Budget 2024-25 l ಕಾಂಗ್ರೆಸ್ ಪ್ರಣಾಳಿಕೆ ಓದಿದ ವಿತ್ತ ಸಚಿವೆಗೆ ಧನ್ಯವಾದಗಳು: ಚಿದಂಬರಂ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ ಮಂಡಿಸಲು ಹೋಗಿ ಕಾಂಗ್ರೆಸ್‌ನ 2024ರ ಲೋಕಸಬೆಯ ಚುನಾವಣಾ ಪ್ರಣಾಳಿಕೆಯನ್ನು ಓದಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಮಂಗಳವಾರ ಕೇಂದ್ರ ಬಜೆಟ್ ಕುರಿತು ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಮೂರನೇ ಅವಧಿಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಇಂದು 2024–25ನೇ ಸಾಲಿನ ಬಜೆಟ್‌ ಮಂಡಿಸಿದರು.ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಚಿದಂಬರಂ, ‘ಕಾಂಗ್ರೆಸ್ ಪ್ರಣಾಳಿಕೆಯ ಪುಟ 30 ರಲ್ಲಿ ವಿವರಿಸಿರುವ ಉದ್ಯೋಗಕ್ಕೆ ಉತ್ತೇಜನ ನೀಡುವ ವಿಚಾರವನ್ನು ಬಜೆಟ್‌ನಲ್ಲಿ ಅಳವಡಿಸಿಕೊಂಡಿದ್ದಾರೆ. ಇದು ನನಗೆ ಸಂತೋಷ ನೀಡಿದೆ ಎಂದಿದ್ದಾರೆ.

ಅದರ ಜತೆಗೆ ಕಾಂಗ್ರೆಸ್‌ ಪ್ರಣಾಳಿಕೆಯ ಪುಟ 11 ರಲ್ಲಿ ನಮೂದಿಸಿರುವ ಭತ್ಯೆಯೊಂದಿಗೆ ಅಪ್ರೆಂಟಿಸ್‌ಶಿಪ್ ಯೋಜನೆಯನ್ನು ಪರಿಚಯಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಇತರ ಕೆಲವು ವಿಚಾರಗಳನ್ನು ಸಚಿವರು ಆಯವ್ಯಯದಲ್ಲಿ ನಕಲು ಮಾಡಿದ್ದಾರೆ. ತಪ್ಪಿದ ಅಂಶಗಳನ್ನು ನಾನು ಶೀಘ್ರದಲ್ಲೇ ಪಟ್ಟಿ ಮಾಡುತ್ತೇನೆ ಎಂದು ಅವರು ಅವರು ಎಕ್ಸ್‌ ಖಾತೆಯ ಪೋಸ್ಟ್‌ ನಲ್ಲಿ ಬರೆದುಕೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು