿರೋಧ ಪಕ್ಷಗಳು ಏನೇ ಸುಳ್ಳು ಆರೋಪಗಳನ್ನು ಮಾಡಿದರೂ ಅವನ್ನೆಲ್ಲಾ ಸಮರ್ಥವಾಗಿ ಎದುರಿಸುವ ಕೆಲಸ ಮಾಡುತ್ತೇವೆ ಎಂದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು