Home ರಾಜ್ಯ ಹಾಸನ ಸ್ವಚ್ಛತಾ ಟೆಂಡರ್ ಬಿಲ್ ಪಡೆಯಲು ಲಂಚ: ನಗರಸಭೆ ಅಧಿಕಾರಿಗಳು ಲೋಕಾ ಬಲೆಗೆ

ಸ್ವಚ್ಛತಾ ಟೆಂಡರ್ ಬಿಲ್ ಪಡೆಯಲು ಲಂಚ: ನಗರಸಭೆ ಅಧಿಕಾರಿಗಳು ಲೋಕಾ ಬಲೆಗೆ

0

ಹಾಸನ : ಹಾಸನಾಂಬೆ ಜಾತ್ರಾ ಮಹೋತ್ಸವದಲ್ಲಿ ನೀಡಿದ ಸ್ವಚ್ಛತಾ ಟೆಂಡರ್ ಬಿಲ್ ಪಡೆಯಲು ನಗರಸಭೆಗೆ ಬಂದಾಗ ಲಂಚ ಪಡೆಯುವಾಗ ನಗರಸಭೆ ಆಯುಕ್ತ ನರಸಿಂಹಮೂರ್ತಿ ಮತ್ತು ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಕೆ.ಆರ್. ವೆಂಕಟೇಶ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ ಗುರುವಾರ ಮದ್ಯಾಹ್ನ ನಡೆದಿದೆ. ಬೇಕಾದರೇ ನಗರಸಭೆ ಆಯುಕ್ತರನ್ನ ಬಂಧಿಸಿ, ಎ.ಆರ್.ವೆಂಕಟೇಶ್ ಅವರನ್ನು ಬಿಟ್ಟು ಬಿಡಿ ಎಂದು ಈ ವೇಳೆ ನಗರಸಭೆ ಸದಸ್ಯರು ಲೋಕಾಯುಕ್ತರಲ್ಲಿ ಮನವಿ ಮಾಡಿದ ಘಟನೆ ನಡೆಯಿತು.

ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಚತಾ ಟೆಂಡರ್ ಬಿಲ್ ನೀಡಲು ಒಂದುವರೆ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು. ಒಟ್ಟು ೧೦ ಲಕ್ಷದ ೫೦ ಸಾವಿರ ಬಿಲ್ ಹಣ ನೀಡಲು ಒಂದುವರೆ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ನಗರಸಭೆ ಆಯುಕ್ತ ನರಸಿಂಹಮೂರ್ತಿ ಹಾಗೂ ಕೆ.ಆರ್. ವೆಂಕಟೇಶ್. ಗುರುವಾರದಂದು ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಬಾಲು ಹಾಗೂ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆಸಿ ನಗರಸಭೆಯ ಕೆ.ಆರ್.ವೆಂಕಟೇಶ್ ಕಚೇರಿಯಲ್ಲಿ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.

ಹಣದ ಸಮೇತ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಗರಸಭೆ ಆಯುಕ್ತ ನರಸಿಂಹಮೂರ್ತಿ ಕಛೇರಿಯಲ್ಲಿ ತನಿಖೆ ನಡೆಸಿ ನಂತರ ಜೊತೆಯಲ್ಲಿ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಕೆ.ಆರ್. ವೆಂಕಟೇಶ್ ಅವರನ್ನು ಅವರು ಕೆಲಸ ಮಾಡುವ ಕಛೇರಿಗೆ ಕರೆದುಕೊಂಡು ಹೋದರು. ಈ ವೇಳೆ ನಗರಸಭೆಯಲ್ಲಿದ್ದ ನಗರಸಭೆ ಸದಸ್ಯರು ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಕೆ.ಆರ್. ವೆಂಕಟೇಶ್ ಪರ ಬ್ಯಾಟಿಂಗ್ ಆರಂಬಿಸಿದರು. ಕೆ.ಆರ್.ವೆಂಕಟೇಶ್ ತುಂಬಾ ಒಳ್ಳೆಯವರು. ಅವರನ್ನು ಬಿಟ್ಟು ಬಿಡಿ, ಆಯುಕ್ತರನ್ನು ಕರೆದುಕೊಂಡು ಹೋಗುವಂತೆ ಒತ್ತಾಯ ಮಾಡಿ ಘಟನೆ ನಗರಸಭೆ ಆವರಣದಲ್ಲಿ ನಡೆಯಿತು.

ಲಂಚ ಪಡೆಯುವುದರಲ್ಲಿ ವೆಂಕಟೇಶ್ ಪಾತ್ರವಿಲ್ಲ. ನಗರಸಭೆ ಆಯುಕ್ತರು ಹೇಳಿದಂತೆ ಮಾಡಿದ್ದಾರೆ. ಬೇಕಾದರೇ ನಗರಸಭೆ ಆಯುಕ್ತರನ್ನು ಕರೆದುಕೊಂಡು ಹೋಗಿ. ಎ.ಆರ್.ವೆಂಕಟೇಶ್ ಅವರನ್ನು ಬಿಟ್ಟು ಬಿಡಿ ಎಂದು ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ಮುಂದೆ ಒತ್ತಾಯ ಮಾಡುತ್ತಿರುವುದು ಕಂಡು ಬಂದಿತು. ಈ ವೇಳೆ ಲೋಕಾಯುಕ್ತ ಇನ್ಸ್‌ಪೆಕ್ಟರ್ ಬಾಲು ಗರಂ ಆಗಿ ಮಾತನಾಡುತ್ತಾ, ಲಂಚದ ಹಣ ಪಡೆಯುತ್ತಿರುವ ವೇಳೆ ದಾಳಿ ಮಾಡಿದ್ದೇವೆ. ಯಾವ ಅಮಾಯಕ ಅಧಿಕಾರಿಗಳು ಮೇಲೂ ದಾಳಿ ಮಾಡಿಲ್ಲ. ಹಿರಿಯ ಅಧಿಕಾರಿಗಳ ಮಾತು ಕೇಳುವುದನ್ನು ಮೊದಲು ಬಿಡಲಿ. ಲೋಕಾಯುಕ್ತ ನಿಯಮ, ಕಾನೂನಿನಂತೆ ದಾಳಿ ಮಾಡಿದ್ದೇವೆ. ಇನ್ಸ್‌ಪೆಕ್ಟರ್ ಬಾಲು ಗರಂ ಆಗುತ್ತಿದ್ದಂತೆ ಸ್ಥಳದಲ್ಲಿದ್ದ ನಗರಸಭೆ ಸದಸ್ಯರು ಅಲ್ಲಿಂದ ಕಾಲ್ಕಿತ್ತ ಘಟನೆ ನಡೆಯಿತು.

You cannot copy content of this page

Exit mobile version