Thursday, December 11, 2025

ಸತ್ಯ | ನ್ಯಾಯ |ಧರ್ಮ

ಆರ್‌ಟಿಒ ಕಚೇರಿಗಳಲ್ಲಿ ಬ್ರೋಕರ್ ಹಾವಳಿಗೆ ಬಿತ್ತು ಬ್ರೇಕ್; ಮಧ್ಯವರ್ತಿಗಳು ಕಂಡರೆ ಅಧಿಕಾರಿಗಳೇ ಸಸ್ಪೆಂಡ್‌ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (ಆರ್‌ಟಿಒ) ಮಧ್ಯವರ್ತಿಗಳ ಅಕ್ರಮ ದಂಧೆಗೆ ಇದೀಗ ಸರ್ಕಾರವೇ ಕಟ್ಟೆಚ್ಚರವಾಗಿದೆ. ಮಧ್ಯವರ್ತಿಗಳ ಉಪಸ್ಥಿತಿ ಪತ್ತೆಯಾದರೆ ಸಂಬಂಧಿಸಿದ ಅಧಿಕಾರಿಯನ್ನೇ ನೇರವಾಗಿ ಜವಾಬ್ದಾರಿಯನ್ನಾಗಿ ಮಾಡಿ ಅಮಾನತುಗೊಳಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಠಿಣ ಎಚ್ಚರಿಕೆ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರ್‌ಟಿಒ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಪರವಾನಗಿ, ಕಲಿಕಾ ಪರವಾನಗಿ, ವಾಹನ ನೋಂದಣಿ ಸೇರಿದಂತೆ 24 ಸೇವೆಗಳಿಗೆ ಈಗ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಸೌಲಭ್ಯವನ್ನು ಒದಗಿಸಲಾಗಿದೆ. ಇದರ ಪರಿಣಾಮವಾಗಿ ಜನಸಾಮಾನ್ಯರು ಕಚೇರಿಗಳಿಗೆ ಭೇಟಿ ನೀಡುವ ಅವಶ್ಯಕತೆ ಕಡಿಮೆಯಾಗಿದ್ದು, ಮಧ್ಯವರ್ತಿಗಳ ಪ್ರಭಾವವೂ ತಗ್ಗಬೇಕೆಂದು ಅವರು ಅಭಿಪ್ರಾಯಪಟ್ಟರು.

ಆದರೆ ಮಧ್ಯವರ್ತಿಗಳ ಅಕ್ರಮ ಇನ್ನೂ ಸಂಪೂರ್ಣ ನಿರ್ಮೂಲವಾಗದ ಹಿನ್ನೆಲೆಯಲ್ಲಿ ಕಠಿಣ ಕ್ರಮ ಅವಶ್ಯಕವಾಗಿದೆ ಎಂದು ಸಚಿವರು ತಿಳಿಸಿದರು. “ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಉಪಸ್ಥಿತಿ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ನೇರವಾಗಿ ಹೊಣೆಗಾರರನನ್ನಾಗಿ ಮಾಡಿ ಅಮಾನತುಗೊಳಿಸಲಾಗುತ್ತದೆ,” ಎಂದು ಸ್ಪಷ್ಟಪಡಿಸಿದರು.

ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಅಧಿಕಾರಿ ಅಥವಾ ಸಿಬ್ಬಂದಿಗಳನ್ನು ಭೇಟಿ ಮಾಡುವಂತೆ ಕಚೇರಿಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ ಎಂದು ಸಚಿವರು ಹೇಳಿದರು. ಜನರು ನೇರವಾಗಿ ಸೇವೆಯನ್ನು ಪಡೆದುಕೊಳ್ಳುವ ಮೂಲಕ ಭ್ರಷ್ಟಾಚಾರಕ್ಕೆ ತಡೆಯೊಡ್ಡಬಹುದು ಎಂದು ಅವರು ಮನವಿ ಮಾಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page