ವಡೋದರಾ ಸೇತುವೆ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ. ಮಹಿಸಾಗರ ನದಿಗೆ ಕಟ್ಟಲಾಗಿದ್ದ ಸೇತುವೆ ವಾಹನಗಳು ಚಲಿಸುತ್ತಿದ್ದಗಲೇ ಬುಧವಾರ ಏಕಾಏಕಿ ಕುಸಿತಗೊಂಡು ವಾಹನಗಳ ಸಮೇತ ಜನರು ನದಿಗೆ ಬಿದ್ದ ಪರಿಣಾಮ ಸಾವು ಸಂಭವಿಸಿದೆ.
ಸೇತುವೆಯ 10-15 ಮೀಟರ್ ಉದ್ದ ಸ್ಲ್ಯಾಬ್ ಇದ್ದಕ್ಕಿದ್ದಂತೆ ಕುಸಿದು ಈ ದುರಂತ ಸಂಭವಿಸಿದೆ. ಎರಡು ಟ್ರಕ್, ಎರಡು ವ್ಯಾನ್, ಒಂದು ರಿಕ್ಷಾ, ಒಂದು ದ್ವಿಚಕ್ರವಾಹನಗಳು ನದಿಗೆ ಬಿದ್ದಿವೆ. ಘಟನೆಯಲ್ಲಿ ಗಾಯಗೊಂಡಿರುವ ಐಅರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮುಂಜಾನೆಯೂ ಎನ್‌ಡಿಆರ್‌ಎಫ್ ಸಿಬ್ಬಂದಿ, ಸ್ಥಳೀಯ ಅಗ್ನಿಶಾಮಕ ದಳ ಮತ್ತು ಡೈವರ್‌ಗಳ ಜಂಟಿ ತಂಡವು ತ್ವರಿತ ನದಿ ಪ್ರವಾಹಗಳಲ್ಲಿ ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿತು. ಜಿಲ್ಲಾಧಿಕಾರಿ ಅನಿಲ್ ಧಮೇಲಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದರು.
ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ನದಿಯ ಹೋದ ದಿಕ್ಕಿನತ್ತ 4 ಕಿಲೋಮೀಟರ್‌ಗಳವರೆಗೆ ಹುಡುಕಾಟ ನಡೆಸುತ್ತಿವೆ. ಇಲ್ಲಿಯವರೆಗೆ, 15 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಮೂವರು ವ್ಯಕ್ತಿಗಳು ಇನ್ನೂ ಕಾಣೆಯಾಗಿದ್ದಾರೆ, ಕಾಣೆಯಾದ ಇತರ ವ್ಯಕ್ತಿಗಳ ಬಗ್ಗೆ ನಮಗೆ ತಿಳಿಸಲು ಜನರು ನಮ್ಮ ನಿಯಂತ್ರಣ ಕೊಠಡಿಗೆ ಕರೆ ಮಾಡಬಹುದು,” ಎಂದು ಶ್ರೀ ಧಮೇಲಿಯಾ ಸ್ಥಳದಲ್ಲಿ ಸುದ್ದಿಗಾರರಿಗೆ ತಿಳಿಸಿದರು.